ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಕಲ್ಕಿ 2898 AD’ ಟ್ರೇಲರ್‌ ಇದೇ ಜೂನ್‌ 10ರಂದು ರಿಲೀಸ್‌ ಆಗಲಿದೆ. ಅಮಿತಾಭ್ ಬಚ್ಚನ್, ಕಮಲ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ, ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಸಿನಿಮಾ ಇದೇ ಜೂನ್‌ 27ರಂದು ಬಿಡುಗಡೆಯಾಗಲಿದೆ.

ಇತ್ತೀಚೆಗಷ್ಟೇ ‘ಕಲ್ಕಿ 2898 AD’ ಚಿತ್ರತಂಡ ‘ಬುಜ್ಜಿ ಅಂಡ್ ಭೈರವ’ ಸಿರೀಸ್ ರಿಲೀಸ್‌ ಮಾಡಿ ಗಮನ ಸೆಳೆದಿತ್ತು. ಇದೀಗ ಟ್ರೇಲರ್ ಆಗಮನದ ಸುದ್ದಿ ಸಿಕ್ಕಿದೆ. ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ತೆರೆಗೆ ಬರುತ್ತಿರುವ ಚಿತ್ರವಿದು. ತೆಲುಗು ಮತ್ತು ಹಿಂದಿ ಪ್ರೇಕ್ಷಕರು ಮಾತ್ರವಲ್ಲದೆ ಎಲ್ಲರೂ ಪ್ರಭಾಸ್‌ ನಟನೆಯ ಈ ಸಿನಿಮಾಗಾಗಿ ಎದುರುನೋಡುತ್ತಿದ್ದಾರೆ. ಕಲ್ಕಿ ಸಿನಿಮಾ ತಾರಾಗಣದ ವಿಚಾರದಲ್ಲೂ ಕುತೂಹಲ ಮೂಡಿಸಿದೆ. ಅದರಂತೆ ಟ್ರೇಲರ್‌ ಮೂಲಕ ಮತ್ತಷ್ಟು ರೋಚಕತೆ ಉಕ್ಕಿಸಲು ಚಿತ್ರತಂಡ ಸಜ್ಜಾಗಿದೆ. ಜೂನ್‌ 10ರಂದು ಬಹುಭಾಷೆಗಳಲ್ಲಿ ಚಿತ್ರದ ಟ್ರೇಲರ್‌ ಬಿಡುಗಡೆಯಾಗಲಿದೆ.

ಅಮಿತಾಭ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಚಿತ್ರವಿದು. ಪ್ರೊಮೋಷನ್‌ಗಾಗಿ ಚಿತ್ರದ ನಿರ್ಮಾಪಕರು ‘ಬುಜ್ಜಿ ಅಂಡ್ ಭೈರವ’ ಸರಣಿಯನ್ನು ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆ ಮಾಡಿದ್ದರು. ಇದೀಗ ನಿರ್ದೇಶಕ ನಾಗ್ ಅಶ್ವಿನ್‌, ಟ್ರೇಲರ್‌ನಲ್ಲೇನಿರಲಿದೆ ಎಂಬುದನ್ನು ತೋರಿಸಲು ಸಜ್ಜಾಗಿದ್ದಾರೆ. ಟ್ರೇಲರ್ ಬಿಡುಗಡೆಯ ದಿನಾಂಕವನ್ನು ಹೊಸ ಪೋಸ್ಟರ್‌ನೊಂದಿಗೆ ಚಿತ್ರನಿರ್ಮಾಣ ಸಂಸ್ಥೆ ಘೋಷಿಸಿದೆ. ಪರ್ವತದ ಶಿಖರದ ಮೇಲೆ ನಿಂತ ಭಂಗಿಯಲ್ಲಿ ಭೈರವ, ಸೂಪರ್‌ ಹೀರೋ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಸಿನಿಮಾ ಇದೇ ಜೂನ್‍ 27ರಂದು ತೆಲುಗು, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ತೆರೆಕಾಣಲಿದೆ.

LEAVE A REPLY

Connect with

Please enter your comment!
Please enter your name here