ದೀಕ್ಷಿತ್‌ ಶೆಟ್ಟಿ ನಟನೆಯ ‘ಬ್ಯಾಂಕ್‌ of ಭಾಗ್ಯಲಕ್ಷ್ಮಿ’ ಸಿನಿಮಾದ ಅನಿಮೇಷನ್‌ ಟೀಸರ್‌ ಬಿಡುಗಡೆಯಾಗಿದೆ. ವಿಶೇಷ ರೀತಿಯ ಟೀಸರ್‌ ಮೂಲಕ ಚಿತ್ರ ಕತೆ ಹೇಳುವ ಪ್ರಯತ್ನಕ್ಕೆ ಸಾಕಷ್ಟು ಮೆಚ್ಚುಗೆಯೂ ವ್ಯಕ್ತವಾಗಿದೆ. ಎಚ್‌ ಕೆ ಪ್ರಕಾಶ್‌ ನಿರ್ಮಾಣದಲ್ಲಿ ಅಭಿಷೇಕ್‌ ಎಂ ನಿರ್ದೇಶಿಸುತ್ತಿರುವ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಾಣಲಿದೆ.

‘ದಿಯಾ’ ಸಿನಿಮಾ ಖ್ಯಾತಿಯ ದೀಕ್ಷಿತ್‌ ಶೆಟ್ಟಿ ನಟನೆಯ ‘ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ ಸಿನಿಮಾದ ಅನಿಮೇಷನ್‌ ಟೀಸರ್‌ ಬಿಡುಗಡೆಯಾಗಿದೆ. ಅಭಿಷೇಕ್‌ ಎಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಾಣಲಿದೆ. ‘ಕನ್ನಡ ಚಿತ್ರರಂಗದ ಮಟ್ಟಿಗೆ ಇದೊಂದು ಹೊಸ ಪ್ರಯೋಗ. ಟೀಸರ್ ಮೂಲಕ ಚಿತ್ರದ ಕಥೆ ಹೇಳುವ ಪ್ರಯತ್ನವಿದು. ಅನಿಮೇಷನ್‌ ಟೀಸರ್‌ಗಾಗಿ ಏಳೆಂಟು ಜನ ನುರಿತ ತಂತ್ರಜ್ಞರು ಸುಮಾರು ತಿಂಗಳ ಕಾಲ ಶ್ರಮ ಪಟ್ಟಿದ್ದಾರೆ‌. ಟೀಸರ್‌ಗೆ ಉತ್ತಮ ರೆಸ್ಪಾನ್ಸ್‌ ಸಿಗುತ್ತಿದೆ’ ಎನ್ನುತ್ತಾರೆ ನಿರ್ದೇಶಕ ಅಭಿಷೇಕ್‌. ‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ದಂತಹ ಯಶಸ್ವೀ ಚಿತ್ರಗಳ ನಿರ್ಮಾಪಕ ಹೆಚ್ ಕೆ ಪ್ರಕಾಶ್ ನಿರ್ಮಾಣದ ಚಿತ್ರವಿದು. ಬೆಂಗಳೂರು, ತುಮಕೂರು ಮತ್ತು ಚಿತ್ರದುರ್ಗದಲ್ಲಿ ಚಿತ್ರೀಕರಣ ನಡೆಸಲಾಗಿದೆ. ಕೆಲವು ದಿನಗಳ ಚಿತ್ರೀಕರಣ ಬಾಕಿಯಿದ್ದು ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರುವುದು ನಿರ್ದೇಶಕರ ಯೋಜನೆ.

ದೀಕ್ಷಿತ್ ಶೆಟ್ಟಿ ಅವರಿಗೆ ನಾಯಕಿಯಾಗಿ ‘ಪ್ರೇಮಂ ಪೂಜ್ಯಂ’, ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರಗಳ ಖ್ಯಾತಿಯ ಬೃಂದಾ ಆಚಾರ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ, ಉಷಾ ಭಂಡಾರಿ, ಭರತ್, ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ ಇತರೆ ಪ್ರಮುಖ ಪಾತ್ರಧಾರಿಗಳು. ನಿರ್ದೇಶಕ ಸಿಂಪಲ್ ಸುನಿ ಅವರ ಜೊತೆ ಸಹನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ಅಭಿಷೇಕ್‌ ಅವರ ಸ್ವತಂತ್ರ್ಯ ನಿರ್ದೇಶನದ ಮೊದಲ ಚಿತ್ರವಿದು. ಕತೆ, ಚಿತ್ರಕಥೆ ಹಾಗೂ ಸಂಭಾಷಣೆ ಅಭಿಷೇಕ್‌ ಅವರದೇ. ‘ಪಿನಾಕ’ ವಿಎಫ್‌ಎಕ್ಸ್‌ ಸ್ಟುಡಿಯೋದಲ್ಲಿ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ’ ಚಿತ್ರದ ಟೀಸರ್‌ನ ಅನಿಮೇಷನ್‌ ಕೆಲಸ ನಡೆದಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಛಾಯಾಗ್ರಹಣ, ರಘು ಮೈಸೂರ್ ಕಲಾ ನಿರ್ದೇಶನ ಹಾಗೂ ಭೂಷಣ್ ಮಾಸ್ಟರ್ ನೃತ್ಯ ನಿರ್ದೇಶನ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here