ಎಸ್‌ ಆರ್‌ ರಾಜನ್‌ ನಿರ್ಮಿಸಿ, ನಿರ್ದೇಶಿಸುತ್ತಿರುವ ‘ಇ ಮೇಲ್‌’ ಸಿನಿಮಾದ ಫಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದೆ. ನಟ ಪ್ರಜ್ವಲ್‌ ದೇವರಾಜ್‌ ಪೋಸ್ಟರ್‌ ರಿಲೀಸ್‌ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದರು. ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಸಿನಿಮಾ ತಯಾರಾಗುತ್ತಿದೆ.

ರಾಗಿಣಿ ದ್ವಿವೇದಿ ಮುಖ್ಯಭೂಮಿಕೆಯಲ್ಲಿರುವ ‘ಇ ಮೇಲ್’ ಚಿತ್ರದ ಫಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದೆ. ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಫಸ್ಟ್‌ಲುಕ್‌ ಪೋಸ್ಟರ್‌ ಅನ್ನು ಪ್ರಜ್ವಲ್ ದೇವರಾಜ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಇದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಸಿನಿಮಾದಲ್ಲಿ ಮುರುಗ ಅಶೋಕ್, ಮನೋಬಲ, ‘ಜೈಲರ್’ ಸಿನಿಮಾ ಖ್ಯಾತಿಯ ಬಿಲ್ಲಿ, ‘ಲೊಳ್ಳುಸಭಾ’ ಖ್ಯಾತಿಯ ಮನೋಹರ್, ಅಕ್ಷಯ್ ರಾಜ್, ಅರತಿ ಶ್ರೀ, ಆದವ ಬಾಲಾಜಿ, ಮಂಜು ನಂಜನಗೂಡು, ರಾಮ್ ಸನ್ನಿ, ನಯನ ಚೌಹಾನ್, ಶೈಲಜ, ಶ್ವೇತ, ತೇಜಸ್ವಿನಿ, ಕುಮಾರಿ ಸೃಷ್ಟಿ, ಕುಮಾರಿ ಸಿಂಚನ, ಕುಮಾರಿ ಅನನ್ಯ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿತ್ರದಲ್ಲಿ ಸುಮಧುರ ಹಾಡುಗಳಿದ್ದು ಜುಬಿನ್ ಹಾಗೂ ‘ಐ ಲವ್ ಯು’ ಚಿತ್ರ ಖ್ಯಾತಿಯ ಕಿರಣ್ ತೊಟಂಬೈಲ್ ಸಂಗೀತ ಸಂಯೋಜಿಸಿದ್ದಾರೆ. ಕನ್ನಡದ ಹಾಡುಗಳನ್ನು ಸಂತೋಷ್ ನಾಯಕ್ ಬರೆದಿದ್ದಾರೆ. ಮಾಸ್ ಮಾದ, ಬೀರ್ ಮಾಸ್ಟರ್ ಹಾಗೂ ಫಯಾಸ್ ಖಾನ್ ಸಾಹಸ ನಿರ್ದೇಶನ ಹಾಗೂ ಸೆಲ್ವಂ ಛಾಯಾಗ್ರಹಣ ಚಿತ್ರಕ್ಕಿದೆ. S R Films Factory ಬ್ಯಾನರ್‌ ಅಡಿಯಲ್ಲಿ ಎಸ್ ಆರ್ ರಾಜನ್ ಅವರು ಚಿತ್ರವನ್ನು ನಿರ್ಮಿಸಿ, ನಿರ್ದೇಶನ ಮಾಡಿದ್ದಾರೆ. ಕರ್ನಾಟಕ, ತಮಿಳುನಾಡು, ಪಾಂಡಿಚೇರಿ, ಗೋವಾ ಹಾಗೂ ಮುಂಬೈನಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದ್ದು, ಚಿತ್ರ ತೆರೆಗೆ ಸಿದ್ಧವಾಗಿದೆ.

LEAVE A REPLY

Connect with

Please enter your comment!
Please enter your name here