ಮಮತಾ ರಾಹುತ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ತಾರಿಣಿ’ ಸಿನಿಮಾ ತೆರೆಗೆ ಸಿದ್ಧವಾಗಿದೆ. ಹೆಣ್ಣು ಭ್ರೂಣ ಹತ್ಯೆ ಕುರಿತು ಜಾಗೃತಿ ಮೂಡಿಸುವ ಕಥಾವಸ್ತು ಚಿತ್ರದ್ದು. ಸಿದ್ದು ಪೂರ್ಣಚಂದ್ರ ನಿರ್ದೇಶನದ ಸಿನಿಮಾದ ಇತರೆ ಪ್ರಮುಖ ಪಾತ್ರಗಳಲ್ಲಿ ರೋಹಿತ್‌, ಭವಾನಿ ಪ್ರಕಾಶ್‌ ನಟಿಸಿದ್ದಾರೆ.

ಹೆಣ್ಣು ಭ್ರೂಣ ಹತ್ಯೆಯಂತಹ ಸಮಸ್ಯೆಯ ವಿರುದ್ದ ಸಂದೇಶ ಹೊಂದಿರುವ ಸಿನಿಮಾ ‘ತಾರಿಣಿ’. ಸಿದ್ದು ಪೂರ್ಣಚಂದ್ರ ನಿರ್ದೇಶನ ಮಾಡಿರುವ ಈ ಸಿನಿಮಾದ ಫಸ್ಟ್‌ಲುಕ್‌ ಇತ್ತೀಚೆಗೆ ಬಿಡುಗಡೆ ಆಗಿದೆ. ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು. ಹೆಣ್ಣು ಭ್ರೂಣ ಹತ್ಯೆ ಕುರಿತಾಗಿ ಸರ್ಕಾರ, ಚಿತ್ರರಂಗದ ಹಲವು ತಾರೆಯರು ಸಂದೇಶಗಳನ್ನು ಜಾಗೃತಿಗಳನ್ನು ಮೂಡಿಸಿದ್ದಾರೆ. ಹಾಗಿದ್ದರೂ ಸಹ ಹೆಣ್ಣು ಭ್ರೂಣ ಹತ್ಯೆ ಪೂರ್ಣವಾಗಿ ಕಣ್ಮರೆಯಾಗಿಲ್ಲ. ಹೆಣ್ಣು ಭ್ರೂಣ ಹತ್ಯೆಯಂತಹ ಪಿಡುಗಿನ ವಿರುದ್ಧ ಸಂದೇಶ ಹೊಂದಿರುವ ಸಿನಿಮಾ ಒಂದನ್ನು ನಿರ್ಮಾಣ ಮಾಡಲಾಗಿದೆ. ಲೇಖಕಿ, ಸಾಮಾಜಿಕ ಹೋರಾಟಗಾರ್ತಿ ಬಿ ಟಿ ಲಲಿತಾ ನಾಯಕ್ ಸೇರಿದಂತೆ ಹಲವು ಗಣ್ಯರು ‘ತಾರಿಣಿ’ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ನಿರ್ದೇಶಕ ಸಿದ್ದು ಪೂರ್ಣಚಂದ್ರ, ‘ಈ ಸಿನಿಮಾದ ವಿಶೇಷತೆಯೆಂದರೆ, ನಾಯಕಿ ಮಮತಾ ರಾಹುತ್, ಗರ್ಭಿಣಿ ಆಗಿರುವಾಗಲೇ ಈ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಗರ್ಭಿಣಿ ಕುರಿತಾದ ಚಿತ್ರದಲ್ಲಿ ನಿಜವಾದ ಗರ್ಭಿಣಿಯೇ ನಟಿಸಿದ್ದಾರೆ. ಮಗು ಆದ ಬಳಿಕವೂ ನಟಿಸಿದ್ದಾರೆ. ಅವರಿಗೆ ಧನ್ಯವಾದಗಳು. ಹೆಣ್ಣು ಭ್ರೂಣ ಹತ್ಯೆ ಮಾಡಬೇಡಿ ಎಂಬ ಉತ್ತಮ ಸಂದೇಶವಿರುವ ಈ ಚಿತ್ರವನ್ನು ಮಮತಾ ರಾಹುತ್ ಅವರ ಪತಿ ಸುರೇಶ್ ಕೊಟ್ಯಾನ್ ಚಿತ್ರಾಪು ಅವರು Shree Ghajini Productions ಬ್ಯಾನರ್‌ ಅಡಿಯಲ್ಲಿ ನಿರ್ಮಿಸಿದ್ದಾರೆ. ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ’ ಎಂದರು.

‘ತಾರಿಣಿ’ ಪಾತ್ರದಲ್ಲಿ ಮಮತಾ ರಾಹುತ್ ನಟಿಸಿದ್ದು, ನಾಯಕನಾಗಿ ರೋಹಿತ್ ಅಭಿನಯಿಸಿದ್ದಾರೆ. ಭವಾನಿ ಪ್ರಕಾಶ್, ಸುಧಾ ಪ್ರಸನ್ನ, ಡಾ ಸುರೇಶ್ ಚಿತ್ರಾಪು, ಪ್ರಮಿಳಾ ಸುಬ್ರಹ್ಮಣ್ಯಂ, ವಿಜಯಲಕ್ಷ್ಮಿ, ದೀಪಿಕಾಗೌಡ, ಸನ್ನಿ, ತೇಜಸ್ವಿನಿ, ಕವಿತ ಕಂಬಾರ್, ಬೇಬಿ ನಿಶಿತಾ, ಬೇಬಿ ರಿಧಿ, ಪ್ರಿನ್ಸ್ ಜಿತಿನ್ ಕೋಟ್ಯಾನ್, ಮಟಿಲ್ಡಾ ಡಿಸೋಜ, ಅರ್ಚನ ಗಾಯಕ್ವಾಡ್, ಶೀಬಾ ಮೂರ್ತಿ, ಶ್ವೇತಾ, ಚೈತ್ರ, ಮಂಜು ನಂಜನಗೂಡು, ರಘು ಸಮರ್ಥ್ ಇತರ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ‘ನಾನು ಏಳು ತಿಂಗಳ ಗರ್ಭಿಣಿ ಆಗಿದ್ದಾಗ ಈ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡೆ. ಕೆಲವು ದಿನಗಳ ಚಿತ್ರೀಕರಣ ನಂತರ ನನಗೆ ಅವಧಿಗೂ ಕೆಲವು ದಿನಗಳ ಮುಂಚೆಯೇ ಹೆರಿಗೆ ಆಯಿತು. ಆನಂತರ ಕೂಡ ನಾನು ಚಿತ್ರೀಕರಣದಲ್ಲಿ ಭಾಗಿಯಾದೆ. ನನ್ನ ಮಗು ಕೂಡ ಈ ಚಿತ್ರದಲ್ಲಿ ಅಭಿನಯಿಸಿದೆ. ಇದು ನಮ್ಮ ಮೊದಲ ನಿರ್ಮಾಣದ ಸಿನಿಮಾ ಆಗಿರುವ ಕಾರಣ ಹೆಚ್ಚಿನ ಜವಾಬ್ದಾರಿ ನನ್ನ ಮೇಲಿತ್ತು. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ’ ಎನ್ನುತ್ತಾರೆ ನಾಯಕನಟಿ ಮಮತಾ ರಾಹುತ್.

LEAVE A REPLY

Connect with

Please enter your comment!
Please enter your name here