ಫೆಬ್ರವರಿ 26ವರೆಗೆ ಐದು ದಿನಗಳ ಕಾಲ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ ನಡೆಯಲಿದೆ. ಆಯ್ದ ಮಕ್ಕಳ ಸಿನಿಮಾಗಳಿಗೆ 12 ಬೇರೆ ಬೇರೆ ವಿಭಾಗದಲ್ಲಿ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಗುತ್ತಿದೆ. ಐದು ದಿನಗಳ ಕಾಲ ನಡೆಯುವ ಚಲನಚಿತ್ರೋತ್ಸವದಲ್ಲಿ ಕನ್ನಡ, ಫ್ರೆಂಚ್, ಕೊರಿಯನ್, ಜಪಾನೀಸ್, ಸ್ಪ್ಯಾನೀಶ್ ಸೇರಿದಂತೆ ಹಲವು ಭಾಷೆಯ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ.

ಮಕ್ಕಳ ಚಿತ್ರಕ್ಕೆ ವೇದಿಕೆ ಕಲ್ಪಿಸಿ ಕೊಡುವ ಉದ್ದೇಶದಿಂದ ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ವನ್ನು ಈ ವರ್ಷದಿಂದ ಆರಂಭಿಸಿದೆ. ಮೊದಲ ಚಲನಚಿತ್ರೋತ್ಸವವನ್ನು ‘ಅಪ್ಪು ಮಕ್ಕಳ ಚಿತ್ರೋತ್ಸವ’ ಎಂಬ ಟ್ಯಾಗ್ ಲೈನ್ ನಡಿ ಪುನೀತ್ ರಾಜಕುಮಾರ್ ಅವರಿಗೆ ಅರ್ಪಣೆ ಮಾಡಲಾಗುತ್ತಿದೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ಸಚಿವ ವಿ. ಸೋಮಣ್ಣ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ಕ್ಕೆ ಚಾಲನೆ ನೀಡುವ ಮೂಲಕ ಶುಭ ಹಾರೈಸಿದ್ದಾರೆ.

ಚಿತ್ರೋತ್ಸವದ ಆಯೋಜಕ ಉಲ್ಲಾಸ್, ”ನಾನು ‘ನಿರ್ಮಲ’ ಎಂಬ ಮಕ್ಕಳ ಸಿನಿಮಾ ಮಾಡಿದ್ದೆ. ಆ ಚಿತ್ರಕ್ಕೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹೊರತುಪಡಿಸಿ ಯಾವ ಫಿಲಂ ಫೆಸ್ಟ್‌ನಲ್ಲಿಯೂ ಪ್ರದರ್ಶನಗೊಳ್ಳಲು ಅವಕಾಶ ಸಿಗಲಿಲ್ಲ. ಆದ್ದರಿಂದ ಮಕ್ಕಳ ಚಿತ್ರಕ್ಕೆ ವೇದಿಕೆ ಕಲ್ಪಿಸಿಕೊಡಬೇಕು ಉದ್ದೇಶದಿಂದ ಈ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಾಗುತ್ತಿದೆ. ಪುಣೆ, ಕೊಲ್ಕತ್ತಾ, ಕೇರಳದಲ್ಲಿ ಮಕ್ಕಳ ಚಲನಚಿತ್ರೋತ್ಸವ ನಡೆಯುತ್ತವೆ. ಇದೀಗ ಬೆಂಗಳೂರಿನಲ್ಲಿ ಈ ವರ್ಷದಿಂದ ಆರಂಭವಾಗಿದೆ. ಇನ್ಮುಂದೆಯೂ ಇದು ಅಪ್ಪು ಸರ್ ಹೆಸರಲ್ಲಿಯೇ ಪ್ರತಿ ವರ್ಷ ಮುಂದುವರೆದುಕೊಂಡು ಹೋಗುತ್ತದೆ” ಎಂದು ಮಾಹಿತಿ ಹಂಚಿಕೊಂಡರು.

