ಟಾಸ್ಕ್‌ಗೆ ಆಯ್ಕೆ ಮಾಡುವಾಗ ವಿನಯ್, ‘ನಾನು, ಕಾರ್ತಿಕ್, ಮೈಕಲ್ ಮತ್ತು ತುಕಾಲಿ’ ಎಂದು ಹೇಳಿದ್ದಾರೆ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಂಗೀತಾ, ‘ನಾನು ಯಾಕೆ ಬೇಡ ಅಂತ ಹೇಳಿಲ್ಲ ನೀವು. ಮಹಿಳೆಯರು ಹೀಗೆಯೇ ಗೆಲ್ಲಲು ಸಾಧ್ಯವಾಗ್ತಿಲ್ಲ’ ಎಂದು ತಕರಾರು ತೆಗೆದಿದ್ದಾರೆ.
ಬಿಗ್‌ಬಾಸ್ ಮನೆಯಲ್ಲಿ ಮಹಿಳೆಯರಿಗೆ ಸರಿಯಾದ ಅವಕಾಶ ಸಿಕ್ತಿಲ್ವಾ? -ಇಂಥದ್ದೊಂದು ಪ್ರಶ್ನೆ JioCinema ಇಂದು ಬಿಡುಗಡೆ ಮಾಡಿರುವ ಪ್ರೋಮೊ ನೋಡಿದವರ ಮನಸಲ್ಲಿ ಏಳುವಂತಿದೆ. ಹಾಗಾದ್ರೆ ಏನು ನಡೆದಿದೆ ಬಿಗ್‌ಬಾಸ್ ಮನೆಯಲ್ಲಿ? ಬಿಗ್‌ಬಾಸ್ ಒಂದು ಟಾಸ್ಕ್ ಕೊಟ್ಟಿದ್ದಾರೆ. ಆ ಟಾಸ್ಕ್ ಆಡಲು ನೀರಲ್ಲಿ ಮುಳುಗುವ, ಉತ್ತಮ ಗುರಿ ಹೊಂದಿರುವ ನಾಲ್ಕು ಸದಸ್ಯರ ಅಗತ್ಯ ಇದೆ ಎಂದು ಬಿಗ್‌ಬಾಸ್ ಹೇಳಿದ್ದಾರೆ. ಟಾಸ್ಕ್‌ಗೆ ಆಯ್ಕೆ ಮಾಡುವಾಗ ವಿನಯ್, ‘ನಾನು, ಕಾರ್ತಿಕ್, ಮೈಕಲ್ ಮತ್ತು ತುಕಾಲಿ’ ಎಂದು ಹೇಳಿದ್ದಾರೆ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಂಗೀತಾ, ‘ನಾನು ಯಾಕೆ ಬೇಡ ಅಂತ ಹೇಳಿಲ್ಲ ನೀವು. ಮಹಿಳೆಯರು ಹೀಗೆಯೇ ಗೆಲ್ಲಲು ಸಾಧ್ಯವಾಗ್ತಿಲ್ಲ’ ಎಂದು ತಕರಾರು ತೆಗೆದಿದ್ದಾರೆ. ಇದಕ್ಕೆ ವಿನಯ್, ‘ಮೆನ್, ವುಮನ್ ಎಂದು ಬೇರೆ ಮಾಡಿ ನೋಡುವುದು ಸರಿಯಲ್ಲ. ಈ ಮನೆಯಲ್ಲಿ ನಿನ್ನ ಬಾಯಲ್ಲಿ ಮಾತ್ರ ಯಾಕೆ ಮೆನ್, ವುಮನ್ ಅನ್ನೋ ತಾರತಮ್ಯದ ಮಾತು ಕೇಳಿಸುತ್ತದೆ?’ ಎಂದು ವಿನಯ್ ಗರಂ ಆಗಿದ್ದಾರೆ.
ಇದಕ್ಕೆ ಸಂಗೀತಾ ಕೂಡ ‘ಅವಕಾಶ ಸಿಕ್ತಿದೆ ಅಂತ ಬೇರೆ ವಿಷಯವನ್ನೆಲ್ಲಾ ಇಲ್ಲಿಗೆ ಎಳೆದು ತರಬೇಡಿ’ ಎಂದು ಅಷ್ಟೇ ಗಟ್ಟಿಯಾಗಿ ಮಾತಾಡಿದ್ದಾರೆ. ತನಿಷಾ ಕೂಡ ಸಂಗೀತಾ ವಿರುದ್ಧ, ‘ನೀವು ಆಡಿದ ಎಲ್ಲ ಟಾಸ್ಕ್‌ಗಳಲ್ಲಿಯೂ ಫರ್ಪೆಕ್ಟ್ ಆಗಿ ಆಡಿದ್ದೀರಾ?’ ಎಂದು ಪ್ರಶ್ನಿಸಿದ್ದಾರೆ. ಒಟ್ಟಾರೆ ಮತ್ತೊಮ್ಮೆ ಬಿಗ್‌ಬಾಸ್ ಮನೆಯಲ್ಲಿ ಮಹಿಳೆ – ಪುರುಷರ ನಡುವಿನ ತಾರತಮ್ಯದ ಬಗ್ಗೆ ಚರ್ಚೆ ಶುರುವಾಗಿದೆ. ಅದು ಜೋರಾಗಿಯೂ ಮುಂದುವರಿಯುತ್ತಿದೆ. ಇದರ ಪರಿಣಾಮ ಏನಾಗುತ್ತದೆ ಎನ್ನುವುದನ್ನು ನೋಡಬೇಕು.