ಶರಣ್‌ ನಟನೆಯ ‘ಛೂ ಮಂತರ್‌’ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದೆ. ಇದೇ ಮೇ 10ರಂದು ಸಿನಿಮಾ ರಿಲೀಸ್‌ ಆಗಬೇಕಿತ್ತು. ಕಾರಣಾಂತರಗಳಿಂದ ಚಿತ್ರದ ಬಿಡುಗಡೆಯನ್ನು ಪೋಸ್ಟ್‌ಪೋನ್‌ ಮಾಡಿರುವುದಾಗಿ ನಿರ್ಮಾಪಕ ತರುಣ್‌ ಶಿವಪ್ಪ ಹೇಳಿದ್ದಾರೆ.

ನವನೀತ್‌ ನಿರ್ದೇಶನದಲ್ಲಿ ಶರಣ್‌ ನಟಿಸಿರುವ ‘ಛೂ ಮಂತರ್‌’ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದೆ. ಈ ಬಗ್ಗೆ ಮಾತನಾಡಿರುವ ನಿರ್ಮಾಪಕ ತರುಣ್‌ ಶಿವಪ್ಪ, ‘ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು ಸಿನಿಮಾ ವೀಕ್ಷಿಸಿದ್ದಾರೆ. ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಹಾರರ್ ಚಿತ್ರವಾಗಿದ್ದು, ಉತ್ತಮವಾಗಿ ಮೂಡಿಬಂದಿದೆ. ಎಲ್ಲಾ ಭಾಷೆಗಳ ಜನರು ನೋಡುವ ಕಥಾಹಂದರ ಹೊಂದಿದೆ. ಈಗ ದೇಶಾದ್ಯಂತ ಚುನಾವಣೆ ಕಾವು ಇದ್ದು, ಸರಿಯಾದ ಸಮಯ ನೋಡಿಕೊಂಡು ಚಿತ್ರ ಬಿಡುಗಡೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಕಾರಣಗಳಿಂದ ನಮ್ಮ ಚಿತ್ರವನ್ನು ಮೇ 10ರಂದು ಬಿಡುಗಡೆ ಮಾಡುತ್ತಿಲ್ಲ. ಮುಂದಿನ ದಿನಾಂಕವನ್ನು ಸದ್ಯದಲ್ಲೇ ತಿಳಿಸುತ್ತೇವೆ’ ಎಂದು ನಿರ್ಮಾಪಕ ತರುಣ್ ಶಿವಪ್ಪ ತಿಳಿಸಿದ್ದಾರೆ‌.

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಈ ಚಿತ್ರವನ್ನು ನಿರ್ಮಿಸಿದ್ದಾರೆ. ‘ಕರ್ವ’ ಖ್ಯಾತಿಯ ನವನೀತ್ ನಿರ್ದೇಶಿಸಿರುವ ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿ ಚಿಕ್ಕಣ್ಣ, ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ನಟಿಸಿದ್ದಾರೆ. ಅನುಪ್ ಕಟ್ಟುಕಾರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ ಸಿನಿಮಾಗೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ಸಂಯೋಜಿಸಿದ್ದಾರೆ.

LEAVE A REPLY

Connect with

Please enter your comment!
Please enter your name here