ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಜೈಲು ಸೇರಿದ್ದಾರೆ. ಪೊಲೀಸ್‌ ಕಸ್ಟಡಿಯಲ್ಲಿದ್ದ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯ ನಟನಿಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರಿಗೆ ನ್ಯಾಯಾಲಯ ಜುಲೈ 4ರವರೆಗೆ ನ್ಯಾಯಾಂಗ ಬಂಧನದ ಆದೇಶ ನೀಡಿದೆ. ನಟ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಹದಿಮೂರು ವರ್ಷಗಳ ಹಿಂದೆ ಪತ್ನಿ ವಿಜಯಲಕ್ಷ್ಮಿ ಅವರನ್ನು ಥಳಿಸಿದ ಘಟನೆಗೆ ಸಂಬಂಧಿಸಿದಂತೆ ದರ್ಶನ್‌ 14 ದಿನಗಳ ಕಾಲ ಪರಪ್ಪನ ಜೈಲಿನಲ್ಲಿದ್ದರು. ಈಗ ಎರಡನೇ ಬಾರಿ ಅವರು ಜೈಲು ಪಾಲಾಗಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲನೇ ಆರೋಪಿ ಪವಿತ್ರಾ ಗೌಡ ಈಗಾಗಲೇ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಎರಡನೇ ಆರೋಪಿ ದರ್ಶನ್ ಸೇರಿದಂತೆ ಪ್ರದೋಶ್, ವಿನಯ್ ಹಾಗೂ ಧನರಾಜ್‌ರನ್ನು ಎರಡು ದಿನ ಹೆಚ್ಚುವರಿಯಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಈಗ ಪೊಲೀಸ್ ಕಸ್ಟಡಿ ಅವಧಿ ಮುಗಿಯುತ್ತಿದ್ದಂತೆ ಜುಲೈ 4ನೇ ತಾರೀಕಿನವರೆಗೂ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ದೊಡ್ಡ ಅಭಿಮಾನಿ ಬಳಗ ಹೊಂದಿರುವ ದರ್ಶನ್‌ ಜೈಲು ಸೇರುವುದು ಖಚಿತವಾಗುತ್ತಿದ್ದಂತೆ ಪೊಲೀಸರು ಪರಪ್ಪನ ಅಗ್ರಹಾರದ ಸುತ್ತ ಬಿಗಿ ಬಂದೋಬಸ್ತ್‌ ಹಾಕಿದ್ದಾರೆ. ದರ್ಶನ್‌ ಮತ್ತು ಸಹಚರರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯುವ ಮಾರ್ಗದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ಡಿಸಿಪಿ ಸಿ ಕೆ ಬಾಬಾ ನೇತೃತ್ವದಲ್ಲಿ ಎಸಿಪಿ ಶಿವಶಂಕರ್, ಎಸಿಪಿ ಮಂಜುನಾಥ್, 5 ಇನ್ಸ್ ಪೆಕ್ಟರ್, 10 ಸಬ್ ಇನ್ಸ್ ಪೆಕ್ಟರ್, 3 KSRP ತುಕಡಿಗಳನ್ನು ಒಳಗೊಂಡ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು.

LEAVE A REPLY

Connect with

Please enter your comment!
Please enter your name here