ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ನಿರ್ದೇಶನದ ‘ಅನಾವರಣ’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ನಟ ಸುದೀಪ್‌ ಟ್ರೇಲರ್‌ ರಿಲೀಸ್‌ ಮಾಡಿ ಶುಭ ಹಾರೈಸಿದ್ದಾರೆ. ಅರ್ಜುನ್‌ ಯೋಗಿ ಹೀರೋ ಆಗಿ ನಟಿಸಿರುವ ಕ್ರೈಂ – ಥ್ರಿಲ್ಲರ್‌ ಸಿನಿಮಾ ಡಿಸೆಂಬರ್‌ 1ರಂದು ತೆರೆಕಾಣುತ್ತಿದೆ.

ಅರ್ಜುನ್‌ ಯೋಗಿ ನಟನೆಯ ‘ಅನಾವರಣ’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ಪ್ರೀತಿ, ಕೊಲೆ, ಕುಟುಂಬ, ಎಮೋಷನ್ ಜೊತೆಗೆ ಸಸ್ಪೆನ್ಸ್ ಅಂಶಗಳಿಂದ ಕೂಡಿರುವ ಚಿತ್ರದ ಟ್ರೇಲರ್ ಅನ್ನು ನಟ ಸುದೀಪ್ ಬಿಡುಗಡೆ ಮಾಡಿ ಶುಭಾಶಯ ಕೋರಿದ್ದಾರೆ. ‘ಮೊದಲ ಬಾರಿಗೆ ಮಂಜು ಹರಿ ನಿರ್ದೇಶನ ಮಾಡಿರುವ, ಅರ್ಜುನ್ ಯೋಗಿ ನಟನೆಯ ಅನಾವರಣ ಸಿನಿಮಾದ ಟ್ರೇಲರ್ ನೋಡಿದೆ. ಅವರ ತಂಡಕ್ಕೆ, ಪರಿಶ್ರಮಕ್ಕೆ ಒಳ್ಳೆದಾಗಲಿ. ಟ್ರೇಲರ್ ನೋಡ್ತಾ ಇರಬೇಕಾದ್ರೆ ಪರಿಚಯಸ್ಥರು ತುಂಬ ಜನ ಸಿನಿಮಾದಲ್ಲಿದ್ದಾರೆ ಅನ್ನಿಸಿತು. ಎಲ್ಲರಿಗೂ ಒಳ್ಳೇದಾಗಲಿ’ ಎಂದಿದ್ದಾರೆ ಸುದೀಪ್‌. ಫ್ಯಾಮಿಲಿ – ಡ್ರಾಮಾ ಜೊತೆಗೆ ಕ್ರೈಮ್ – ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಅನಾವರಣ’ ಚಿತ್ರವನ್ನು ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ನಿರ್ದೇಶಿಸಿದ್ದಾರೆ.

40ಕ್ಕೂ ಹೆಚ್ಚು ಕಿರುಚಿತ್ರಗಳನ್ನು ರೂಪಿಸಿರುವ ಹರೀಶ್‌ ಕುಮಾರ್‌ ಮತ್ತು ಮಂಜುನಾಥ್‌ ಪಿಳ್ಳಪ್ಪ ಅವರ ಚೊಚ್ಚಲ ನಿರ್ದೇಶನದ ಚಿತ್ರವಿದು. ನಮ್ಮ ಸಿನಿಮಾ ಬ್ಯಾನರ್ ನಡಿ ಅದ್ವೈತ್ ಪ್ರಭಾಕರ್, ಆರ್ ರಾಮಚಂದ್ರ, ಸತ್ಯ ರಾಣಿ ಜಿ & ರಚನಾ ಬಿ ಹೆಚ್ ಚಿತ್ರ ನಿರ್ಮಿಸಿದ್ದಾರೆ. ಅರ್ಜುನ್ ಯೋಗಿ, ಸಾರಿಕಾ ರಾವ್ ನಾಯಕ ಹಾಗೂ ನಾಯಕಿಯಾಗಿ ನಟಿಸಿದ್ದು, ಗೌರೀಶ್ ಅಕ್ಕಿ, ನಂದ ಗೋಪಾಲ್, ಹೊನ್ನವಳ್ಳಿ ಕೃಷ್ಣ, ರಥಸಪ್ತಮಿ ಅರವಿಂದ್, ಕಾಮಿಡಿ ಕಿಲಾಡಿ ಸೂರಜ್, ಸೂರ್ಯ, ಸಂತು, ವಾಣಿ, ರಾಜೇಶ್ವರಿ, ಕಮಲಾ, ಯುಕ್ತಾ, ಧರಣಿ ಕುಮಾರ್, ಸಿದ್ದೀ ವಿನಾಯಕ, ಗಿರೀಶ್ ಯು.ಬಿ, ಶಿವರಾಜ್, ರಂಗೋಲಿ ವಿಜಿ, ರಾಜುಹಾಸನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ವೆಂಕಿ UDV ಸಂಕಲನ, ಡಾ ವಿ ನಾಗೇಂದ್ರ ಪ್ರಸಾದ್ ಮತ್ತು ಶಶಿಕುಮಾರ್ ಬೆಳಕವಾಡಿ ಸಾಹಿತ್ಯ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಬಿ ಆರ್‌ ಹೇಮಂತ್‌ ಕುಮಾರ್‌ ಹಿನ್ನಲೆ ಸಂಗೀತ, ನಂದಕುಮಾರ್ ಛಾಯಾಗ್ರಹಣ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here