ಮನ್‌ ಚಂಗಪ್ಪ ನಿರ್ದೇಶನದ ‘ದ್ವಂದ್ವಂ ದ್ವಯಂ’ ಕಿರುಚಿತ್ರ ಬಿಡುಗಡೆಯಾಗಿದೆ. ‘ಹದಿನೇಳು ನಿಮಿಷಗಳ ಕಿರುಚಿತ್ರ ಮಾನವ ಬದುಕಿನ ಸಂಕೀರ್ಣತೆಗಳನ್ನು ಆಳವಾಗಿ ಪರಿಶೋಧಿಸುವ ಪ್ರಯತ್ನ’ ಎನ್ನುತ್ತಾರೆ ನಿರ್ದೇಶಕ ಮನ್‌ ಚಂಗಪ್ಪ. ಕಿರುಚಿತ್ರದ ಪ್ರಮುಖ ಪಾತ್ರದಲ್ಲಿ ವಿಕಾಶ್‌ ಉತ್ತಯ್ಯ ನಟಿಸಿದ್ದಾರೆ.

ಮನ್ ಚಂಗಪ್ಪ ನಿರ್ದೇಶನದ ‘ದ್ವಂದ್ವಂ ದ್ವಯಂ’ ಕಿರುಚಿತ್ರ ಪ್ರದರ್ಶನ ಹಾಗೂ ಸಂವಾದ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನೆರವೇರಿತು. ಚಿತ್ರನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಡಾ ನಾದ ಶೆಟ್ಟಿ, ಛಾಯಾಗ್ರಾಹಕ ಅಶೋಕ್ ಕಶ್ಯಪ್, ಚಿತ್ರನಿರ್ದೇಶಕರಾದ ಅನೂಪ್ ಭಂಡಾರಿ ಮತ್ತು ಚಂಪಾ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಿರುಚಿತ್ರವನ್ನು ವೀಕ್ಷಿಸಿ ತಮ್ಮ ಪ್ರೋತ್ಸಾಹಭರಿತ ಮಾತುಗಳೊಂದಿಗೆ ತಂಡದವರಿಗೆ ಶುಭ ಕೋರಿದರು. ನಿರ್ದೇಶಕ ಮನ್ ಚಂಗಪ್ಪ ಈ ಕುರಿತು, ‘ಮರಣದಂಡನೆಗೆ ಮುನ್ನ ಜೈಲು ಕೈದಿಯೊಬ್ಬನ ಕೊನೆಯ ರಾತ್ರಿಯ ಕ್ಯಾನ್ವಾಸ್‌ನಲ್ಲಿ ತೆರೆದುಕೊಳ್ಳುವ ಚಿತ್ರವಿದು. ಪ್ರತಿಯೊಬ್ಬ ವ್ಯಕ್ತಿಯ ಅಸ್ತಿತ್ವದಲ್ಲಿ ಅಂತರ್ಗತವಾಗಿರುವ ಸಂಕೀರ್ಣವಾಗಿ ಪರಿಶೀಲಿಸುವ ಚಿತ್ರ. 17 ನಿಮಿಷಗಳ ಅವಧಿಯಲ್ಲಿ ಮಾನವ ಬದುಕಿನ ಸಂಕೀರ್ಣತೆಗಳನ್ನು ಆಳವಾಗಿ ಪರಿಶೋಧಿಸುವ ಪ್ರಯತ್ನವನ್ನು ಈ ಕಿರುಚಿತ್ರ ಮಾಡುತ್ತದೆ. ನಮ್ಮೆಲ್ಲರೊಳಗಿನ ಜೀವನ ಹಾಗೂ ಆಯ್ಕೆಗಳ ಅನ್ವೇಷಣೆಯಿದು’ ಎಂದು ಕಿರುಚಿತ್ರದ ಪರಿಚಯ ಮಾಡಿಕೊಟ್ಟರು.

Yellow Diaries ಬ್ಯಾನರ್ ಮೂಲಕ ಹರ್ಷಿಕಾ ವಸಂತ್ ಈ ಕಿರುಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಕೆಲವು ಚಿತ್ರಗಳಲ್ಲಿ ನಟಿಸಿರುವ ವಿಕಾಶ್‌ ಉತ್ತಯ್ಯ ಕಿರುಚಿತ್ರದಲ್ಲಿ ‘ಸೂರ್ಯ’ ಎಂಬ ಪ್ರಮುಖ‌ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸುಮೋಕ್ಷ, ಸೂರ್ಯ ಇತರೆ ಪ್ರಮುಖ ಕಲಾವಿದರು. ಮನ್ ಚಂಗಪ್ಪ ಅವರೇ ಕತೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆ ನಾದ ಶೆಟ್ಟಿ ಅವರದು. ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ರಾಜಾ ರಾವ್ ಅಂಚಲ್ಕರ್ ಛಾಯಾಗ್ರಹಣ ಹಾಗೂ ಉದಯ್ ಕುಮಾರ್ ಅವರ ಸಂಕಲನ ಕಿರುಚಿತ್ರಕ್ಕಿದೆ. ಮನ್ ಚಂಗಪ್ಪ ಅವರು ಖ್ಯಾತ ಸಾಹಿತಿ ಹಾಗೂ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಟೆಂಟ್ ಸ್ಕೂಲ್ ಆಫ್ ಸಿನಿಮಾದಲ್ಲಿ ಕಾರ್ಯಗಾರ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Connect with

Please enter your comment!
Please enter your name here