ಕರ್ಣನ್‌ ಕತೆ, ಚಿತ್ರಕಥೆ, ಸಂಭಾಷಣೆ ರಚಿಸಿ ನಿರ್ದೇಶಿಸಿರುವ ‘ಧೀರ ಭಗತ್ ರಾಯ್’ ಪೊಲಿಟಿಕಲ್‌ ಡ್ರಾಮಾ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ರಾಕೇಶ್‌ ದಳವಾಯಿ ಮತ್ತು ಸುಚರಿತ ಸಹಾಯ ರಾಜ್‌ ಮುಖ್ಯಭೂಮಿಕೆಯಲ್ಲಿರುವ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿದ್ದಾರೆ.

ಸ್ಯಾಂಡಲ್‌ವುಡ್‌ಗೆ ಹೊಸಬರ ಆಗಮನ ಹೊಸದೇನಲ್ಲ. ಇತ್ತೀಚಿನ ದಿನಗಳಲ್ಲಿ ಈ ಪ್ರಮಾಣ ಕೊಂಚ ಹೆಚ್ಚೇ ಆಗುತ್ತಿದೆ. ಅದೇ ಭರವಸೆಯೊಂದಿಗೆ ಯುವ ಉತ್ಸಾಹಿ ಸಿನಿಮಾ ತಂಡವೊಂದು ಪ್ರವೇಶ ಮಾಡಿದೆ. ಎಂಟು ವರ್ಷಗಳ ಕಾಲ ಹಲವು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಕರ್ಣನ್ ಎಸ್. ಕಥೆ ಚಿತ್ರಕಥೆ, ಸಂಭಾಷಣೆ ಬರೆದು ‘ಧೀರ ಭಗತ್‌ ರಾಯ್‌’ ಸಿನಿಮಾ ನಿರ್ದೇಶಿಸಿದ್ದಾರೆ. ಆಕ್ಷನ್ ಪೊಲಿಟಿಕಲ್ ಡ್ರಾಮಾ ಧೀರ ಭಗತ್ ರಾಯ್ ಸಿನಿಮಾದಲ್ಲಿ ರಾಕೇಶ್ ದಳವಾಯಿ ಹೀರೋ. ಸುಚರಿತ ಸಹಾಯ ರಾಜ್ ನಾಯಕಿಯಾಗಿ ಬಣ್ಣ ಹಚ್ಚಿದ್ದು, ಶರತ್ ಲೋಹಿತಾಶ್ವ ಖಳಪಾತ್ರದಲ್ಲಿದ್ದಾರೆ. ಅಧಿಕಾರಕ್ಕಾಗಿ ನಡೆಯುವ ಹೋರಾಟ, ಪ್ರೀತಿ-ಮಮತೆಯ ಸುತ್ತ ನಡೆಯುವ ಬಾಂಧವ್ಯದ ಕಥೆಯಿದು.

ಓಂ ಸಿನಿ ಎಂಟರ್‌ಟೇನರ್ಸ್‌ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಧೀರ ಭಗತ್ ರಾಯ್ ಸಿನಿಮಾಗೆ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿದ್ದು, ವಿಶ್ವ ಸಂಕಲನ, ಎಂ.ಸೆಲ್ವಂ.ಜಾನ್ ಛಾಯಾಗ್ರಹಣ, ಕರಿಯಪ್ಪ ಎಸ್ ಪಾಲವ್ವನ ಹಳ್ಳಿ ಸಹ ನಿರ್ಮಾಣದ ಹೊಣೆ ಹತ್ತಿದ್ದಾರೆ. ಪ್ರವೀಣ್ ಎಚ್.ಸಿ, ತ್ರಿವಿಕ್ರಮ್,‌ ಮಠ‌ ಕೊಪ್ಪಳ, ಸುಧೀರ್ ಕುಮಾರ್ ಮುರೊಳ್ಳಿ ಗೋವಿಂದ್, ಶಶಿಕುಮಾರ್, ಫಾರೂಕ್ ಅಹ್ಮದ್ ಇತರೆ ಪಾತ್ರಗಳಲ್ಲಿ ನಟಿಸಿದ್ದಾರೆ. ಧೀರ ಭಗತ್ ರಾಯ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಪ್ರಾಮಿಸಿಂಗ್ ಆಗಿದೆ. ಈಗಾಗಲೇ ಶೇಕಡ 60ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಉಳಿದ ಭಾಗದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದೆ.

LEAVE A REPLY

Connect with

Please enter your comment!
Please enter your name here