ಅದಿತಿ ಪ್ರಭುದೇವ ಮತ್ತು ಪವನ್ ತೇಜ್ ಮುಖ್ಯಭೂಮಿಕೆಯಲ್ಲಿರುವ ‘ಅಲೆಕ್ಸಾ’ ಸಿನಿಮಾ ಜನವರಿ 26ರಂದು ತೆರೆಕಾಣಲಿದೆ. ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಜೀವ L J ಕತೆ, ಚಿತ್ರಕಥೆ, ಸಂಭಾಷಣೆ ರಚಿಸಿ ನಿರ್ದೇಶಿಸಿದ್ದಾರೆ.

ಅದಿತಿ ಪ್ರಭುದೇವ ಮತ್ತು ಪವನ್ ತೇಜ್ ಮುಖ್ಯಭೂಮಿಕೆಯಲ್ಲಿರುವ ‘ಅಲೆಕ್ಸಾ’ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಜೀವ L J ಕತೆ, ಚಿತ್ರಕಥೆ, ಸಂಭಾಷಣೆ ರಚಿಸಿ ನಿರ್ದೇಶಿಸಿದ್ದಾರೆ. ನಿರ್ಮಾಣ ವಿ ಚಂದ್ರು ಅವರದು. ಸಿನಿಮಾದಲ್ಲಿ ಅದಿತಿ ಪ್ರಭುದೇವ ವಿಶೇಷ ತನಿಖಾಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಪವನ್ ತೇಜ್ ಚಿತ್ರದ ಹೀರೋ. ‘ನಾಗಿಣಿ’ ಧಾರಾವಾಹಿ ಖ್ಯಾತಿಯ ನಾಗಾರ್ಜುನ್, ಮೇಘಾಶ್ರೀ, ಹನುಮಂತೇಗೌಡ, ಚಂದ್ರಕಲಾ ಮೋಹನ್, ಮಿಮಿಕ್ರಿ ಗೋಪಿ, ಮೈಸೂರು ಮಲ್ಲೇಶ್ ಹಾಗೂ ಮನಮೋಹನ್ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಸಿನಿಮಾಗೆ ಡಾ ವಿ ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆದಿದ್ದು, ಸಾಯಿ ಸತೀಶ್ ಛಾಯಾಗ್ರಹಣ, ಉಮೇಶ್ ಸಂಕಲನ, ರಾಮು ನೃತ್ಯ ನಿರ್ದೇಶನ ಹಾಗೂ ರವಿವರ್ಮ, ಮಾಸ್ ಮಾದ, ವಿಕ್ರಮ್ ಮೋರ್ ಸಾಹಸ ನಿರ್ದೇಶನ ನಿರ್ವಹಿಸಿದ್ದಾರೆ. ಸಿನಿಮಾ ಜನವರಿ 26ರ ಗಣರಾಜ್ಯೋತ್ಸವದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು ಚಿತ್ರವನ್ನು 2023ರ ಡಿಸೆಂಬರ್ 29ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಅಂದು ದರ್ಶನ್ ಅಭಿನಯದ ‘ಕಾಟೇರ’ ಚಿತ್ರ ಬಿಡುಗಡೆಯಾದ್ದರಿಂದ ‘ಅಲೆಕ್ಸಾ’ ಬಿಡುಗಡೆ ಪೋಸ್ಟ್‌ಪೋನ್‌ ಆಯ್ತು. ಇದೀಗ ಗಣರಾಜ್ಯೋತ್ಸವಂದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.

LEAVE A REPLY

Connect with

Please enter your comment!
Please enter your name here