ಕೋವಿಡ್‌ ಸಂಕಷ್ಟದ ದಿನಗಳಲ್ಲಿನ ನೈಜ ಘಟನೆಯೊಂದನ್ನು ಆಧರಿಸಿ ತಯಾರಾಗುತ್ತಿರುವ ‘ತನುಜಾ’ ಸಿನಿಮಾದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಅವರು ಮುಖ್ಯಮಂತ್ರಿಯಾಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಹರೀಶ್‌ ಎಂ.ಡಿ.ಹಳ್ಳಿ ಚಿತ್ರದ ನಿರ್ದೇಶಕ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ‘ತನುಜಾ’ ಚಿತ್ರಕ್ಕೆ ಮೊದಲ ಬಾರಿಗೆ ಬಣ್ಣ ಹಚ್ಚಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಅವರೇ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತನುಜಾ ಎಂಬ ಹೆಣ್ಣುಮಗಳು ಕೋವಿಡ್ ಕಾರಣದಿಂದ NEET ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆಯನ್ನು ತೋಡಿಕೊಂಡಿದ್ದರು. ಈ ಸಂದರ್ಭದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರಿಗೆ ನೆರವಾಗಿದ್ದರು. ತನುಜಾ ಪರೀಕ್ಷೆ ಬರೆದು NEET ಪಾಸಾಗಿದ್ದರು. ಸುಮಾರು 350 ಕಿ.ಮೀ. ಪ್ರಯಾಣ ಮಾಡಿ ಬಂದು ಪರೀಕ್ಷೆ ಬರೆದದ್ದು ರೋಚಕದ ವಿಷಯವಾಯ್ತು. ಈ ಯಶೋಗಾಥೆಗೆ ಕೆಲವು ನಾಟಕೀಯ ಅಂಶಗಳನ್ನು ಸೇರ್ಪಡೆಗೊಳಿಸಿ ಸಿನಿಮಾ ಮಾಡುತ್ತಿದ್ದಾರೆ ಹರೀಶ್ ಎಂ.ಡಿ ಹಳ್ಳಿ ಸಿನಿಮಾ ನಿರ್ದೇಶಿಸುತ್ತಿದ್ದಾರೆ.

“ಮಾಜಿ ಸಿಎಂ ಯಡಿಯೂರಪ್ಪ ಸಿನಿಮಾದಲ್ಲಿ ನಟಿಸುತ್ತಿರುವ ಸಂಗತಿ ವಿಶೇಷವಾದದ್ದು. ಇಂದು ಮೊದಲ ದಿನ ಅವರ ಭಾಗದ ಚಿತ್ರೀಕರಣ ಯಶಸ್ವಿಯಾಗಿ ನಡೆದಿದೆ. ಅವರು ನಮಗೆ ಸೂಕ್ತ ರೀತಿಯಲ್ಲಿ ಸಹಕರಿಸಿದರು” ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. Beyond visions cinemas ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ತನುಜಾ’ ಚಿತ್ರಕ್ಕೆ ಶಿವಮೊಗ್ಗ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ‘ಸರ್ಕಾರಿ ಹಿ.ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರದಲ್ಲಿ ಅಭಿನಯಿಸಿದ್ದ ಸಪ್ತ‌ ಪಾವೂರು ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಪತ್ರಕರ್ತ ವಿಶ್ವೇಶ್ವರ ಭಟ್, ಸಚಿವ ಡಾ.ಕೆ ಸುಧಾಕರ್, ರಾಜೇಶ್ ನಟರಂಗ, ಕೈಲಾಶ್, ಸಂಧ್ಯಾ ಅರಕೆರೆ, ಬೇಬಿ ಶ್ರೀ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರದ್ಯೋತನ್‌ ಸಂಗೀತ ನಿರ್ದೇಶನ, ರವೀಂದ್ರನಾಥ್ ಛಾಯಾಗ್ರಹಣ, ಉಮೇಶ್ ಆರ್.ಬಿ ಸಂಕಲನ, ಆರ್.ಚಂದ್ರಶೇಖರ್ ಪ್ರಸಾದ್ ಹಾಗೂ ಜೆ.ಎಂ.ಪ್ರಹ್ಲಾದ್ ಸಂಭಾಷಣೆ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here