ನಟ ಧನಂಜಯ ಅವರ ಡಾಲಿ ಪಿಕ್ಚರ್ಸ್‌ ಬ್ಯಾನರ್‌ನಡಿ ತಯಾರಾಗಿರುವ ‘ಟಗರು ಪಲ್ಯ’ ಸಿನಿಮಾದ ಪ್ರೊಮೋಷನಲ್‌ ಸಾಂಗ್‌ ಬಿಡುಗಡೆಯಾಗಿದೆ. ತೆರೆ ಮೇಲೆ ಕಾಣಿಸಿಕೊಂಡಿರುವ ಕಲಾವಿದರು ಹಾಗೂ ತೆರೆಯ ಹಿಂದೆ ದುಡಿದಿರುವ ತಂತ್ರಜ್ಞರು ಈ ಹಾಡಿನಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

‘ಟಗರು ಪಲ್ಯ’ ಸಿನಿಮಾ ಈ ವಾರ ತೆರೆಕಾಣಲಿದೆ. ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಟಗರು ಪಲ್ಯ ಸಿನಿಮಾ ಪ್ರಮೋಷನಲ್ ಹಾಡು ಬಿಡುಗಡೆಯಾಗಿದೆ. ‘ಸಂಬಂಜ ಅನ್ನೋದು ದೊಡ್ದು ಕನಾ’ ಎಂಬ ಹಾಡು ಡಾಲಿ ಪಿಕ್ಚರ್ಸ್‌ನಲ್ಲಿ ಅನಾವರಣಗೊಂಡಿದೆ. ಸಂಬಂಧಗಳ ಮೌಲ್ಯ ತಿಳಿಸಿಕೊಡುವ ಹಾಡಿಗೆ ಧನಂಜಯ್ ಸಾಹಿತ್ಯ ಬರೆದಿದ್ದು, ವಾಸುಕಿ ವೈಭವ್‌ ಸಂಗೀತ ಸಂಯೋಜಿಸಿದ್ದು ಜೋಗಿ ಪ್ರೇಮ್ ಧ್ವನಿಯಾಗಿದ್ದಾರೆ. ಈ ಹಾಡಿನ ವಿಶೇಷ ಏನೆಂದರೆ ತೆರೆ ಮೇಲಿನ ಕಲಾವಿದರು ಹಾಗೂ ತೆರೆಯ ಹಿಂದಿನ ತಂತ್ರಜ್ಞರು ಕಾಣಿಸಿಕೊಂಡಿರುವುದು.

‘ಟಗರು ಪಲ್ಯ’ ಚಿತ್ರವನ್ನು ಡಾಲಿ ಪಿಕ್ಚರ್ಸ್‌ ಬ್ಯಾನರ್‌ ಅಡಿ ನಟ ಧನಂಜಯ್‌ ನಿರ್ಮಿಸಿದ್ದಾರೆ. ಉಮೇಶ್‌ ಕೃಪ ನಿರ್ದೇಶನದ ಈ ಚಿತ್ರದ ಮೂಲಕ ನಟ ಪ್ರೇಮ್‌ ಪುತ್ರಿ ಅಮೃತಾ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಅಮೃತಾ ತಂದೆ ಪಾತ್ರದಲ್ಲಿ ರಂಗಾಯಣ ರಘು ಹಾಗೂ ತಾಯಿ ಪಾತ್ರದಲ್ಲಿ ತಾರಾ ಅನುರಾಧಾ ನಟಿಸಿದ್ದಾರೆ.‌ ‘ಇಕ್ಕಟ್’ ಖ್ಯಾತಿಯ ನಾಗಭೂಷಣ್ ನಾಯಕನಾಗಿ ಅಭಿನಯಿಸಿದ್ದು, ‘ಮೈಸೂರು ಆರ್ಕೆಸ್ಟ್ರಾ’ ಖ್ಯಾತಿಯ ಪೂರ್ಣಚಂದ್ರ, ವೈಜನಾಥ್‌ ಬಿರಾದಾರ್‌, ಚಿತ್ರಾ ಶೆಣೈ, ಶ್ರೀನಾಥ್‌ ವಸಿಷ್ಠ ಮುಖ್ಯ ಪಾತ್ರಗಳಲ್ಲಿದ್ದಾರೆ. ಚಿತ್ರದ ಹಾಡುಗಳಿಗೆ ವಾಸುಕಿ ವೈಭವ್‌ ಸಂಗೀತ ನೀಡಿದ್ದು ಅವರೂ ಕೂಡಾ ಒಂದು ಪಾತ್ರದಲ್ಲಿ ನಟಿಸಿದ್ದಾರೆ.

LEAVE A REPLY

Connect with

Please enter your comment!
Please enter your name here