ಸಚಿವ ವಿ. ಸೋಮಣ್ಣ ಅವರು ಮಾತನಾಡಿ, ”ಉಲ್ಲಾಸ್ ಅದ್ಭುತವಾದ ಕಾರ್ಯವನ್ನು ಕೈಗೊಂಡು ಪುನೀತ್ ಅವರ ಹೆಸರಲ್ಲಿ ಅಪ್ಪು ಮಕ್ಕಳ ಚಲನಚಿತ್ರೋತ್ಸವ ಎನ್ನುವ ದೊಡ್ಡ ಸಂದೇಶ ಕೊಡುತ್ತಿದ್ದಾರೆ. ಅವರಿಗೆ ಅಭಿನಂದನೆ. ಸರ್ಕಾರ ಹಾಗೂ ಸರ್ಕಾರೇತರ ವ್ಯವಸ್ಥೆಗಳಲ್ಲಿ ಈ ರೀತಿಯ ಕೆಲಸಗಳನ್ನು ಮಾಡಬೇಕು ಎಂಬ ಚಿಂತನೆಗೆ ಪುನೀತ್ ರಾಜಕುಮಾರ್ ನಮ್ಮೆಲ್ಲರಿಗೂ ಪ್ರೇರಣೆ” ಎಂದು ಚಿತ್ರೋತ್ಸವಕ್ಕೆ ಶುಭ ಹಾರೈಸಿದರು.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ”ಉಲ್ಲಾಸ್ ಸಂಸ್ಥೆಯವರಿಂದ ಪ್ರತಿವರ್ಷ ನಾಟಕಗಳನ್ನು ಮಾಡಲಾಗುತ್ತಿತ್ತು. ಈ ಬಾರಿ ಮಕ್ಕಳ ಚಲನಚಿತ್ರೋತ್ಸವ ಮಾಡೋಣ ಎಂದು ಉಲ್ಲಾಸ್ ಪ್ರಸ್ತಾಪ ಮಾಡಿದರು. ಮಕ್ಕಳ ಚಿತ್ರಕ್ಕೆ ವೇದಿಕೆಗಳೇ ಇಲ್ಲ. ಆದ್ದರಿಂದ ಪ್ರತ್ಯೇಕವಾಗಿ ವೇದಿಕೆ ಕಲ್ಪಿಸಿಕೊಡುವ ಉದ್ದೇಶದಿಂದ ಇದನ್ನು ಆರಂಭಿಸಲಾಗುತ್ತಿದೆ. ಸಾಕಷ್ಟು ಉತ್ತಮ ಮಕ್ಕಳ ಚಿತ್ರಗಳಿವೆ ಅವುಗಳಿಗೆಲ್ಲ ಈ ಚಲನಚಿತ್ರೋತ್ಸವ ಒಂದೊಳ್ಳೆ ವೇದಿಕೆಯಾಗಲಿ. ಮತ್ತಷ್ಟು ಮಕ್ಕಳ ಚಿತ್ರಗಳಿಗೆ ಉತ್ತೇಜನ ಸಿಗಲಿ” ಎಂದರು.

ಫೆಬ್ರವರಿ 22ರಿಂದ 26ವರೆಗೆ ಐದು ದಿನಗಳ ಕಾಲ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ ನಡೆಯಲಿದೆ. ಆಯ್ದ ಮಕ್ಕಳ ಸಿನಿಮಾಗಳಿಗೆ 12 ಬೇರೆ ಬೇರೆ ವಿಭಾಗದಲ್ಲಿ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಗುತ್ತಿದೆ. ಐದು ದಿನಗಳ ಕಾಲ ನಡೆಯುವ ಚಲನಚಿತ್ರೋತ್ಸವದಲ್ಲಿ ಕನ್ನಡ, ಫ್ರೆಂಚ್, ಕೊರಿಯನ್, ಜಪಾನೀಸ್, ಸ್ಪ್ಯಾನೀಶ್ ಸೇರಿದಂತೆ ಹಲವು ಭಾಷೆಯ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ.

LEAVE A REPLY

Connect with

Please enter your comment!
Please enter your name here