‘ಬ್ಯಾಕ್ ಬೆಂಚರ್ಸ್’ ಚಿತ್ರದಿಂದ ಹೋಳಿ ಹಾಡು ಬಿಡುಗಡೆಯಾಗಿದೆ. ಹೃದಯಶಿವ ಅವರು ಬರೆದಿರುವ ಈ ಹಾಡನ್ನು ಭಾರತದ ಖ್ಯಾತ ಗಾಯಕ ಶಂಕರ್ ಮಹದೇವನ್ ಅವರು ಹಾಡಿದ್ದಾರೆ. ಸಂಗೀತ ಸಂಯೋಜನೆ ನಕುಲ್ ಅಭಯಂಕರ್ ಅವರದ್ದು. ಬಿ ಆರ್‌ ರಾಜಶೇಖರ್‌ ನಿರ್ದೇಶನದ ಸಿನಿಮಾ ತೆರೆಗೆ ಸಿದ್ಧವಾಗಿದೆ.

ಬಿ ಆರ್ ರಾಜಶೇಖರ್ ನಿರ್ದೇಶನದ ಬಹುತೇಕ ಹೊಸಬರೇ ನಟಿಸಿರುವ ‘ಬ್ಯಾಕ್ ಬೆಂಚರ್ಸ್’ ಚಿತ್ರದಿಂದ ಹೋಳಿ ಹಾಡು ಬಿಡುಗಡೆಯಾಗಿದೆ. ಹೃದಯಶಿವ ಅವರು ಬರೆದಿರುವ ಈ ಹಾಡನ್ನು ಭಾರತದ ಖ್ಯಾತ ಗಾಯಕ ಶಂಕರ್ ಮಹದೇವನ್ ಅವರು ಹಾಡಿದ್ದಾರೆ. ಸಂಗೀತ ಸಂಯೋಜನೆ ನಕುಲ್ ಅಭಯಂಕರ್ ಅವರದ್ದು. ಸಿನಿಮಾ ಬಗ್ಗೆ ಮಾತನಾಡುವ ನಿರ್ದೇಶಕ ಬಿ ಆರ್‌ ರಾಜಶೇಖರ್‌, ‘ಬ್ಯಾಕ್ ಬೆಂಚರ್ಸ್ ನಮ್ಮ ಕಾಲೇಜು ದಿನಗಳನ್ನು ನೆನಪಿಸುತ್ತದೆ. ಚಿತ್ರದಲ್ಲಿ ಬಹುತೇಕ ಹೊಸ ಪ್ರತಿಭೆಗಳು ಅಭಿನಯಿಸಿದ್ದಾರೆ.‌ ಆಡಿಷನ್ ಮೂಲಕ ಆಯ್ಕೆಯಾದ ಈ ಕಲಾವಿದರಿಗೆ ಸುಮಾರು ಒಂದು ವರ್ಷಗಳ ಕಾಲ ವರ್ಕ್‌ಶಾಪ್ ನಡೆಸಿ ಆನಂತರ ಚಿತ್ರೀಕರಣ ಮಾಡಲಾಗಿದೆ’ ಎನ್ನುತ್ತಾರೆ. ಸಿನಿಮಾ ಇದೀಗ ತೆರೆಗೆ ಸಿದ್ಧವಾಗಿದೆ. P P Productions ಬ್ಯಾನರ್‌ ಅಡಿಯಲ್ಲಿ ರಮ್ಯ ಅವರು ನಿರ್ಮಿಸಿರುವ ಸಿನಿಮಾಗೆ ಮನೊಹರ್ ಜೋಶಿ ಛಾಯಾಗ್ರಹಣವಿದೆ. ಚಿತ್ರದಲ್ಲಿ ರಂಜನ್ ನರಸಿಂಹಮೂರ್ತಿ, ಜಿತಿನ್ ಆರ್ಯನ್, ಆಕಾಶ್, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳಿಕರ್, ಮಾನ್ಯ ಗೌಡ, ಕುಂಕುಮ್, ಅನುಷ ಸುರೇಶ್ ಅಭಿನಯಿಸಿದ್ದಾರೆ.

LEAVE A REPLY

Connect with

Please enter your comment!
Please enter your name here