ಹೃತಿಕ್‌ ರೋಷನ್‌, ದೀಪಿಕಾ ಪಡುಕೋಣೆ, ಅನಿಲ್‌ ಕಪೂರ್‌ ನಟನೆಯ ‘ಫೈಟರ್‌’ ಹಿಂದಿ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆಯಾಗಿದೆ. ಸಿದ್ಧಾರ್ಥ್‌ ಆನಂದ್‌ ನಿರ್ದೇಶನದ ಸಿನಿಮಾ 2024ರ ಜನವರಿ 25ರಂದು ತೆರೆಕಾಣಲಿದೆ.

ಸಿದ್ಧಾರ್ಥ್‌ ಆನಂದ್‌ ನಿರ್ದೇಶನದ ‘ಫೈಟರ್‌’ ಹಿಂದಿ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆಯಾಗಿದೆ. ಹೃತಿಕ್‌ ರೋಷನ್‌, ದೀಪಿಕಾ ಪಡುಕೋಣೆ, ಅನಿಲ್‌ ಕಪೂರ್‌ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ನಟ ಹೃತಿಕ್‌ ರೋಷನ್‌ ತಮ್ಮ ಸೋಷಿಯಲ್‌ ಮೀಡಿಯಾ ಹ್ಯಾಂಡಲ್‌ಗಳಲ್ಲಿ ಮೋಷನ್‌ ಪೋಸ್ಟರ್‌ ಹಂಚಿಕೊಂಡು, ‘Spirit of Fighter ವಂದೇ ಮಾತರಂ! ಭಾರತದ 75 ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ಚಿತ್ರಮಂದಿರಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇವೆ. ‘ಫೈಟರ್’ 2024 ರ ಜನವರಿ 25ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ’ ಎಂದು ಬರೆದಿದ್ದಾರೆ. ನಟಿ ದೀಪಿಕಾ ಪಡುಕೋಣೆ, ‘A salute to our glorious nation. Happy Independence Day’ ಎಂದು ಕ್ಯಾಪ್ಶನ್‌ ನೀಡಿದ್ದಾರೆ. ನಿರ್ದೇಶಕ ಸಿದ್ಧಾರ್ಥ್ ಆನಂದ್ ಕಳೆದ ವರ್ಷ ಗಣರಾಜ್ಯ ದಿನದಂದು ಶಾರುಖ್ ಖಾನ್ ಅಭಿನಯದ ‘ಪಠಾಣ್’ ಚಿತ್ರವನ್ನು ಬಿಡುಗಡೆ ಮಾಡಿದ್ದರು. ಚಿತ್ರವು ಬ್ಲಾಕ್ ಬಸ್ಟರ್ ಆಗಿತ್ತು. ‘ಫೈಟರ್’ ಚಿತ್ರವೂ ಗಣರಾಜ್ಯ ದಿನದಂದು ಬಿಡುಗಡೆಯಾಗಲಿದೆ. ಚಿತ್ರದಲ್ಲಿ ತಲಾತ್ ಅಜೀಜ್ (ಹೃತಿಕ್ ರೋಷನ್ ಅವರ ತಂದೆಯ ಪಾತ್ರ), ಕರಣ್ ಸಿಂಗ್ ಗ್ರೋವರ್, ಅಕ್ಷಯ್ ಒಬೆರಾಯ್ ಪ್ರಮುಖ ಪಾತ್ರಗಳಲ್ಲಿದ್ದಾರೆ. Viacom18 ಸ್ಟುಡಿಯೋಸ್ ಮತ್ತು Marflix Pictures ನಿರ್ಮಾಣದ ಚಿತ್ರಕ್ಕೆ ಹುಸೇನ್‌ ದಲಾಲ್‌ ಚಿತ್ರಕಥೆ ರಚಿಸಿದ್ದಾರೆ.

LEAVE A REPLY

Connect with

Please enter your comment!
Please enter your name here