ನಟ ಡಾರ್ಲಿಂಗ್‌ ಕೃಷ್ಣ ಅವರು ‘ದಿಲ್‌ ಖುಷ್‌’ ಟೀಸರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಪ್ರಮೋದ್‌ ಜಯ ನಿರ್ದೇಶನದ ಈ ರೊಮ್ಯಾಂಟಿಕ್‌ ಕಾಮಿಡಿ ಚಿತ್ರದ ಮುಖ್ಯಭೂಮಿಕೆಯಲ್ಲಿ ರಂಜಿತ್‌, ಸ್ಪಂದನ ಸೋಮಣ್ಣ ನಟಿಸಿದ್ದಾರೆ.

ಪ್ರಮೋದ್‌ ಜಯ ನಿರ್ದೇಶನದ ರೊಮ್ಯಾಂಟಿಕ್‌ ಕಾಮಿಡಿ ‘ದಿಲ್‌ ಖುಷ್‌’ ಟೀಸರ್‌ ಬಿಡುಗಡೆಯಾಗಿದೆ. ನಟ ಡಾರ್ಲಿಂಗ್ ಕೃಷ್ಣ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ‘ದಿಲ್ ಖುಷ್ ಎಂದರೆ ನಾಯಕ – ನಾಯಕಿ ಹೆಸರು. ದಿಲ್ಮಯ ನಾಯಕಿಯ ಹೆಸರಾದರೆ, ಕುಷಾಲ್ ನಾಯಕನ ಹೆಸರು. ಮನೆಮಂದಿಯಲ್ಲಾ ಕುಳಿತು ನೋಡುವ ಈ ಕೌಟುಂಬಿಕ ಚಿತ್ರವಿದು’ ಎನ್ನುತ್ತಾರೆ ನಿರ್ದೇಶಕ ಪ್ರಮೋದ್ ಜಯ. ರಂಜಿತ್ ಚಿತ್ರದ ನಾಯಕನಾಗಿ, ಸ್ಪಂದನ ಸೋಮಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ. ರಂಗಾಯಣ ರಘು, ಅರುಣಾ ಬಾಲರಾಜ್, ರಘು ರಾಮನಕೊಪ್ಪ, ರವಿ ಭಟ್, ಧರ್ಮಣ್ಣ ಕಡೂರು, ಸೂರ್ಯ ಪ್ರವೀಣ್ ಚಿತ್ರದ ಇತರೆ ಪ್ರಮುಖ ಕಲಾವಿದರು. ಬೆಂಗಳೂರು, ಕೊಡಗಿನ ಸೋಮವಾರಪೇಟೆ,‌ ಶನಿವಾರಸಂತೆಯಲ್ಲಿ ಬಹುಪಾಲು ಚಿತ್ರೀಕರಣ ನಡೆದಿದೆ. ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಪ್ರಸಾದ್ ಕೆ ಶೆಟ್ಟಿ ಸಂಗೀತ, ನಿವಾಸ್ ನಾರಾಯಣ್ ಛಾಯಾಗ್ರಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ ಮತ್ತು ವಿಕ್ರಂ, ಅಶೋಕ್‌ ಸಾಹಸ ನಿರ್ದೇಶನ ಚಿತ್ರಕ್ಕಿದೆ.

https://youtu.be/GLqqagMdzyU

LEAVE A REPLY

Connect with

Please enter your comment!
Please enter your name here