ನಟ ಪ್ರಜ್ವಲ್‌ ದೇವರಾಜ್‌ ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಬರ್ತ್‌ಡೇ ಅಂಗವಾಗಿ ಅವರು ನಟಿಸುತ್ತಿರುವ ‘ಕರಾವಳಿ’ ಸಿನಿಮಾದ ನೂತನ ಪೋಸ್ಟರ್‌ ಬಿಡುಗಡೆ ಮಾಡಿದೆ ಚಿತ್ರತಂಡ. ಗುರುದತ್‌ ಗಾಣಿಗ ನಿರ್ದೇಶನದಲ್ಲಿ ತಯಾರಾಗುತ್ತಿರುವ ಚಿತ್ರದ ನಾಯಕಿಯಾಗಿ ಸಂಪದಾ ನಟಿಸುತ್ತಿದ್ದಾರೆ.

ಗುರುದತ್‌ ಗಾಣಿಗ ನಿರ್ದೇಶನದ ‘ಕರಾವಳಿ’ ಸಿನಿಮಾದ ನೂತನ ಪೋಸ್ಟರ್‌ ಬಿಡುಗಡೆಯಾಗಿದೆ. ಚಿತ್ರದ ಹೀರೋ ಪ್ರಜ್ವಲ್‌ ದೇವರಾಜ್‌ ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಬರ್ತ್‌ಡೇ ಅಂಗವಾಗಿ ಚಿತ್ರತಂಡ ಪೋಸ್ಟರ್‌ ರಿಲೀಸ್‌ ಮಾಡಿದೆ. ಪೋಸ್ಟರ್‌ನಲ್ಲಿ ಪ್ರಜ್ವಲ್, ಕೋಣಗಳ ಮಧ್ಯೆ ಒಬ್ಬಂಟಿಯಾಗಿ ಕೊಟ್ಟಿಗೆಯಲ್ಲಿ ಕುಳಿತಿದ್ದಾರೆ. ಗಂಭೀರ ನೋಟ ಬೀರುತ್ತಾ ಕುಳಿತಿರುವ ಪ್ರಜ್ವಲ್ ಅವರ ಸಿಂಪಲ್‌ ಲುಕ್‌ ಸಿನಿಮಾದ ಕತೆಯ ಬಗ್ಗೆ ಕುತೂಹಲ ಮೂಡಿಸುತ್ತದೆ. ಈ ಹಿಂದೆ ಪ್ರಜ್ವಲ್‌ ಯಕ್ಷಗಾನ ಕಂಬಳ, ಮಹಿಷಾಸುರನ ಗೆಟಪ್‌ಗಳಲ್ಲಿ ಕಾಣಿಸಿಕೊಂಡಿದ್ದರು. ಸಹಜವಾಗಿಯೇ ಅವರ ಪಾತ್ರದ ಬಗ್ಗೆ ಕುತೂಹಲವಿದೆ. ಸಿನಿಮಾದಲ್ಲಿ ಪ್ರಜ್ವಲ್, ಯಕ್ಷಗಾನ ಕಲಾವಿದರಾ ಅಥವಾ ಕಂಬಳ ಕೂಡಿಸುವ ಪಾತ್ರವಾ ಎಂದು ಅವರ ಅಭಿಮಾನಿಗಳು ಆಲೋಚಿಸುವಂತಿದೆ.

ಸಿನಿಮಾಗೆ ಈಗಾಗಲೇ 60ರಷ್ಟು ಚಿತ್ರೀಕರಣ ಮುಗಿದಿದೆ. ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ. ಬಹುತೇಕ ಸಿನಿಮಾ ಕರಾವಳಿಯ ಸುತ್ತಮುತ್ತ ಚಿತ್ರೀಕರಣಗೊಂಡಿದೆ. ನಿರ್ದೇಶಕ ಗುರುದತ್‌ ಅವರ ಗಾಣಿಗ ಫಿಲಂಸ್‌ ಹಾಗೂ ವಿಕೆ ಫಿಲಸಂ ಅಸೋಸಿಯೇಷನ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ‘ಇದು ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ಸಿನಿಮಾ ಮೂಡಿ ಬರಲಿದೆ’ ಎನ್ನುತ್ತಾರೆ ನಿರ್ದೇಶಕ ಗುರುದತ್‌ ಗಾಣಿಗ. ಚಿತ್ರಕ್ಕೆ  ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

LEAVE A REPLY

Connect with

Please enter your comment!
Please enter your name here