ಅನಿಲ್ ಕುಮಾರ್ ನಿರ್ದೇಶನದ ‘ಕಲ್ಟ್’ ಸಿನಿಮಾ ಸೆಟ್ಟೇರಿದೆ. ಗೌರಿ ಹಬ್ಬದ ಶುಭ ಸಂದರ್ಭದಲ್ಲಿ ಚಿತ್ರಕ್ಕೆ ಮುಹೂರ್ತ ನೆರವೇರಿದೆ. ‘ಬನಾರಸ್’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಝೈದ್ ಖಾನ್ ನಟನೆಯ ಎರಡನೇ ಚಿತ್ರವಿದು. ರಚಿತಾ ರಾಮ್ ಮತ್ತು ಮಲೈಕಾ ವಸುಪಾಲ್ ಚಿತ್ರದ ಇಬ್ಬರು ನಾಯಕಿಯರು.
‘ಉಪಾಧ್ಯಕ್ಷ’ ಯಶಸ್ವೀ ಸಿನಿಮಾದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ ‘ಕಲ್ಟ್’ ಸಿನಿಮಾಗೆ ಚಾಲನೆ ಸಿಕ್ಕಿದೆ. ಮೊನ್ನೆ ಹಬ್ಬದಂದು ಚಿತ್ರದ ಮುಹೂರ್ತ ನೆರವೇರಿದೆ. ‘ಬನಾರಸ್’ ಚಿತ್ರದ ನಂತರ ಝೈದ್ ಖಾನ್ ನಟಿಸುತ್ತಿರುವ ಚಿತ್ರವಿದು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ದೇಶಕ ಅನಿಲ್ ಕುಮಾರ್ ಅವರ ಶ್ರೀಮತಿ ಆರಂಭ ಫಲಕ ತೋರಿದರು. ಝೈದ್ ಖಾನ್ ಅವರ ಅಜ್ಜಿ(ಸಚಿವ ಜಮೀರ್ ಅಹಮದ್ ಖಾನ್ ಅವರ ತಾಯಿ) ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದರು. ರಚಿತಾ ರಾಮ್ ಮತ್ತು ಮಲೈಕಾ ವಸುಪಾಲ್ ಚಿತ್ರದ ಇಬ್ಬರು ನಾಯಕಿಯರಾಗಿ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ಅಚ್ಯುತ ಕುಮಾರ್, ALL OK ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಪೋಸ್ಟರ್‌ಗಳ ಮೂಲಕ ಸುದ್ದಿಯಾಗಿದ್ದ ಸಿನಿಮಾ ಕುರಿತು ನಿರ್ದೇಶಕ ಅನಿಲ್ ಕುಮಾರ್ ಹೆಚ್ಚು ಮಾಹಿತಿ ಬಿಟ್ಟುಕೊಡುವುದಿಲ್ಲ. ‘ಕಲ್ಟಿಸಂ ಎಂಬ ಶಬ್ದವನ್ನು ಈಗಿನ ಯುವಜನತೆ ಕಲ್ಟ್ ಎಂದು ಹೆಚ್ಚಾಗಿ ಸಂಬೋಧಿಸುತ್ತಾರೆ. ಹಾಗಾಗಿ ಯವಜನತೆಗೆ ಹತ್ತಿರವಾಗಿರುವ ಕಥೆಯುಳ್ಳ ಚಿತ್ರಕ್ಕೆ ಈ ಹೆಸರಿಟ್ಟಿದ್ದೇವೆ’ ಎನ್ನುತ್ತಾರೆ ನಿರ್ದೇಶಕ ಅನಿಲ್ ಕುಮಾರ್. ಲೋಕಿ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ ಎಂ ಪ್ರಕಾಶ್ ಸಂಕಲನ , ರವಿವರ್ಮ ಸಾಹಸ ನಿರ್ದೇಶನ, ಭೂಷಣ್ – ಸಂತು ಮಾಸ್ಟರ್ ನೃತ್ಯ ನಿರ್ದೇಶನ ಚಿತ್ರಕ್ಕೆ ಇರಲಿದೆ.