ಶಾಸಕ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ – ಸೋನಾಲ್ ಮಾಂಟೆರೊ ಅಭಿನಯದ, ಜಯತೀರ್ಥ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಬನಾರಸ್’. ಚಿತ್ರತಂಡ ನೂತನ ಪೋಸ್ಟರ್‌ ಅನಾವರಣಗೊಳಿಸುವ ಮೂಲಕ ಸಿನಿರಸಿಕರಿಗೆ‌ ಮಕರ ಸಂಕ್ರಮಣದ ಶುಭಾಶಯ ಹೇಳಿದೆ.

ನಾಯಕ‌‌ ನಟ ಹಾಗೂ‌ ನಿರ್ಮಾಣ ಸಂಸ್ಥೆಯೂ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಅನೇಕ ಕಾರಣಕ್ಕೆ ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘ಬನಾರಸ್’ ಚಿತ್ರದ ನೂತನ ಪೋಸ್ಟರ್‌ ಬಿಡುಗಡೆಯಾಗಿದೆ. ಇದು ಸಕ್ರಾಂತಿ ಹಬ್ಬದ ವಿಶೇಷ. ಈ ಚಿತ್ರದ ಶೇ. 90ರಷ್ಟು ಸನ್ನಿವೇಶಗಳನ್ನು ಬನಾರಸ್‌ನ ಮನಮೋಹಕ ಪರಿಸರದಲ್ಲಿ ಚಿತ್ರಿಸಿರುವುದು ವಿಶೇಷ. ಇಲ್ಲಿನ 84 ಘಾಟ್ ಪ್ರದೇಶಗಳಲ್ಲಿ ಸಿನಿಮಾ ಚಿತ್ರಣಗೊಂಡಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾ. ಏಕಕಾಲದಲ್ಲಿಯೇ ಐದು ಭಾಷೆಗಳಲ್ಲಿ ತಯಾರಾಗಿದೆ. ಸೂಕ್ಷ್ಮಸಂವೇದಿ ನಿರ್ದೇಶಕ ಎಂದೇ ಹೆಸರು ಮಾಡಿರುವ ಜಯತೀರ್ಥ ಸಾರಥ್ಯದಲ್ಲಿ ತಯಾರಾಗಿರುವ ಪ್ರಯೋಗ ಎನ್ನುವ ಕಾರಣಕ್ಕೂ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಶಾಸಕ ಜಮೀರ್ ಅಹಮದ್‌ ಪುತ್ರ ಝಯೀದ್ ಖಾನ್‌ ಈ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ.

ಚಿತ್ರದ ಆಡಿಯೋ- ವಿಡಿಯೋ ಹಕ್ಕುಗಳು ಕನ್ನಡದ ಪ್ರತಿಷ್ಟಿತ ಆಡಿಯೋ ಸಂಸ್ಥೆ ಲಹರಿ ಪಾಲಾಗಿವೆ. ಈ ಚಿತ್ರವು ಕನ್ನಡ, ಹಿಂದಿ, ತೆಲುಗು ಸೇರಿದಂತೆ ಐದು ಭಾಷೆಗಳಲ್ಲಿ‌ ಬರುತ್ತಿದ್ದು, ಆ ಎಲ್ಲಾ ಭಾಷೆಗಳ ಆಡಿಯೋ ‌ಮತ್ತು ವಿಡಿಯೋ ಹಕ್ಕುಗಳನ್ನು ಲಹರಿ‌ ಸಂಸ್ಥೆ ಖರೀದಿಸಿದೆ. ಚೊಚ್ಚಲ ನಾಯಕ‌ ನಟರೊಬ್ಬರ ಸಿನಿಮಾಗಳ ಇತಿಹಾಸದಲ್ಲಿಯೇ ಅತ್ಯಧಿಕ ಮೊತ್ತಕ್ಕೆ ಲಹರಿ ಸಂಸ್ಥೆ ಈ ಚಿತ್ರದ ಆಡಿಯೋ ಹಕ್ಕುಗಳನ್ನು ಖರೀದಿಸಿರುವುದು ಸುದ್ದಿಯಾಗಿತ್ತು. ನ್ಯಾಷನಲ್ ಖಾನ್ಸ್ ಪ್ರೊಡಕ್ಷನ್ಸ್ ಮೂಲಕ ತಿಲಕ್ ರಾಜ್ ಬಲ್ಲಾಳ್ ನಿರ್ಮಿಸಿರುವ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ‌ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ, ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here