ಪುನೀತ್‌ ರಾಜಕುಮಾರ್‌ ಅಭಿನಯದ ‘ಜೇಮ್ಸ್‌’ ಬಿಡುಗಡೆಯಾಗುವ ಎಲ್ಲಾ ಪರದೆಗಳಲ್ಲಿ ‘ಬೈರಾಗಿ’ ಸಿನಿಮಾದ ಟೀಸರ್‌ ಪ್ರದರ್ಶನಗೊಳ್ಳಲಿದೆ. ಇದು ಅಪ್ಪು ಮತ್ತು ಶಿವರಾಜಕುಮಾರ್‌ ಅಭಿಮಾನಿಗಳಿಗೆ ಸಂತಸದ ಸುದ್ದಿ.

ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿದೆ. ಸದ್ಯ ಪೋಸ್ಟ್‌ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಟೀಸರ್ ಅನ್ನು ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ವಿಶೇಷವಾಗಿ ಬಿಡುಗಡೆ ಮಾಡಲು ‘ಬೈರಾಗಿ’ ತಂಡ ತೀರ್ಮಾನಿಸಿದೆ. ‘ಜೇಮ್ಸ್‌’ ಬಿಡುಗಡೆಯಾಗುವ ಎಲ್ಲಾ ಪರದೆಗಳಲ್ಲೂ ‘ಬೈರಾಗಿ’ ದರ್ಶನವಾಗಲಿದೆ ಎಂಬುದು ವಿಶೇಷ. ಪುನೀತ್ ಅವರ ಸವಿನೆನಪಿಗಾಗಿ ಈ ಟೀಸರ್ ರಿಲೀಸ್ ಮಾಡುತ್ತಿರುವುದಾಗಿ ಚಿತ್ರತಂಡ ಘೋಷಿಸಿದೆ.

”ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ನಮ್ಮ ತಂಡದ ಜತೆ ಅಪ್ಪು ಒಡನಾಟವಿದೆ. ಹೀಗಾಗಿ ಅವರ ಹುಟ್ಟುಹಬ್ಬದ ಉಡುಗೊರೆಯಾಗಿ ‘ಬೈರಾಗಿ’ ಟೀಸರ್ ಬಿಡುಗಡೆ ಮಾಡುತ್ತಿದ್ದೇವೆ. ಇದು ಪುನೀತ್ ಹಾಗೂ ಶಿವಣ್ಣನ ಅಭಿಮಾನಿಗಳಿಗೆ ಸಂತಸದ ವಿಷಯ” ಎಂದಿದ್ದಾರೆ ಚಿತ್ರದ ನಿರ್ದೇಶಕ ವಿಜಯ್‌ ಮಿಲ್ಟನ್‌. ‘ಕೃಷ್ಣ ಕ್ರಿಯೇಷನ್ಸ್’ ಬ್ಯಾನರ್‌ನಡಿ ಕೃಷ್ಣ ಸಾರ್ಥಕ ಈ ಸಿನಿಮಾ ನಿರ್ಮಿಸಿದ್ದಾರೆ. ‘ಟಗರು’ ಬಳಿಕ ‘ಡಾಲಿ’ ಧನಂಜಯ್ ಈ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ಜತೆ ನಟಿಸಿದ್ದಾರೆ. ಹಿರಿಯ ನಟ ಶಶಿಕುಮಾರ್, ಅಂಜಲಿ, ಯಶ ಶಿವಕುಮಾರ್ ಪ್ರಮುಖ ತಾರಾಬಳಗದಲ್ಲಿದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಚಿತ್ರಕ್ಕೆ ಗುರು ಕಶ್ಯಪ್ ಸಂಭಾಷಣೆ ರಚಿಸಿದ್ದಾರೆ.

Previous articleಪ್ರಸಿದ್ಧಿ ಎಂಬುದು ಅಪಾಯಕಾರಿ..
Next article‘RRR’ ಮೆಗಾ ಪ್ರೀ ರಿಲೀಸ್‌ ಇವೆಂಟ್‌; ಚಿಕ್ಕಬಳ್ಳಾಪುರ ಅಗಲಗುರ್ಕಿಯಲ್ಲಿ ಸಮಾರಂಭ

LEAVE A REPLY

Connect with

Please enter your comment!
Please enter your name here