ಬರಗೂರು ರಾಮಚಂದ್ರಪ್ಪನವರು ಚಿತ್ರಕಥೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿರುವ ‘ಸ್ವಪ್ನಮಂಟಪ’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರಗಳಲ್ಲಿ ಅಭಿನಯಿಸಿರುವುದು ಸಿನಿಮಾದ ಮತ್ತೊಂದು ವಿಶೇಷ.

ಬರಗೂರು ರಾಮಚಂದ್ರಪ್ಪನವರು ಚಿತ್ರಕಥೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿರುವ ‘ಸ್ವಪ್ನಮಂಟಪ’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಇದೇ ಹೆಸರಿನ ಅವರದ್ದೇ ಕಾದಂಬರಿ ಆಧರಿಸಿದ ಚಿತ್ರವಿದು ಎನ್ನುವುದು ವಿಶೇಷ. ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಹೊಸಮನೆ ಮೂರ್ತಿ ಚಿತ್ರಕ್ಕೆ ಸೆಟ್‌ ಹಾಕಿದ್ದಾರೆ. ಮೈಸೂರಿನ ಬಾಬುನಾಯ್ಕ್ ಅವರು ಮಲೈಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಡಿ ಚಿತ್ರ ನಿರ್ಮಿಸಿದ್ದಾರೆ. ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರಗಳಲ್ಲಿ ಅಭಿನಯಿಸಿರುವುದು ಸಿನಿಮಾದ ಮತ್ತೊಂದು ವಿಶೇಷ.

‘ಸ್ವಪ್ನಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ , ಕಥಾನಾಯಕ ಮತ್ತು ನಾಯಕಿ ಜನರನ್ನು ಸಂಘಟಿಸಿ ಸ್ವಪ್ನಮಂಟಪವನ್ನು ಉಳಿಸಿ ಸರ್ಕಾರದ ಅಧಿಕೃತ ಸ್ಮಾರಕದ ಪಟ್ಟಿಗೆ ಸೇರಿಸುವ ಮೂಲಕ ಚಾರಿತ್ರಿಕ ಸ್ಮಾರಕಗಳ ಪರಂಪರೆಯನ್ನು ಎತ್ತಿ ಹಿಡಿಯುತ್ತಾರೆ. ಈ ಸಾಮಾಜಿಕ ಚಿತ್ರದಲ್ಲಿ ಸ್ವಪ್ನಮಂಟಪವನ್ನು ನಿರ್ಮಾಣ ಮಾಡಿದ ರಾಜ-ರಾಣಿ ಯರ ಕಥನವನ್ನೂ ಹಿನ್ನೋಟ ತಂತ್ರದಲ್ಲಿ ಸೇರಿಸಲಾಗಿದೆ. ಮಹಾಲಕ್ಷ್ಮೀ, ಸುಂದರರಾಜ ಅರಸು, ರಾಜಪ್ಪ ದಳವಾಯಿ, ಅಂಬರೀಶ ಸಾರಂಗಿ, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ವೆಂಕಟರಾಜು, ಶಿವಲಿಂಗಪ್ರಸಾದ್, ಭಾರತಿ ರಮೇಶ್ ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಗರಾಜ ಆದವಾನಿ ಛಾಯಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here