‘ಲವ್‌ ಮಾಕ್ಟೇಲ್‌’ ಸಿನಿಮಾ ಖ್ಯಾತಿಯ ಅಭಿಲಾಷ್‌ ಅಭಿನಯದ ‘ಕ್ರೇಜಿ ಕೀರ್ತಿ’ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ಬಾಲಾಜಿ ಮಾಧವ ಶೆಟ್ಟಿ ನಿರ್ಮಿಸಿ, ನಿರ್ದೇಶಿಸುತ್ತಿರುವ ಚಿತ್ರವಿದು. ಚಿತ್ರನಿರ್ದೇಶಕ ಓಂಪ್ರಕಾಶ್‌ ರಾವ್‌ ಚಿತ್ರದಲ್ಲಿ ನಟಿಸಿದ್ದು, ಕ್ರಿಯೇಟಿವ್‌ ಡೈರೆಕ್ಟರ್‌ ಆಗಿಯೂ ಕಾರ್ಯನಿರ್ವಹಿಸಿದ್ದಾರೆ.

‘ಲವ್‌ ಮಾಕ್ಟೇಲ್‌’ ಖ್ಯಾತಿಯ ಅಭಿಲಾಷ್‌ ನಾಯಕನಾಗಿ ನಟಿಸಿರುವ ‘ಕ್ರೇಜಿ ಕೀರ್ತಿ’ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ಬಾಲಾಜಿ ಮಾಧವ ಶೆಟ್ಟಿ ನಿರ್ಮಿಸಿ, ನಿರ್ದೇಶಿಸುತ್ತಿರುವ ಚಿತ್ರಕ್ಕೆ ಓಂ ಪ್ರಕಾಶ್‌ ರಾವ್‌ ಕ್ರಿಯೇಟಿವ್‌ ಡೈರೆಕ್ಟರ್‌ ಆಗಿ ಕಾರ್ಯನಿರ್ವಹಿಸಿದ್ದಾರೆ. ಚಿತ್ರ ಬಗ್ಗೆ ಮಾತನಾಡುವ ನಿರ್ದೇಶಕ ಬಾಲಾಜಿ ಮಾಧವ ಶೆಟ್ಟಿ, ‘ಇದು ನನ್ನ ಮೊದಲ ಸಿನಿಮಾ. ಸಾಕಷ್ಟು ಶ್ರಮವಹಿಸಿ ಸಿನಿಮಾ‌ ಮಾಡಿದ್ದೇವೆ. ಯುವಜನತೆಗೆ ಕನೆಕ್ಟ್‌ ಆಗುವ ಕಾಲೇಜು ವಿದ್ಯಾರ್ಥಿಗಳ ಲೈಫ್‌ಸ್ಟೈಲ್ ಇದರಲ್ಲಿದೆ. ಒಂದೊಳ್ಳೆ ರೊಮ್ಯಾಂಟಿಕ್ ಕಥೆ. ಮನಸ್ಸಿಗೆ ಇಷ್ಟವಾಗುವಂತಹ ಹಾಡುಗಳು ಸಿನಿಮಾದ ಪ್ಲಸ್ ಪಾಯಿಂಟ್. ಇನ್ನು ಈ ಸಿನಿಮಾ ಚೆನ್ನಾಗಿ ಮೂಡಿ ಬರಲು ಕಾರಣ ಓಂ ಪ್ರಕಾಶ್ ರಾವ್. ಚಿತ್ರದಲ್ಲಿ ಅವರು ಪಾತ್ರ ನಿರ್ವಹಿಸುವುದರ ಜೊತೆಗೆ ಸಿನಿಮಾ ಹೇಗಿರಬೇಕು ಎಂಬ ವಿಷಯಗಳ ಬಗ್ಗೆ ತಿಳಿ ಹೇಳಿದ್ದಾರೆʼ ಎಂದಿದ್ದಾರೆ.

ಚಿತ್ರಕ್ಕೆ ಕ್ರಿಯೇಟಿವ್‌ ಡೈರೆಕ್ಟರ್‌ ಆಗಿ ಕೆಲಸ ಮಾಡಿರುವ ಓಂಪ್ರಕಾಶ್‌ ರಾವ್‌, ‘ಈ ಸಿನಿಮಾದಲ್ಲಿ ನನಗೆ ಕೆಲಸ ಮಾಡಲು ನಿರ್ದೇಶಕರು ಅವಕಾಶ ಕೊಟ್ಟಿದ್ದಾರೆ. ಮೊದಲು ಒಂದು ಪಾತ್ರವಿದೆ. ಅದನ್ನು ನೀವೇ ಮಾಡಬೇಕು ಅಂತ ಹೇಳಿದಾಗ ಕತೆ ಕೇಳಿದೆ. ಚೆನ್ನಾಗಿದೆ ಅನ್ನಿಸಿತು, ಒಪ್ಪಿಕೊಂಡೆ. ಇನ್ನು ಕೊರೊನಾ ಸಮಯದಲ್ಲಿ ನನಗೆ ಈ ಸಿನಿಮಾದಲ್ಲಿ ಕೆಲಸ‌ ಮಾಡುವ ಅವಕಾಶ ಕೊಟ್ಟಿದ್ದು ವಿಶೇಷ. ಆ ಕಾರಣಕ್ಕೆ ನಾನು ಸಿನಿಮಾದ ತೆರೆಯ ಮೇಲೂ ಮತ್ತು ಹಿಂದೆಯೂ ಇದ್ದು, ಒಂದೊಳ್ಳೆಯ ಸಿನಿಮಾ ಆಗಲು ಅವರ ಜೊತೆ ಕೈ ಜೋಡಿಸಿದ್ದೇನೆ’ ಎಂದಿದ್ದಾರೆ. ಚಿತ್ರದ ನಾಯಕಿಯಾಗಿ ಸಾರಿಕಾ ರಾವ್‌ ಇದ್ದಾರೆ. ರಂಗಾಯಣ ರಘು, ಪದ್ಮಜಾ ರಾವ್, ಪ್ರಕಾಶ್ ಶೆಣೈ, ಆಶಾ ಸುಜಯ್ ಚಿತ್ರದ ಪ್ರಮುಖ ಕಲಾವಿದರು. ಮನೋಹರ ಛಾಯಾಗ್ರಹಣ, ಲಕ್ಷ್ಮೀನಾರಾಯಣ ರೆಡ್ಡಿ ಸಂಕಲನ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here