ನಟ, ನಿರ್ದೇಶಕ ಸಿಹಿಕಹಿ ಚಂದ್ರು ನಡೆಸಿಕೊಡುತ್ತಿರುವ ‘ಬೊಂಬಾಟ್‍ ಭೋಜನ’ ಕಾರ್ಯಕ್ರಮ 1000 ಸಂಚಿಕೆಗಳನ್ನು ಪೂರೈಸಿದೆ. ಈ ಸೀಸನ್‌ನಲ್ಲಿ ಚಂದ್ರು ಅಮೇರಿಕಾ, ಆಫ್ರಿಕಾ ಮುಂತಾದ ಕಡೆ ಹೋಗಿ ಅಡುಗೆ ಕಾರ್ಯಕ್ರಮ ಮಾಡಿರುವುದು ವಿಶೇಷ. ಜನವರಿ 15ರ ಮಕರ ಸಂಕ್ರಾಂತಿಯಂದು ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ‘ಬೊಂಬಾಟ್‍ ಭೋಜನ’ ನಾಲ್ಕನೇ ಆವೃತ್ತಿ ಆರಂಭವಾಗಲಿದೆ.

ನಟ, ನಿರ್ದೇಶಕ ಸಿಹಿಕಹಿ ಚಂದ್ರು ಸ್ಟಾರ್ ಸುವರ್ಣ ವಾಹಿನಿಯಲ್ಲಿ ನಡೆಸಿಕೊಡುತ್ತಿರುವ ‘ಬೊಂಬಾಟ್‍ ಭೋಜನ’ ಕಾರ್ಯಕ್ರಮ 1000 ಸಂಚಿಕೆಗಳನ್ನು ಪೂರೈಸಿದೆ. ಈ ಕಾರ್ಯಕ್ರಮದ ಮೂರನೇ ಆವೃತ್ತಿ ಇದೀಗ ಮುಗಿದಿದ್ದು, ಜನವರಿ 15ರ ಮಕರ ಸಂಕ್ರಾಂತಿಯಂದು ನಾಲ್ಕನೇ ಆವೃತ್ತಿ ಆರಂಭವಾಗಲಿದೆ. ಈ ಕುರಿತು ಮಾತನಾಡಿದ ಚಂದ್ರು, ‘ನಾಡಿನ ಹಲವು ಜಿಲ್ಲೆಗಳಿಗೆ ಹೋಗಿ ಅಲ್ಲಿನ ಮಹಿಳಾ ಮಂಡಳಿ ಸದಸ್ಯೆಯರಿಗೆ ಅಡಿಗೆ ಮಾಡಿ ತೋರಿಸಲಾಗಿದೆ. ಆಹ್ವಾನಿಸಿದವರ ಮನೆಗೆ ಹೋಗಿ ಅವರು ಪ್ರೀತಿಯಿಂದ ಮಾಡಿದ ತಿಂಡಿಯನ್ನು ಸವಿದು ಬಂದಿದ್ದೇನೆ. ಬರೀ ಅಡುಗೆಯಷ್ಟೇ ಅಲ್ಲ, ‘ಅಂದ ಚೆಂದ’ ಎಂಬ ಹೊಸ ವಿಭಾಗಗಳ ಮೂಲಕ ಮಹಿಳೆಯರು ತಮ್ಮ ಅಂದ ಹೆಚ್ಚಿಸಿಕೊಳ್ಳುವ ಮೇಕಪ್‍, ಕೇಶವಿನ್ಯಾಸ ತರಬೇತಿ ನೀಡಲಾಗಿದೆ. ಗೌರಿಯಮ್ಮ ನಡೆಸಿಕೊಡುವ ‘ಅಂಗೈಲಿ ಆರೋಗ್ಯ’ ವಿಭಾಗದಲ್ಲಿ ಹಲವು ಆರೋಗ್ಯದ ಟಿಪ್ಸ್ ನೀಡಲಾಗಿದೆ. ಈ ಬಾರಿ ಅಮೇರಿಕಾ, ಆಫ್ರಿಕಾ ಮುಂತಾದ ಕಡೆ ಹೋಗಿ ಅಡುಗೆ ಕಾರ್ಯಕ್ರಮ ಮಾಡಿ ಬಂದಿರುವುದು ವಿಶೇಷ’ ಎಂದರು.

‘ಬೊಂಬಾಟ್ ಭೋಜನ’ ಸೀಸನ್ 3ರಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಭಾಸ್ಕರ್ ರಾವ್‍, ಸುಧಾ ಮೂರ್ತಿ, ಗುರುರಾಜ ಕರ್ಜಗಿ ಸೇರಿದಂತೆ ಹಲವರು ಗಣ್ಯರು ಭಾಗವಹಿಸಿದ್ದಾರೆ. ಹೀಗೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ‘ಬೊಂಬಾಟ್‍ ಭೋಜನ ಮೂರು ಸೀಸನ್‍ಗಳಿಂದ 2000ಕ್ಕೂ ಹೆಚ್ಚು ಕಂತುಗಳು ಪ್ರಸಾರವಾಗಿವೆ. ಇದೊಂದು ದಾಖಲೆ’ ಎಂದು ಮಾಹಿತಿ ನೀಡಿದ ಚಂದ್ರು ಅವರು ಮುಂದಿನ ದಿನಗಳಲ್ಲಿ ಗಿನ್ನೀಸ್‍ / ಲಿಮ್ಕಾ ಬುಕ್‍ ಆಫ್‍ ರೆಕಾರ್ಡ್ಸ್ ಸಂಸ್ಥೆಗಳಿಗೆ ಸೂಕ್ತ ದಾಖಲೆ ಸಲ್ಲಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ‘ಬೊಂಬಾಟ್‍ ಭೋಜನ 3’ ಪುಸ್ತಕ ಬಿಡುಗಡೆ ಮಾಡಲಾಯಿತು. ಸ್ಟಾರ್‌ ಸುವರ್ಣ ವಾಹಿನಿಯವರು ಚಂದ್ರು ಅವರನ್ನು ಸನ್ಮಾನಿಸಿದರು.

LEAVE A REPLY

Connect with

Please enter your comment!
Please enter your name here