ಪ್ರಕಾಶ್‌ ವೀರ್‌ ಕತೆ, ಚಿತ್ರಕಥೆ ರಚಿಸಿ, ನಿರ್ಮಿಸಿ – ನಿರ್ದೇಶಿಸುತ್ತಿರುವ ‘ಡೆವಿಲ್‌’ ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಆರಂಭವಾಗಿದೆ. ಬೆಂಗಳೂರಿನಲ್ಲಿ ಶೂಟಿಂಗ್‌ ನಡೆಯುತ್ತಿದ್ದು, ಮುಂದಿನ ವಾರ ಹೀರೋ ದರ್ಶನ್‌ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

ದರ್ಶನ್‌ ಅಭಿನಯದ ಬಹುನಿರೀಕ್ಷಿತ ‘ಡೆವಿಲ್‌’ ಸಿನಿಮಾದ ಸೆಕೆಂಡ್‌ ಶೆಡ್ಯೂಲ್‌ ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ. ಬೆಂಗಳೂರಿನಲ್ಲಿ ಶೂಟಿಂಗ್‌ ನಡೆಯುತ್ತಿದ್ದು, ಮುಂದಿನ ವಾರದಿಂದ ಹೀರೋ ದರ್ಶನ್‌ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಈ ಕುರಿತು ಮಾತನಾಡಿರುವ ಚಿತ್ರದ ನಿರ್ಮಾಪಕ – ನಿರ್ದೇಶಕ ಪ್ರಕಾಶ್‌ ವೀರ್‌, ‘ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇರುವುದರಿಂದ ಈ ಹಂತದಲ್ಲಿ ಬರೀ ಮಾತಿನ ಭಾಗದ ಚಿತ್ರೀಕರಣ ಮಾಡಲಾಗುವುದು. ಸಾಹಸ ಸನ್ನಿವೇಶಗಳ ಚಿತ್ರೀಕರಣವಾಗಲಿ ಅಥವಾ ಬೇರೆ ಯಾವುದೇ ರಿಸ್ಕ್ ಇರುವ ಸನ್ನಿವೇಶಗಳ ಚಿತ್ರೀಕರಣ ಮಾಡುವುದಿಲ್ಲ. ಬೆಂಗಳೂರು, ಮೈಸೂರು, ಹೈದರಾಬಾದ್ ಹಾಗೂ ರಾಜಸ್ಥಾನದಲ್ಲಿ ಎರಡನೇ ಹಂತದ ಚಿತ್ರೀಕರಣ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ’ ಎಂದಿದ್ದಾರೆ.

ಪ್ರಕಾಶ್‌ ವೀರ್‌ ಅವರು ತಮ್ಮ ಶ್ರೀ ಜೈ ಮಾತಾ ಕಂಬೈನ್ಸ್ ಬ್ಯಾನರ್‌ನಡಿ ನಿರ್ಮಿಸುತ್ತಿರುವ ಚಿತ್ರದ ನಾಯಕಿ ರಚನಾ ರೈ. ತುಳಸಿ, ‌ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸ ಪ್ರಭು, ಶೋಭ್ ರಾಜ್ ಎರಡನೇ ಹಂತದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಧಾಕರ್ ಎಸ್ ರಾಜ್ ಛಾಯಾಗ್ರಹಣ, ಬಿ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ, ರಾಮ್ – ಲಕ್ಷ್ಮಣ್ ಸಾಹಸ ಸಂಯೋಜನೆ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here