ದುನಿಯಾ ವಿಜಯ್‌ ನಿರ್ದೇಶನದ ಎರಡನೇ ಸಿನಿಮಾ ‘ಭೀಮ’ ಸೆಟ್ಟೇರಿದೆ. ‘ಜಯಮ್ಮನ ಮಗ’ ಚಿತ್ರದಲ್ಲಿ ದುನಿಯಾ ವಿಜಯ್‌ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಕಲ್ಯಾಣಿ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬ್ಲ್ಯಾಕ್ ಡ್ರ್ಯಾಗನ್ ಮಂಜು ಚಿತ್ರದ ಪ್ರಮುಖ ಖಳನಟ.

ನಟ ದುನಿಯಾ ವಿಜಯ್ ‘ಸಲಗ’ ಚಿತ್ರದ ಮೂಲಕ ನಿರ್ದೇಶಕರಾಗಿ ಯಶಸ್ವಿಯಾದರು. ಅವರ ನಿರ್ದೇಶನದ ಎರಡನೇ ಸಿನಿಮಾ ‘ಭೀಮ’ಗೆ ಮುಹೂರ್ತ ನೆರವೇರಿದೆ. ಸಿನಿಮಾ ಬಗ್ಗೆ ಮಾತನಾಡಿದ ವಿಜಯ್‌, ”ಸಲಗ’ ನಂತರ ‘ಭೀಮ’ ಚಿತ್ರವನ್ನು ನಿರ್ದೇಶಿಸುತ್ತಿದ್ದೇನೆ. ಯುವ ಹಾಗೂ ಉತ್ಸಾಹಿ ನಿರ್ಮಾಪಕರಾದ ಜಗದೀಶ್ ಹಾಗೂ ಕೃಷ್ಣ ಸಾರ್ಥಕ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಾನು ಕಂಡ ಕೆಲವು ಘಟನೆಗಳನ್ನು ಆಧರಿಸಿ ಕತೆ ಸಿದ್ದಪಡಿಸಿಕೊಂಡಿದ್ದೀನಿ. ಚಿತ್ರಕ್ಕೆ ಶೀರ್ಷಿಕೆ ಏನಿಡಬೇಕೆಂದು ಬಹಳ ದಿನಗಳ ಚರ್ಚೆ ನಡೆದ ನಂತರ ‘ಭೀಮ’ ಎಂಬ ಶೀರ್ಷಿಕೆ ಆಯ್ಕೆ ಮಾಡಿಕೊಂಡಿದ್ದೇವೆ. ಶೀರ್ಷಿಕೆ ಕೊಡಿಸಿದ ಜಗದೀಶ್ ಅವರಿಗೆ ಧನ್ಯವಾದ. ಈ ಚಿತ್ರಕ್ಕೆ ಚರಣ್‌ರಾಜ್‌ ಸಂಗೀತ ನೀಡಲಿದ್ದಾರೆ” ಎಂದರು. ನಟರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್, ನಾಗಿ ಮುಂತಾದವರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

‘ಜಯಮ್ಮನ ಮಗ’ ಚಿತ್ರದಲ್ಲಿ ದುನಿಯಾ ವಿಜಯ್‌ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಕಲ್ಯಾಣಿ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬ್ಲ್ಯಾಕ್ ಡ್ರ್ಯಾಗನ್ ಮಂಜು ಅವರು ಸೇರಿದಂತೆ ಸಾಕಷ್ಟು ಹೊಸ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಾಯಕಿಯ ಆಯ್ಕೆ ನಡೆಯುತ್ತಿದೆ. ಈ ಹಿಂದೆ ವಿಜಯ್‌ ಅವರ ‘ಸಲಗ’
ಚಿತ್ರದ ಮುಹೂರ್ತ ಸಮಾರಂಭ ಈ ದೇವಸ್ಥಾನದಲ್ಲಿ ನಡೆದಿತ್ತು. ಎರಡನೇ ಚಿತ್ರದ ಮುಹೂರ್ತವೂ ಇಲ್ಲೇ ನಡೆಯಬೇಕೆಂಬುದು ವಿಜಯ್‌ರ ಆಸೆಯಾಗಿತ್ತು. ಅದರಂತೆ ‘ಭೀಮ’ ಚಿತ್ರಕ್ಕೆ ಅಲ್ಲೇ ಪೂಜೆ ನೆರವೇರಿದೆ. ಸಿನಿಮಾ ಆರಂಭವಾದ ಬಗ್ಗೆ ನಿರ್ಮಾಪಕ ಕೃಷ್ಣ ಸಾರ್ಥಕ್ ಮಾತನಾಡಿದರು. ‘ಭೀಮ’ ಶೀರ್ಷಿಕೆ ನೀಡಿದ್ದ ನಟಿ ಮಾಲಾಶ್ರೀ ಅವರಿಗೆ ನಿರ್ಮಾಪಕ ಜಗದೀಶ್ ಧನ್ಯವಾದ ಅರ್ಪಿಸಿದರು. ಚರಣ್‌ ರಾಜ್‌ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here