ಉತ್ತರ ಕರ್ನಾಟಕ ನೇಟಿವಿಟಿಯ ‘ದೇಸಾಯಿ’ ಸಿನಿಮಾಗೆ ಮಾತಿನ ಭಾಗದ ಚಿತ್ರೀಕರಣ ಪೂರ್ಣಗೊಂಡಿದ್ದು, ಸದ್ಯ ಡಬ್ಬಿಂಗ್‌ ನಡೆಯುತ್ತಿದೆ. ‘ಲವ್ 360’ ಖ್ಯಾತಿಯ ಪ್ರವೀಣ್ ಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದು, ನಾಯಕಿಯಾಗಿ ಮೈಸೂರಿನ ರಾಧ್ಯ ಇದ್ದಾರೆ.

ನಾಗಿರೆಡ್ಡಿ ಭಡ ನಿರ್ದೇಶನದ ‘ದೇಸಾಯಿ’ ಚಿತ್ರಕ್ಕೆ ಮಾತಿನ ಜೋಡಣೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಿದು. ಉತ್ತರ ಕರ್ನಾಟಕ ನೇಟಿವಿಟಿಯ ಈ ಚಿತ್ರಕ್ಕೆ ಬಾದಾಮಿ, ಬಾಗಲಕೋಟೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳದಗುಡ್ಡ ಚಿತ್ರಕ್ಕೆ ಕತೆ ಬರೆದು ನಿರ್ಮಿಸುತ್ತಿದ್ದಾರೆ.

‘ಲವ್ 360’ ಖ್ಯಾತಿಯ ಪ್ರವೀಣ್ ಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದು, ನಾಯಕಿಯಾಗಿ ಮೈಸೂರಿನ ರಾಧ್ಯ ಇದ್ದಾರೆ. ‘ಒರಟ’ ಪ್ರಶಾಂತ್, ಚೆಲುವರಾಜು, ಮಧುಸೂದನ್ ರಾವ್, ಕಲ್ಯಾಣಿ, ಹರಿಣಿ, ನಟನಾ ಪ್ರಶಾಂತ್, ಮಂಜುನಾಥ್ ಹೆಗಡೆ, ಸೃಷ್ಟಿ (ಕಾಂತಾರ) ಮುಂತಾದವರು ತಾರಾಬಳಗದಲ್ಲಿದ್ದಾರೆ. ಕಳೆದ ಇಪ್ಪತ್ತು ವರ್ಷಗಳಿಂದ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಾಗಿರೆಡ್ಡಿ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ನಿರ್ಮಾಪಕ ಮಹಾಂತೇಶ್ ಅವರಿಗೂ ‘ದೇಸಾಯಿ’ ಮೊದಲ ನಿರ್ಮಾಣದ ಚಿತ್ರ.

LEAVE A REPLY

Connect with

Please enter your comment!
Please enter your name here