ರಾಷ್ಟ್ರೀಯ, ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿ, ಗೌರವ ಪಡೆದ ‘ದಾರಿ ಯಾವುದಯ್ಯ ವೈಕುಂಠಕೆ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಸಿದ್ದು ಪೂರ್ಣಚಂದ್ರ ನಿರ್ದೇಶನದ ಸಿನಿಮಾದ ನಾಯಕನಟನಾಗಿ ವರ್ಧನ್‌ ನಟಿಸಿದ್ದಾರೆ.

“ನನ್ನ ಮೊದಲ ಚಿತ್ರ ‘ಕೃಷ್ಣ ಗಾರ್ಮೆಂಟ್ಸ್’ ನಿರೀಕ್ಷಿತ ಗೆಲವು ಕಾಣಲಿಲ್ಲ. ಎರಡನೇ ಚಿತ್ರ ‘ದಾರಿ ಯಾವುದಯ್ಯ ವೈಕುಂಠಕೆ’ ಬಿಡುಗಡೆಗೆ ಮುನ್ನವೇ ಜನಪ್ರಿಯವಾಗಿದೆ.‌ ನೂರೈವತ್ತಕ್ಕೂ ಅಧಿಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಈ ಚಿತ್ರದ ಬಹುಪಾಲು ಚಿತ್ರೀಕರಣ ರಾಮನಗರದ ಸ್ಮಶಾನದಲ್ಲಿ ನಡೆದಿದೆ.‌ ಅಲ್ಲಿ ಹೋಗಿ ಹಿರಿಯರ ಆಶೀರ್ವಾದ ಪಡೆದುಕೊಂಡು ಬಂದಿದ್ದೇನೆ. ಈ ನನ್ನ ಸಿನಿಮಾದ ಕನಸು ನನಸು ಮಾಡಿದ ನಿರ್ಮಾಪಕರಿಗೆ ಧನ್ಯವಾದ” ಎಂದು ನಿರ್ಮಾಪಕರಿಗೆ ಕೃತಜ್ಞತೆ ಅರ್ಪಿಸಿದರು ನಿರ್ದೇಶಕ ಸಿದ್ದು ಪೂರ್ಣಚಂದ್ರ. ‘ದಾರಿ ಯಾವುದಯ್ಯ ವೈಕುಂಠಕೆ’ ಚಿತ್ರದ ಟ್ರೈಲರ್‌ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಚಿತ್ರದ ನಿರ್ಮಾಪಕ ಶರಣಪ್ಪ ಎಂ. ಕೊಟಗಿ ಅವರು ಮಾತನಾಡಿ, “ಈ ಚಿತ್ರದ ಕತೆ ಕೇಳಿದ ದಿನವೇ ನಿರ್ಮಾಣ ಮಾಡಬೇಕೆಂದು ಮನಸ್ಸು ಮಾಡಿದ್ದೆ. ನನ್ನ ಸ್ನೇಹಿತ ಪ್ರಶಾಂತ್ ವರ್ಕು ಅವರ ಮೂಲಕ ನಿರ್ದೇಶಕ ಸಿದ್ದು ಪೂರ್ಣಚಂದ್ರ ಪರಿಚಯವಾದರು. ಉತ್ತಮ ಚಿತ್ರ ಮಾಡಿಕೊಟ್ಟಿದ್ದಕ್ಕೆ ಸಿದ್ದು ಅವರಿಗೆ ವಂದನೆ” ಎಂದು ನಿರ್ದೇಶಕರಿಗೆ ಧನ್ಯವಾದ ಹೇಳಿದರು. “ನನಗೆ ಉತ್ತಮ ಪಾತ್ರ ನೀಡಿದ ನಿರ್ದೇಶಕರಿಗೆ ನಾನು ಆಭಾರಿ. ಚಿಕ್ಕವಯಸ್ಸಿನಲ್ಲಿ ಅಶೋಕ ಹೋಟೆಲ್‌ ಮುಂದೆ ಓಡಾಡುವಾಗ ಒಂದು ದಿನ ಈ ಹೋಟೆಲ್ ಒಳಗೆ ಹೋಗಬೇಕು ಅಂದುಕೊಳ್ಳುತ್ತಿದೆ. ಈಗ ಇದೇ ಹೋಟೆಲ್ ನಲ್ಲಿ ನನ್ನ ಸಿನಿಮಾದ ಟ್ರೇಲರ್ ಬಿಡುಗಡೆಯಾಗುತ್ತಿದೆ” ಎನ್ನುವ ಖುಷಿ ನಾಯಕನಟ ವರ್ಧನ್‌ ಅವರದು. ಇದೇ ಸಂದರ್ಭದಲ್ಲಿ ದಿಲೀಪ್ ಅವರ ಸಾರಥ್ಯದ ‘ಮ್ಯೂಸಿಕ್ ಬಾಕ್ಸ್’ ಆಡಿಯೋ ಕಂಪನಿಯನ್ನು ಹಿರಿಯ ಛಾಯಾಗ್ರಾಹಕ ಜೆ.ಜಿ.ಕೃಷ್ಣ, ಪಿಆರ್‌ಓ ಸುಧೀಂದ್ರ ವೆಂಕಟೇಶ್ ಹಾಗೂ ಗಾಯಕ ಶಶಿಧರ್ ಕೋಟೆ ಬಿಡುಗಡೆ ಮಾಡಿದರು.‌

LEAVE A REPLY

Connect with

Please enter your comment!
Please enter your name here