ಧ್ರುವ ಸರ್ಜಾ ನಟನೆಯ ‘ಮಾರ್ಟಿನ್‌’ ಸಿನಿಮಾಗೆ ಕಾಶ್ಮೀರದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಎ.ಪಿ.ಅರ್ಜುನ್‌ ನಿರ್ದೇಶನದ ಆಕ್ಷನ್‌ – ಥ್ರಿಲ್ಲರ್‌ ಸಿನಿಮಾ ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ವೈಭವಿ ಶಾಂಡಿಲ್ಯ ಚಿತ್ರದ ಹಿರೋಯಿನ್‌.

ಎ.ಪಿ.ಅರ್ಜುನ್‌ ನಿರ್ದೇಶನದ ‘ಅದ್ಧೂರಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ನಟ ಧ್ರುವ ಸರ್ಜಾ, ಮತ್ತೊಮ್ಮೆ ಅದೇ ನಿರ್ದೇಶಕರ ಜೊತೆ ಕೆಲಸ ಮಾಡುತ್ತಿರುವ ಚಿತ್ರ ‘ಮಾರ್ಟಿನ್’. ವಾಸವಿ ಎಂಟರ್ ಪ್ರೈಸಸ್ ಮೂಲಕ ಉದಯ್ ಕೆ.ಮೆಹ್ತಾ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರಲಿರುವ ಈ ಚಿತ್ರದ ಚಿತ್ರೀಕರಣ ಕಾಶ್ಮೀರದ ಸುಂದರ ತಾಣಗಳಲ್ಲಿ ನಡೆಯುತ್ತಿದೆ. ಕಳೆದ 8 ದಿನಗಳಿಂದ ಕಾಶ್ಮೀರದಲ್ಲಿ ಮೈನಸ್ 7 ಡಿಗ್ರೀ ತಾಪಮಾನ ಇರುವ ಲೊಕೇಶನ್‌ಗಳಲ್ಲಿ ಚಿತ್ರತಂಡ ಶೂಟಿಂಗ್ ನಡೆಸುತ್ತಿದೆ. ಕಾಶ್ಮೀರದ ಐಸ್ ವಾರ್ ಸಾಹಸ ದೃಶ್ಯಗಳ ಜೊತೆಗೆ ರೋಮಾಂಚನಕಾರಿ ಸ್ಕೇಟಿಂಗ್ ಆ್ಯಕ್ಷನ್ ಸೀನ್‌ಗಳನ್ನು ಅಲ್ಲಿ ಚಿತ್ರೀಕರಿಸಲಾಗುತ್ತಿದೆ. ಚಿತ್ರೀಕರಣದಲ್ಲಿ ನಾಯಕ ಧೃವಸರ್ಜಾ, ನಾಯಕಿ ವೈಭವಿ ಶಾಂಡಿಲ್ಯ, ಚಿಕ್ಕಣ್ಣ ಹಾಗೂ ಸಹ ಕಲಾವಿದರುಗಳು ಭಾಗವಹಿಸಿದ್ದಾರೆ.

ಆಕ್ಷನ್ ಸನ್ನಿವೇಶಗಳ ಜೊತೆಗೆ ಮಾತಿನ ಭಾಗದ ಸನ್ನಿವೇಶಗಳೂ ಸೇರಿದಂತೆ ಚಿತ್ರದ ಪ್ರಮಖ ದೃಶ್ಯಗಳನ್ನು ಇಲ್ಲಿ ಸೆರೆ ಹಿಡಿಯಲಾಗುವುದು. ಇನ್ನೂ 8 ದಿನಗಳ ಕಾಲ ಅಲ್ಲೇ ಶೂಟಿಂಗ್ ನಡೆಸಲಿರುವ ಚಿತ್ರತಂಡ ಒಟ್ಟು 16 ದಿನಗಳ ಶೂಟಿಂಗ್ ಶೆಡ್ಯೂಲ್ ಹಾಕಿಕೊಂಡಿದೆ. ಆ್ಯಕ್ಷನ್ – ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ನಿರ್ದೇಶಕ ಎ.ಪಿ.ಅರ್ಜುನ್ ಅವರು ಹೊಸ ಮಾದರಿಯ ಮೇಕಿಂಗ್ ಟ್ರೈ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಎಲ್ಲಾ ಭಾಗಕ್ಕೂ ಸಲ್ಲುವ ಕಥೆ ಇದಾಗಿರುವುದರಿಂದ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ‘ಮಾರ್ಟಿನ್’ ಚಿತ್ರ ನಿರ್ಮಾಣವಾಗುತ್ತಿದೆ. ತೆಲುಗಿನಲ್ಲಿ ದೊಡ್ಡ ಹೆಸರು ಮಾಡಿರುವ ಮಣಿಶರ್ಮಾ ಅವರು ಸಿನಿಮಾಗೆ ಸಂಗೀತ ನಿರ್ದೇಶಿಸುತ್ತಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ, ಮಹೇಶ್ ರೆಡ್ಡಿ ಸಂಕಲನ ಚಿತ್ರಕ್ಕಿದೆ.

Previous articleಟೀಸರ್‌ | ಅಭಿಷೇಕ್‌ ಬಚ್ಚನ್‌ ‘ದಸ್ವೀ’; ನೆಟ್‌ಫ್ಲಿಕ್ಸ್‌, ಜಿಯೋ ಸಿನಿಮಾಸ್‌ನಲ್ಲಿ ಚಿತ್ರ
Next articleಬಿಡುಗಡೆಗೆ ಮುನ್ನವೇ ಡಿಜಿಟಲ್ ಹಕ್ಕು ಮಾರಾಟ; ದಿನೇಶ್‌ ಬಾಬು ‘ಕಸ್ತೂರಿ ಮಹಲ್’

LEAVE A REPLY

Connect with

Please enter your comment!
Please enter your name here