ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಅಲೆಕ್ಸಾ’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ಇದೊಂದು ಆಕ್ಷನ್‌ – ಥ್ರಿಲ್ಲರ್‌ ಜಾನರ್‌ ಸಿನಿಮಾ. ಜೀವ ನಿರ್ದೇಶನದ ಚಿತ್ರದ ಹೀರೋ ಪವನ್‌ ತೇಜ್‌. ಫಾರ್ಮ್ಯಾಸಿಟಿಕಲ್‌ ಮಾಫಿಯಾ ಕುರಿತೂ ಚಿತ್ರದಲ್ಲಿ ಚರ್ಚಿಸಲಾಗಿದೆ ಎನ್ನುತ್ತಾರೆ ನಿರ್ದೇಶಕರು.

‘ನನಗೆ ನಿಜಜೀವನದಲ್ಲಿ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ನಿರ್ದೇಶಕರು, ನೀವು ಈ ಚಿತ್ರದಲ್ಲಿ ಇನ್ವೆಸ್ಟಿಕೇಶನ್ ಆಫೀಸರ್ ಅಂದ ತಕ್ಷಣ ಒಪ್ಪಿಕೊಂಡೆ. ಸಾಹಸ ದೃಶ್ಯಗಳನ್ನು ನಿಭಾಯಿಸುವ ಆಸೆಯೂ ಈ ಚಿತ್ರದ ಮೂಲಕ ಈಡೇರಿದೆ. ಚಿತ್ರದಲ್ಲಿ ಸಾಹಸ ನಿರ್ದೇಶಕ ರವಿವರ್ಮ ಹಾಗೂ ಮಾಸ್ ಮಾದ ಅವರ ಸಂಯೋಜನೆಯಲ್ಲಿ ನಾನು ಮಾಡಿರುವ ಸಾಹಸ ಸನ್ನಿವೇಶಗಳು ಪ್ರೇಕ್ಷಕರಿಗೆ ಖಂಡಿತ ಇಷ್ಟವಾಗಲಿವೆ’ ಎನ್ನುತ್ತಾರೆ ನಟಿ ಅದಿತಿ ಪ್ರಭುದೇವ. ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಅಲೆಕ್ಸಾ’ ಆಕ್ಷನ್‌ – ಥ್ರಿಲ್ಲರ್‌ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಜೀವ ನಿರ್ದೇಶಿಸಿರುವ ಈ ಸಿನಿಮಾದ ಹೀರೋ ಪವನ್‌ ತೇಜ್‌.

ನಿರ್ದೇಶಕ ಜೀವ ಅವರು ಚಿತ್ರದ ಬಗ್ಗೆ ಮಾಹಿತಿ ನೀಡಿ, ‘ಇದೊಂದು ಮರ್ಡರ್ ಮಿಸ್ಟರಿ. ಕತೆ ಕೇಳಿದ ತಕ್ಷಣ ನಿರ್ಮಾಪಕರು ಇಷ್ಟಪಟ್ಟರು. ಫಾರ್ಮ್ಯಾಸಿಟಿಕಲ್‌ ಮಾಫಿಯಾ ಬಗ್ಗೆ ಚಿತ್ರದಲ್ಲಿ ಮಾಹಿತಿ ಇದೆ. ಚಿತ್ರದ ಎರಡನೇ ಭಾಗವನ್ನು ತೆರೆಗೆ ತರುವ ಆಲೋಚನೂ ಇದೆ’ ಎನ್ನುತ್ತಾರೆ. ನವೆಂಬರ್‌ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರುವ ಯೋಜನೆ ಅವರದು. ಮೈಸೂರು, ಮಡಿಕೇರಿಯಲ್ಲಿ ಬಹುಪಾಲು ಚಿತ್ರೀಕರಣ ನಡೆದಿದೆ. ನಾಗಾರ್ಜುನ್, ಮೇಘಶ್ರೀ, ಮಿಮಿಕ್ರಿ ಗೋಪಿ, ಚಂದ್ರಕಲಾ ಮೋಹನ್ ಚಿತ್ರದ ಇತರೆ ಪ್ರಮುಖ ಕಲಾವಿದರು. Apo ಸಂಗೀತ ನಿರ್ದೇಶನ, ಸತೀಶ್ ಬಿ ಛಾಯಾಗ್ರಹಣ, ಉಮೇಶ್ ಆರ್ ಬಿ ಸಂಕಲನ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here