ಕಳೆದ ವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಭಾರಿ ಮೆಚ್ಚುಗೆ ಪಡೆದ ‘ಫೋಟೋ’ ಸಿನಿಮಾ ತೆರೆಗೆ ಬರಲಿದೆ. ಉತ್ಸವ್‌ ಗೋನವಾರ ನಿರ್ದೇಶನದ ಚಿತ್ರವನ್ನು ಬಹುಭಾಷಾ ನಟ ಪ್ರಕಾಶ್‌ ರೈ ಅವರು ತಮ್ಮ ‘ನಿರ್ದಿಗಂತ’ದ ಮೂಲಕ ಪ್ರಸೆಂಟ್‌ ಮಾಡುತ್ತಿದ್ದಾರೆ.

ಕಳೆದ ವರ್ಷದಲ್ಲಿ ಸುದ್ದಿಯಲ್ಲಿದ್ದ ಚಿತ್ರಗಳಲ್ಲಿ ‘ಫೋಟೋ’ ಕೂಡ ಒಂದು. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಸಿನಿಮಾ ವಿಮರ್ಶಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿತ್ತು. ಮುಂದೆ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿತು. ಇದೀಗ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆ ನಡೆದಿದೆ. ಬಹುಭಾಷಾ ನಟ ಪ್ರಕಾಶ್‌ ರೈ ಅವರು ತಮ್ಮ ‘ನಿರ್ದಿಗಂತ’ದ ಮೂಲಕ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ರಾಯಚೂರು‌ ಮೂಲದ ಯುವ ಪ್ರತಿಭೆ ಉತ್ಸವ್ ಗೋನವಾರ ಚೊಚ್ಚಲ ಪ್ರಯತ್ನ ಫೋಟೋ. ಕಳೆದ ಏಳು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿರುವ ಅವರು ಈ ಚಿತ್ರದ ಮೂಲಕ ಸ್ವತಂತ್ರ್ಯ ನಿರ್ದೇಶಕರಾಗಿದ್ದಾರೆ.

ಲಾಕ್‌ಡೌನ್‌ ಸಮಯದಲ್ಲಿ ನಡೆದ ಕತೆ ಸುತ್ತ ಫೋಟೋ ಸಿನಿಮಾ ಸಾಗುತ್ತದೆ. ಅಪ್ಪ‌-ಮಗನ ಬಾಂಧವ್ಯ, ಭಾವನಾತ್ಮಕ ಎಳೆ ಇಟ್ಟುಕೊಂಡು ಹಲವು ವಿಷಯಗಳನ್ನು ನೈಜವಾಗಿ ಮನಸ್ಸಿಗೆ ನಾಟುವಂತೆ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಉತ್ಸವ್. ಮಸಾರಿ ಟಾಕೀಸ್ ಬ್ಯಾನರ್‌ನಡಿ ನಿರ್ಮಾಣವಾಗಿರುವ ಫೋಟೋ ಸಿನಿಮಾದಲ್ಲಿ ಮಹಾದೇವ ಹಡಪದ್, ಸಂಧ್ಯಾ ಅರಕೆರೆ, ಜಹಾಂಗೀರ್, ಮತ್ತು ವೀರೇಶ್ ಗೊನ್ವಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ದಿನೇಶ್ ದಿವಾಕರನ್ ಛಾಯಾಗ್ರಹಣ, ರವಿ ಹಿರೇಮಠ್ ಅವರ ಶಬ್ದ ವಿನ್ಯಾಸ, ಶಿವರಾಜ್ ಮೆಹೂ ಸಂಕಲನವಿದೆ.

LEAVE A REPLY

Connect with

Please enter your comment!
Please enter your name here