ರಕ್ಷಿತ್‌ ಶೆಟ್ಟಿ ಅವರ Paramvah Studios ನಿರ್ಮಾಣದ ಚಿತ್ರದ ಮುಖ್ಯಭೂಮಿಕೆಯಲ್ಲಿ ಅಂಕಿತಾ ಅಮರ್‌ ಮತ್ತು ವಿಹಾನ್‌ ನಟಿಸುವುದು ಖಾತ್ರಿಯಾಗಿದೆ. ಚಂದ್ರಜಿತ್‌ ಬೆಳ್ಳಿಯಪ್ಪ ನಿರ್ದೇಶನದ ಮ್ಯೂಸಿಕಲ್‌ ಲವ್‌ಸ್ಟೋರಿಗೆ ಮುಂದಿನ ತಿಂಗಳಲ್ಲಿ ಶೀರ್ಷಿಕೆ ನಿಗದಿಯಾಗಲಿದೆ. ಸೆಪ್ಟೆಂಬರ್‌ನಿಂದ ಶೂಟಿಂಗ್‌ ಶುರು.

‘ನಮ್ಮನೆ ಯುವರಾಣಿ’ ಸೀರಿಯಲ್‌ ಖ್ಯಾತಿಯ ಅಂಕಿತಾ ಅಮರ್‌ ಮತ್ತು ‘ಪಂಚತಂತ್ರ’ ಸಿನಿಮಾ ಹೀರೋ ವಿಹಾನ್‌ ಜೋಡಿಯ ನೂತನ ಸಿನಿಮಾ ಸದ್ಯದಲ್ಲೇ ಸೆಟ್ಟೇರಲಿದೆ. ಚಂದ್ರಜಿತ್‌ ಬೆಳ್ಳಿಯಪ್ಪ ನಿರ್ದೇಶಿಸಲಿರುವ ಚಿತ್ರಕ್ಕೆ ಮುಂದಿನ ತಿಂಗಳಲ್ಲಿ ಶೀರ್ಷಿಕೆ ಘೋಷಣೆಯಾಗಲಿದೆ. ಸೆಪ್ಟೆಂಬರ್‌ನಿಂದ ಶೂಟಿಂಗ್‌ ಶುರು. ಇತ್ತೀಚೆಗಷ್ಟೇ Param Vah ಸ್ಟುಡಿಯೋಸ್‌ ತನ್ನ ಅಧಿಕೃತ ಸೋಷಿಯಲ್‌ ಮೀಡಿಯಾ ಹ್ಯಾಂಡಲ್‌ನಲ್ಲಿ ನಟಿ ಅಂಕಿತಾ ಅಮರ್‌ ಅವರ ಜನ್ಮದಿನಕ್ಕೆ ಪೋಸ್ಟ್‌ ಹಾಕಿ ಚಿತ್ರದ ನಾಯಕಿಯ ಕುರಿತು ಸುಳಿವು ನೀಡಿತ್ತು. ಇದೀಗ ಅವರೇ ನಾಯಕಿ ಎಂದು ಅಧಿಕೃತವಾಗಿ ಘೋಷಿಸಿದೆ. ‘ಕಾಲ್‌ ಕೆಜಿ ಪ್ರೀತಿ’, ‘ಪಂಚತಂತ್ರ’ ಚಿತ್ರಗಳ ನಂತರ ವಿಹಾನ್‌ ಈ ಸಿನಿಮಾದೊಂದಿಗೆ ತೆರೆಗೆ ಮರಳುತ್ತಿದ್ದಾರೆ. ರಕ್ಷಿತ್‌ ಶೆಟ್ಟಿ ಅವರ Param Vah ಬ್ಯಾನರ್‌ನಡಿ ಸಿನಿಮಾ ನಿರ್ಮಾಣವಾಗಲಿದೆ. ಈ ರೊಮ್ಯಾನ್ಸ್‌ ಡ್ರಾಮಾ ಸಿನಿಮಾಗೆ ಪ್ರೀಪ್ರೊಡಕ್ಷನ್‌ ಕೆಲಸಗಳು ನಡೆದಿವೆ.

ಚಿತ್ರದಲ್ಲಿ ನಾಯಕನ ಪಾತ್ರಕ್ಕೆ ಮೂರು ಗೆಟಪ್‌ಗಳಿರಲಿವೆ. ಕಾಲೇಜು ವಿದ್ಯಾರ್ಥಿ, ಕ್ರಿಕೆಟ್‌ ಆಟಗಾರ ಹಾಗೂ ಬಿಜಿನೆಸ್‌ ಮ್ಯಾನ್‌ ಆಗಿ ವಿಹಾನ್‌ ಕಾಣಿಸಿಕೊಳ್ಳಲಿದ್ದಾರೆ. ರಕ್ಷಿತ್‌ ಅವರ ಸೆವೆನ್‌ ಆಡ್ಸ್‌ ಟೀಮ್‌ನಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿರುವ ಚಂದ್ರಜೀತ್‌ ಬೆಳ್ಳಿಯಪ್ಪ ಈ ಚಿತ್ರ ನಿರ್ದೇಶಿಸಲಿದ್ದಾರೆ. ಈ ಮೊದಲು ರಿಷಬ್‌ ಶೆಟ್ಟಿ ಅವರ ‘ಕಥಾಸಂಗಮ’ ಸಿನಿಮಾದಲ್ಲಿನ ‘ರೇನ್‌ಬೋ ಲ್ಯಾಂಡ್‌’ ಎಪಿಸೋಡ್‌ ಅನ್ನು ಚಂದ್ರಜಿತ್‌ ನಿರ್ದೇಶಿಸಿದ್ದರು. ಅದಕ್ಕೂ ಮೊದಲು ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಬರವಣಿಗೆಯ ಭಾಗವಾಗಿದ್ದರು. ರೊಮ್ಯಾನ್ಸ್‌ ಡ್ರಾಮಾ ಮತ್ತು ಮ್ಯೂಸಿಕಲ್‌ ಲವ್‌ಸ್ಟೋರಿ ಹಿನ್ನೆಲೆಯ ಸಿನಿಮಾದಲ್ಲಿ ಕಾಲೇಜು ಜೀವನವೂ ಕಾಣಿಸಲಿದೆ. ಅಮೆರಿಕಾದ ನ್ಯೂಯಾರ್ಕ್‌ ಫಿಲಂ ಅಕಾಡೆಮಿಯಲ್ಲಿ ಪದವಿ ಪಡೆದು ಅಲ್ಲಿಯೇ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿರುವ ಶ್ರೀವಾತ್ಸವನ್‌ ಸೆಲ್ವರಾಜನ್‌ ಈ ಸಿನಿಮಾಗೆ ಕ್ಯಾಮರಾ ಹಿಡಿಯಲಿದ್ದಾರೆ. ಇದು ಅವರ ಚೊಚ್ಚಲ ಚಿತ್ರ. ಗಗನ್‌ ಬದೇರಿಯಾ ಸಂಗೀತ ಸಂಯೋಜಿಸಲಿದ್ದಾರೆ.

LEAVE A REPLY

Connect with

Please enter your comment!
Please enter your name here