2022ರ ಫೆಬ್ರವರಿಯಲ್ಲಿ ನಡೆಸಲು ಉದ್ದೇಶಿಸಲಾಗಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಕಥಾಚಿತ್ರಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು 13ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2022 ನೇ ಫೆಬ್ರವರಿ ತಿಂಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಈ ಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಕಥಾಚಿತ್ರಗಳನ್ನು ಆಹ್ವಾನಿಸಲಾಗಿದೆ. ಏಷಿಯನ್, ಭಾರತೀಯ ಹಾಗೂ ಕನ್ನಡದ ಎಲ್ಲ ಉಪಭಾಷಾ ಚಲನಚಿತ್ರಗಳೂ ಸೇರಿದಂತೆ ಕನ್ನಡ ಸಿನಿಮಾಗಳು ಸ್ಪರ್ಧಾತ್ಮಕ ವಿಭಾಗದಲ್ಲಿರುತ್ತವೆ. ಪ್ರತಿಯೊಂದು ವಿಭಾಗದಲ್ಲೂ ಪ್ರಶಸ್ತಿ ವಿಜೇತ ಚಲನಚಿತ್ರಗಳಿಗೆ ನಗದು, ಸ್ಮರಣ ಫಲಕ ಹಾಗೂ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ. ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರವೇಶ ಪಡೆಯಲು ಕಥಾಚಿತ್ರಗಳು 1, ಜನವರಿ 2021 ರಿಂದ 30 ನವೆಂಬರ್ 2021 ರ ಅವಧಿಯಲ್ಲಿ ನಿರ್ಮಾಣಗೊಂಡವಾಗಿರಬೇಕು. ಹಾಗೂ 70 ನಿಮಿಷದ ಅವಧಿಯ ಚಲನಚಿತ್ರವಾಗಿರಬೇಕು.

ಕನ್ನಡ ಹಾಗೂ ಕರ್ನಾಟಕದ ಉಪಭಾಷೆಗಳಲ್ಲಿ ಮತ್ತು ಇತರೆ ಭಾರತೀಯ ಭಾಷೆಗಳಲ್ಲಿ ತಯಾರಾದ ಚಿತ್ರಗಳ ನಿರ್ಮಾಣದ ದಿನಾಂಕವನ್ನು ಭಾರತ ಸರ್ಕಾರದ ಸೆಂಟ್ರಲ್ ಬೋರ್ಡ್ ಆಫ್ ಫಿಲಂ ಸರ್ಟಿಫಿಕೇಷನ್ ನೀಡಿದ ದಿನಾಂಕವನ್ನು ಆಧರಿಸಿ ಗಣನೆಗೆ ತೆಗೆದುಕೊಳ್ಳಲಾಗುವುದು. ಸ್ಪರ್ಧಾತ್ಮಕ ವಿಭಾಗಕ್ಕೆ ಚಲನಚಿತ್ರಗಳನ್ನು ಸಲ್ಲಿಸಲು ಕಡೆಯ ದಿನಾಂಕ 27 ಡಿಸೆಂಬರ್ 2021. ಚಲನಚಿತ್ರಗಳನ್ನು ಸಲ್ಲಿಸಲು ಅನುಸರಿಸಬೇಕಾದ ನಿಯಮಾವಳಿ ಹಾಗೂ ಮಾರ್ಗಸೂಚಿಯನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಧಿಕೃತ ವೆಬ್ ಸೈಟ್ Biffes.org ನಿಂದ ಪಡೆಯಬಹುದು.

LEAVE A REPLY

Connect with

Please enter your comment!
Please enter your name here