ಅನಿರುದ್ಧ್‌ ನಟನೆಯ ‘chef ಚಿದಂಬರ’ ಸಿನಿಮಾದ title track ಬಿಡುಗಡೆಯಾಗಿದೆ. ಶ್ರೀಗಣೇಶ್ ಪರಶುರಾಮ್ ಬರೆದು, ರಿತ್ವಿಕ್ ಮುರಳೀಧರ್ ಸಂಗೀತ ನೀಡಿರುವ ಈ ಹಾಡನ್ನು ನಾಯಕ ಅನಿರುದ್ಧ್ ಅವರೇ ಹಾಡಿದ್ದಾರೆ. ಹಾಡಿನ ಕೆಲವು ಭಾಗ RAP ಶೈಲಿಯಲ್ಲಿದ್ದು ಅದನ್ನು ರೋಹಿತ್ ಅವರು ಹಾಡಿದ್ದಾರೆ.

‘ಜೊತೆ ಜೊತೆಯಲಿ’ ಕಿರುತೆರೆ ಸೀರಿಯಲ್‌ ಮೂಲಕ ಮನೆಮಾತಾದ ಅನಿರುದ್ಧ್‌ ‘chef ಚಿದಂಬರ’ ಚಿತ್ರದೊಂದಿಗೆ ಹಿರಿತೆರೆಗೆ ಮರಳುತ್ತಿದ್ದಾರೆ. ಇಲ್ಲಿಯವರೆಗೆ ಅವರು ನಟಿಸಿರುವ ಸಿನಿಮಾಗಳಿಗೆ ಹೋಲಿಸಿದಲ್ಲಿ ಇಲ್ಲಿ ಸಂಪೂರ್ಣ ಭಿನ್ನ ಕತೆಯಿದೆ. ಎಂ ಆನಂದರಾಜ್‌ ನಿರ್ದೇಶನದಲ್ಲಿ ತಯಾರಾಗುತ್ತಿರುವ ಚಿತ್ರದ ಪೋಸ್ಟರ್‌ಗಳು ಕೂಡ ಇದನ್ನೇ ಹೇಳಿದ್ದವು. chef ಆಗಿ ಕಾಣಿಸಿಕೊಂಡಿರುವ ಅನಿರುದ್ಧ್‌ ಪಾತ್ರದ ಪ್ರಸೆಂಟೇಷನ್‌ ಗಮನ ಸೆಳೆದಿತ್ತು. ಈಗ ಚಿತ್ರದ ಟೈಟಲ್‌ ಟ್ರ್ಯಾಕ್‌ ಬಿಡುಗಡೆಯಾಗಿದೆ. A2 musicನಲ್ಲಿ ಸಾಂಗ್‌ ರಿಲೀಸ್‌ ಆಗಿದೆ. ಶ್ರೀಗಣೇಶ್ ಪರಶುರಾಮ್ ಬರೆದು, ರಿತ್ವಿಕ್ ಮುರಳೀಧರ್ ಸಂಗೀತ ನೀಡಿರುವ ಈ ಹಾಡನ್ನು ನಾಯಕ ಅನಿರುದ್ಧ್ ಅವರೇ ಹಾಡಿದ್ದಾರೆ. ಹಾಡಿನ ಕೆಲವು ಭಾಗ RAP ಶೈಲಿಯಲ್ಲಿದ್ದು ಅದನ್ನು ರೋಹಿತ್ ಅವರು ಹಾಡಿದ್ದಾರೆ.

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ ಎನ್ ನಿರ್ಮಿಸಿರುವ ಚಿತ್ರಕ್ಕೆ ನಿರ್ದೇಶಕರೇ ಕತೆ ಬರೆದಿದ್ದು, ಗಣೇಶ್‌ ಪರಶುರಾಮ್‌ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಉದಯಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, ‘ವಿಕ್ರಾಂತ್ ರೋಣ’ ಖ್ಯಾತಿಯ ಆಶಿಕ್ ಕುಸುಗೊಳ್ಳಿ DI, ನರಸಿಂಹಮೂರ್ತಿ ಸಾಹಸ ನಿರ್ದೇಶನ ಮತ್ತು ಮಾಧುರಿ ಪರಶುರಾಮ್ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ‘ಲವ್ ಮಾಕ್ಟೇಲ್’ ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ ಎಸ್ ಶ್ರೀಧರ್‌, ಶಿವಮಣಿ ಇತರೆ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಮುಕ್ತಾಯ ಹಂತದಲ್ಲಿದ್ದು, ಸದ್ಯದಲ್ಲೇ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ.

LEAVE A REPLY

Connect with

Please enter your comment!
Please enter your name here