ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವ ಫೆಬ್ರವರಿ 29ರಿಂದ ಮಾರ್ಚ್‌ 7ರವರೆಗೆ ನಡೆಯಲಿದೆ. ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚಿತ್ರೋತ್ಸವದ ಪ್ರಾಥಮಿಕ ರೂಪುರೇಷೆಗಳು ಸಿದ್ಧವಾಗಿವೆ. ಫೆಬ್ರವರಿ 29ರ ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಚಿತ್ರೋತ್ಸವದ ಉದ್ಘಾಟನಾ ಸಮಾರಂಭ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಫೆಬ್ರವರಿ 29ರಿಂದ ಮಾರ್ಚ್ 7ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ತೀರ್ಮಾನಿಸಲಾಗಿದೆ. ಚಲನಚಿತ್ರೋತ್ಸವದ 15ನೇ ಆವೃತ್ತಿ ಫೆಬ್ರವರಿ 29ರ ಸಂಜೆ ಉದ್ಘಾಟನೆಗೊಳ್ಳಲಿದೆ. ವಿಧಾನಸೌಧದ ಮುಂಭಾಗದಲ್ಲಿ ಸಮಾರಂಭ ನಡೆಯಲಿದೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ ಮನ್ನಣೆ ಪಡೆದಿರುವ ಚಿತ್ರೋತ್ಸವ. ಕನ್ನಡ ಸೇರಿದಂತೆ ದೇಶ ಹಾಗೂ ವಿವಿಧ ದೇಶಗಳ ಸಿನಿಮಾಗಳನ್ನು ಪ್ರದರ್ಶಿಸಲಾಗುವುದು.

ಮಾರ್ಚ್ 7ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂದು ರಾಜ್ಯಪಾಲರು ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಸಂಘಟನಾ ಸಮಿತಿ ಸಭೆಯ ಜೊತೆಗೆ ಕೋರ್ ಸಮಿತಿಯೂ ರಚನೆಯಾಗಿದ್ದು, ಸಮಾರಂಭ ಯಾವ ರೀತಿ ಏರ್ಪಡಿಸಬೇಕೆಂದು ತೀರ್ಮಾನವಾಗುತ್ತದೆ. ‘ಶಾಂತಿ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ. ದೇಶವಿದೇಶಗಳ ಸಿನಿರಂಗದ ಪ್ರಖ್ಯಾತ ಕಲಾವಿದರನ್ನು ಕರೆಸಲಾಗುತ್ತಿದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಅಂತರರಾಷ್ಟ್ರಿಯ ಚಲನಚಿತ್ರೋತ್ಸವ ಯಶಸ್ವಿಯಾಗಿ ನಡೆಯಲಿದೆ’ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

LEAVE A REPLY

Connect with

Please enter your comment!
Please enter your name here