ಗುರುದತ್‌ ಗಾಣಿಗ ಕ್ರಿಯೇಟಿವ್‌ ನಿರ್ದೇಶಕರಾಗಿರುವ ‘ಬೆಂಗಳೂರು ಬಾಯ್ಸ್‌’ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ಅಭಿಷೇಕ್ ದಾಸ್, ಸಚಿನ್ ಚೆಲುವರಾಯಸ್ವಾಮಿ, ಚಂದನ್ ಆಚಾರ್, ರೋಹಿತ್, ಪ್ರಗ್ಯ ನಯನ, ವೈನಿಧಿ ಜಗದೀಶ್, ಜಯಶ್ರೀ ಆಚಾರ್ ಮತ್ತು ಸೋನಿ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಕಾಲೇಜಿನಲ್ಲಿ ಲಾಸ್ಟ್‌ ಬೆಂಚ್‌ ಸ್ಟೂಡೆಂಟ್ಸ್‌ ಆಗಿದ್ದುಕೊಂಡು ತಲಹರಟೆ ಮಾಡುವ ಯುವಕರು ಬದುಕಿನ ಕತೆ ‘ಬೆಂಗಳೂರು ಬಾಯ್ಸ್‌’. 90ರ ದಶದ ಸೂಪರ್ ಹಿಟ್ ಸಿನಿಮಾಗಳಾದ ರಣಧೀರ, ಅಂತ , ಓಂ ಹಾಗೂ ಎ ಚಿತ್ರಗಳ ಪಾತ್ರಗಳಲ್ಲಿ ಅಭಿಷೇಕ್ ದಾಸ್, ಸಚಿನ್ ಚೆಲುವರಾಯಸ್ವಾಮಿ, ಚಂದನ್ ಆಚಾರ್, ರೋಹಿತ್ ಕಾಣಿಸಿಕೊಂಡಿದ್ದಾರೆ. ಇವರಿಗ ಜೋಡಿಗಳಾಗಿ ಪ್ರಗ್ಯ ನಯನ, ವೈನಿಧಿ ಜಗದೀಶ್, ಜಯಶ್ರೀ ಆಚಾರ್ ಹಾಗೂ ಸೋನಿ ನಟಿಸಿದ್ದಾರೆ. ವಿ ಮೇಕರ್ಸ್‌ ನಿರ್ಮಾಣದಲ್ಲಿ ತಯಾರಾಗಿರುವ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದ್ದು, ಇದರಲ್ಲಿ ಕಾಮಿಡಿ, ಎಮೋಷನ್ಸ್‌, ಮೋಜು – ಮಸ್ತಿ, ಪಂಚಿಂಗ್‌ ಡೈಲಾಗ್‌ಗಳಿವೆ. ನಟ ಚಿಕ್ಕಣ್ಣ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ. ಉಮೇಶ್, ಪಿಡಿ ಸತೀಶ್, ಮೋಹನ್ ಜೂನೇಜಾ ಸೇರಿದಂತೆ ಹಿರಿಯ ಕಲಾವಿದರು ಇತರೆ ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾ ಖ್ಯಾತಿಯ ಗುರುದತ್‌ ಗಾಣಿಗ ಚಿತ್ರದ ಕ್ರಿಯೇಟಿವ್‌ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದು, ರಿಜೋ ಪಿ ಜಾನ್ ಛಾಯಾಗ್ರಹಣ, ಧರ್ಮ ವಿಶ್ ಸಂಗೀತ ಚಿತ್ರಕ್ಕಿದೆ. ತೆಲುಗು ಮೂಲದ ವಿಕ್ರಮ್‌ ಕೆ ವೈ ಮತ್ತು ಪ್ರಶಾಂತ್ ರಾವ್ ಪುರಂ ನಿರ್ಮಾಣದ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ.

LEAVE A REPLY

Connect with

Please enter your comment!
Please enter your name here