ಗಾಯಕ ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ದಂಪತಿ ಬೆಳ್ಳಿತೆರೆ ಮೇಲೆ ಜೋಡಿಯಾಗಿ ನಟಿಸಲಿದ್ದಾರೆ. ಪುನೀತ್‌ ನಿರ್ದೇಶಿಸಲಿರುವ ಸೈಕೋ – ಥ್ರಿಲ್ಲರ್‌ ಚಿತ್ರವಿದು. ಎಂ ಎಸ್‌ ತ್ಯಾಗರಾಜ್‌ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.

ಬಿಗ್‌ಬಾಸ್‌ ಖ್ಯಾತಿಯ ಸೆಲೆಬ್ರಿಟಿ ಕಪಲ್‌ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ದಂಪತಿ ಇದೇ ಮೊದಲ ಬಾರಿಗೆ ಬೆಳ್ಳಿತೆರೆಯ ಮೇಲೆ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ ಅವರು ಕತೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪುನೀತ್ ಶ್ರೀನಿವಾಸ್ ಅವರು ಸುಮಾರು 12 ವರ್ಷಗಳಿಂದ ಅನೇಕ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅವರು ತಮ್ಮ ಪ್ರಥಮ ಪ್ರಯತ್ನದಲ್ಲೇ ವಿಭಿನ್ನ ವಿಷಯದ ಮೂಲಕ ಚಿತ್ರ ರಚಿಸುತ್ತಿದ್ದು, ಇನ್ನೂ ಹೆಸರಿಡದ ಈ ಚಿತ್ರಕ್ಕೆ Sri Chowdeshwari Cine Creations ಬ್ಯಾನರ್‌ ಅಡಿಯಲ್ಲಿ ಎಲ್ ಮೋಹನ್ ಕುಮಾರ್ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಎಂ ಎಸ್ ತ್ಯಾಗರಾಜ್ ಸಂಗೀತ ಸಂಯೋಜನೆ, ಕರುಣಾಕರ್ ಛಾಯಾಗ್ರಹಣವಿದೆ. ಮುಂದಿನ ತಿಂಗಳು ಚಿತ್ರೀಕರಣ ಆರಂಭಿಸಿ ಬೆಂಗಳೂರು ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸುವ ಯೋಜನೆ ಚಿತ್ರತಂಡಕ್ಕಿದೆ. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಹಾಗೂ ಮಹೂರ್ತದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ನಿರ್ದೇಶಕ ಪುನೀತ್ ತಿಳಿಸಿದ್ದಾರೆ.

LEAVE A REPLY

Connect with

Please enter your comment!
Please enter your name here