ಗುರು ಸಾವನ್‌ ನಿರ್ದೇಶನದ ‘ಮನ್ ರೇ’ ಸೈಕಲಾಜಿಕಲ್‌ ಥ್ರಿಲ್ಲರ್‌ ಕತೆಯ ಸಿನಿಮಾದ ಚಿತ್ರೀಕರಣ ಮುಂದಿನ ತಿಂಗಳಿಂದ ಆರಂಭವಾಗುತ್ತಿದೆ. ಅಜಯ್‌ ರಾಜ್‌, ಐಶ್ವರ್ಯ ರಂಗರಾಜನ್‌, ರಜನಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಅಜಯ್‍ ರಾಜ್‍ ಮುಖ್ಯ ಭೂಮಿಕೆಯಲ್ಲಿ ನಟಿಸಲಿರುವ ‘ಮನ್‌ ರೇ’ ಚಿತ್ರದ ಚಿತ್ರೀಕರಣ ನವೆಂಬರ್‌ನಲ್ಲಿ ಆರಂಭವಾಗಲಿದೆ. ಗಾಯಕಿ ಐಶ್ವರ್ಯ ರಂಗರಾಜನ್‍ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ರವನ್ನು ಗುರು ಸಾವನ್‍ ನಿರ್ದೇಶಿಸಲಿದ್ದಾರೆ. ಚಿತ್ರದ ಕುರಿತು ಮಾತನಾಡುವ ನಿರ್ದೇಶಕರು, ”ಮನ್‍ ರೇ’ ಎಂದರೆ ಮನಸ್ಸಿನ ಎಕ್ಸ್ ರೇ ಎಂದರ್ಥ. ಮನಸ್ಸಿನ ತೊಳಲಾಟವನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ಕಾನ್ಶಿಯಸ್‍ ಮತ್ತು ಸಬ್‍ ಕಾನ್ಶಿಯಸ್‍ ಮೈಂಡ್‍ ನಡುವಿನ ತೊಳಲಾಟವಿದು. ಸುಮಾರು 8-9 ವರ್ಷಗಳ ಹಿಂದೆಯೇ ಕಥೆ ಮಾಡಿಕೊಂಡಿದ್ದೆ. ಇದೊಂದು ಸೈಕಲಾಜಿಕಲ್‍ ಥ್ರಿಲ್ಲರ್ ಕಥೆ. ಸಂಪೂರ್ಣ ಕಾಲ್ಪನಿಕ’ ಎನ್ನುತ್ತಾರೆ.

ಕನ್ನಡದಲ್ಲಿ ಸೈಕಲಾಜಿಕಲ್‌ ಥ್ರಿಲ್ಲರ್‌ ಕತೆಗಳು ಕೊಂಚ ಕಡಿಮೆ ಎಂದೇ ಹೇಳಬಹುದು. ತಮ್ಮ ಸಿನಿಮಾದ ನಾಯಕನ ಪಾತ್ರದ ಬಗ್ಗೆ ಚಿತ್ರಣ ಕೊಡುವ ನಿರ್ದೇಶಕರು, ‘ಇಲ್ಲಿ ನಾಯಕ ಆರವ್‍ ಭ್ರಮೆಯ ಲೋಕದಲ್ಲಿ ಬದುಕುತ್ತಿರುತ್ತಾನೆ. ಅವನು ವಾಸ್ತವಕ್ಕೆ ಹೇಗೆ ಬರುತ್ತಾನೆ. ಅವನ ಸುತ್ತಲಿನವರು ಅವನ ಈ ಸಮಸ್ಯೆಯಿಂದ ಎಷ್ಟೆಲ್ಲಾ ಕಷ್ಟಪಡುತ್ತಾರೆ ಎನ್ನುವುದನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ಪ್ರಮೋದ್‍ ಶೆಟ್ಟಿ ʼಅರಸ್‍ʼ ಎಂಬ ವೈದ್ಯರ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಪ್ರೀಪ್ರೊಡಕ್ಷನ್‍ ಕೆಲಸಗಳು ನಡೆಯುತ್ತಿವೆ. ಮುಂದಿನ ವರ್ಷ ಮೇನಲ್ಲಿ ಸಿನಿಮಾ ಬಿಡುಗಡೆ ಮಾಡುವ ಯೋಜನೆ ಇದೆ’ ಎನ್ನುತ್ತಾರೆ. ‘ಸರಳವಾಗಿ ಹೇಳಬೇಕು ಎಂದರೆ ಇದು ಮನಸ್ಸಿನೊಳಗೆ ನಡೆಯುವ ಸಂಘರ್ಷ. ಇಲ್ಲಿ ನಾಯಕನೇ ಸಮಸ್ಯೆ. ಅವನಿಂದ ಏನಾಗುತ್ತದೆ ಎಂಬುದೇ ಕಥೆ’ ಎನ್ನುವುದು ಹೀರೋ ಅಜಯ್‌ ರಾಜ್‌ ಮಾತು. ರಜನಿ, ಸೂರ್ಯ ಸಿದ್ಧಾರ್ಥ್, ಅಮಿತ್ ರಾಜ್ ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆದಿ ಛಾಯಾಗ್ರಹಣ, ಅನಿರುದ್ಧ್ ಶಾಸ್ತ್ರಿ ಸಂಗೀತ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here