ಅಪ್ಪ- ಅಮ್ಮನಿಗೆ ಕೊಟ್ಟ ಮಾತು, ಸಂಗಾತಿಯ ನೆನಪು, ಈಡೇರದೇ ಉಳಿದುಬಿಟ್ಟ ಭಾಷೆ, ಕೊನೆಗೂ ಒಪ್ಪಿಕೊಳ್ಳದೇ ತಮ್ಮೊಳಗೆ ಒಂದಾಗಿಸಿಕೊಂಡು ಅಪ್ಪಿಕೊಳ್ಳದೇ ಹೋದ ಕುಟುಂಬ, ಹೆತ್ತವರ ಬೆಂಬಲಕ್ಕೆ ಪ್ರತಿಫಲ ನೀಡಲಾಗದ ಅಸಹಾಯಕತೆ… JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಬಿಗ್ ಬಾಸ್ ಮನೆಯ ಸ್ಪರ್ಧಿಗಳ ಭಾವುಕ ಗಳಿಗೆಗಳು ಸೆರೆಯಾಗಿವೆ.

ಬಿಗ್‌ಬಾಸ್‌ ಮನೆಯಲ್ಲಿ ಫೈರ್‌ ಕ್ಯಾಂಪ್‌ ಎದುರು ಸ್ಪರ್ಧಿಗಳು ತಮ್ಮ ನೋವುಗಳನ್ನು ತೆರೆದಿಟ್ಟಿದ್ದಾರೆ. ತಣ್ಣನೆಯ ರಾತ್ರಿ ಆದರೂ ಸ್ಪರ್ಧಿಗಳ ಕಣ್ಗಳಲ್ಲಿ ಬಿಸಿಯಾದ ಕಂಬನಿ! ಎದುರಲ್ಲಿ ಅಗ್ಗಷ್ಟಿಗೆ ಧಗಧಗ ಉರಿಯುತ್ತಿದ್ದರೆ, ಸ್ಪರ್ಧಿಗಳೆಲ್ಲ ಕುಟುಂಬದವರ ನೆನಪಲ್ಲಿ ಕಣ್ಣೀರಾಗಿದ್ದಾರೆ. ಅಪ್ಪ- ಅಮ್ಮನಿಗೆ ಕೊಟ್ಟ ಮಾತು, ಸಂಗಾತಿಯ ನೆನಪು, ಈಡೇರದೇ ಉಳಿದುಬಿಟ್ಟ ಭಾಷೆ, ಕೊನೆಗೂ ಒಪ್ಪಿಕೊಳ್ಳದೇ ತಮ್ಮೊಳಗೆ ಒಂದಾಗಿಸಿಕೊಂಡು ಅಪ್ಪಿಕೊಳ್ಳದೇ ಹೋದ ಕುಟುಂಬ, ಹೆತ್ತವರ ಬೆಂಬಲಕ್ಕೆ ಪ್ರತಿಫಲ ನೀಡಲಾಗದ ಅಸಹಾಯಕತೆ… ಒಬ್ಬೊಬ್ಬರ ಹೃದಯದಲ್ಲಿಯೂ ಹೇಳಿಕೊಳ್ಳದೇ ಉಳಿದ ಕತೆಗಳನ್ನು ಹಂಚಿಕೊಂಡಿದ್ದಾರೆ. ಮನುಷ್ಯ ಮನುಷ್ಯರ ನಡುವಿನ ಗೋಡೆ ಒಡೆಯಲು ನೋವಿಗಿಂತ ಬೇರೆ ಆಯುಧ ಬೇಕೆ? ಅಗ್ಗಷ್ಟಿಕೆಯ ಬೆಳಕಲ್ಲಿ, ನೆನಪುಗಳ ಕಾವಿನಲ್ಲಿ ನೋವಿನ ನೆಪದಲ್ಲಿ ಮನೆಯ ಸ್ಪರ್ಧಿಗಳೆಲ್ಲ ಒಂದಾಗಿದ್ದಾರೆ. ಒಬ್ಬರ ಕಣ್ಣೀರನ್ನು ಇನ್ನೊಬ್ಬರು ಒರೆಸಿದ್ದಾರೆ. ಒಬ್ಬರ ದುಃಖಕ್ಕೆ ಇನ್ನೊಬ್ಬರು ಹೆಗಲಾಗಿದ್ದಾರೆ. ಒಬ್ಬರಿಗೊಬ್ಬರು ಒದಗಿಬರುತ್ತ ಎಲ್ಲರೂ ಒಂದೇ ಆಗಿದ್ದಾರೆ. JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಬಿಗ್ ಬಾಸ್ ಮನೆಯ ಸ್ಪರ್ಧಿಗಳ ಭಾವುಕ ಗಳಿಗೆಗಳು ಸೆರೆಯಾಗಿವೆ.

LEAVE A REPLY

Connect with

Please enter your comment!
Please enter your name here