ರಾಷ್ಟ್ರಪ್ರಶಸ್ತಿ ಪುರಸ್ಕೃತ ಕನ್ನಡ ನಟ ರಿಷಬ್ ಶೆಟ್ಟಿ ಅವರು ಶಿವಾಜಿ ಮಹಾರಾಜ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆ – ‘ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್’. ಸಂದೀಪ್ ಸಿಂಗ್ ನಿರ್ದೇಶಿಸಲಿರುವ ಸಿನಿಮಾದ ಫಸ್ಟ್‌ಲುಕ್ ಪೋಸ್ಟರ್ ಬಿಡುಗಡೆಯಾಗಿದೆ.
‘ಕಾಂತಾರ’ ಸಿನಿಮಾದ ಉತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದ ನಟ ರಿಷಬ್ ಶೆಟ್ಟಿ ಈಗ PAN ಇಂಡಿಯಾ ಹೀರೋ. ಅವರ ‘ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾ ಘೋಷಣೆಯಾಗಿದೆ. ಮರಾಠ ಸಾಮ್ರಾಜ್ಯದ ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಮಹಾರಾಜ್ ಅವರ ಕಥೆಯೀಗ ಸಿನಿಮಾ ರೂಪ ಪಡೆದುಕೊಳ್ಳುತ್ತಿದೆ. ಚಿತ್ರದ ಶೀರ್ಷಿಕೆ ಪಾತ್ರದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿದ್ದಾರೆ. ಚಿತ್ರವನ್ನು ಬಾಲಿವುಡ್‌ನ ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದಾರೆ. ಸಿನಿಮಾದ ಫಸ್ಟ್‌ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಸದ್ಯ ಈ ಐತಿಹಾಸಿಕ ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಫಸ್ಟ್‌ಲುಕ್ ಪೋಸ್ಟರ್ ಜತೆಗೆ ಸಿನಿಮಾದ ರಿಲೀಸ್ ದಿನಾಂಕವನ್ನೂ ಚಿತ್ರತಂಡ ಘೋಷಿಸಿದೆ. 2027ರ ಜನವರಿ 21ರಂದು ಹಿಂದಿ, ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.