ರಂಜಿತ್‌ ಮತ್ತು ಸ್ಪಂದನ ಸೋಮಣ್ಣ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ದಿಲ್‌ ಖುಷ್‌’ ಸಿನಿಮಾ ಇದೇ ಮಾರ್ಚ್‌ 22ರಂದು ತೆರೆಕಾಣಲಿದೆ. ಪ್ರಮೋದ್‌ ಜಯ ನಿರ್ದೇಶನದ ಚಿತ್ರಕ್ಕೆ ಪ್ರಸಾದ್‌ ಕೆ ಶಟ್ಟಿ ಸಂಗೀತ ಸಂಯೋಜಿಸಿದ್ದಾರೆ.

ಪ್ರಮೋದ್ ಜಯ ನಿರ್ದೇಶನದ ‘ದಿಲ್ ಖುಷ್’ ಸಿನಿಮಾ ಇದೇ ಮಾರ್ಚ್ 22ರಂದು ತೆರೆಗೆ ಬರಲಿದೆ. ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವು ಟೀಸರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಳ್ಳುತ್ತಿದ್ದು, ಸದ್ಯದಲ್ಲೇ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ನಾಯಕ ನಟನಾಗಿ ರಂಜಿತ್ ಕಾಣಿಸಿಕೊಂಡಿದ್ದು, ಸ್ಪಂದನ ಸೋಮಣ್ಣ ಈ ಚಿತ್ರದ ನಾಯಕಿ. ರಂಗಾಯಣ ರಘು, ಧರ್ಮಣ್ಣ ಕಡೂರು, ರವಿ ಭಟ್, ಅರುಣ ಬಾಲರಾಜ್, ರಘು ರಾಮನಕೊಪ್ಪ, ಸೂರ್ಯ ಪ್ರವೀಣ್, ಮಧುಸೂದನ್ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ. ಐದು ಹಾಡುಗಳಿರುವ ಈ ಚಿತ್ರಕ್ಕೆ ಪ್ರಸಾದ್ ಕೆ ಶೆಟ್ಟಿ ಅವರ ಸಂಗೀತ ಸಂಯೋಜನೆ, ಪ್ರದ್ಯೋತನ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ನಿವಾಸ್ ನಾರಾಯಣ್ ಛಾಯಾಗ್ರಹಣ, ಜ್ಞಾನೇಶ್ ಬಿ ಮಠದ್ ಸಂಕಲನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ನಿರ್ದೇಶಕ ಸಿಂಪಲ್ ಸುನಿ ಅವರ ಬಳಿ ಸಹಾಯಕ ನಿರ್ದೇಶಕನಾಗಿ ಕಾರ್ಯನಿರ್ವಹಿಸಿರುವ ಪ್ರಮೋದ್ ಜಯ ಅವರು ನಿರ್ದೇಶಿಸಿರುವ ಚೊಚ್ಚಲ ಚಿತ್ರವಿದು. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ. Jayaprabha Colour Frames ಬ್ಯಾನರ್‌ ಅಡಿಯಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ಸಿನಿಮಾ ನಿರ್ಮಿಸಿದ್ದಾರೆ.

https://youtu.be/GLqqagMdzyU

LEAVE A REPLY

Connect with

Please enter your comment!
Please enter your name here