ಎನ್‌ ವಿನಾಯಕ್‌ ನಿರ್ದೇಶನದ ‘ಫುಲ್‌ ಮೀಲ್ಸ್‌’ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಲಿಖಿತ್‌ ಶೆಟ್ಟಿ, ತೇಜಸ್ವಿನಿ ಶರ್ಮ ಮತ್ತು ಖುಷಿ ರವಿ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ವೆಡ್ಡಿಂಗ್‌ ಫೋಟೋಗ್ರಾಫರ್‌ ಸುತ್ತ ಹೆಣೆದ ಕತೆಯಿದು. ಗುರುಕಿರಣ್‌ ಸಂಗೀತ ಚಿತ್ರಕ್ಕಿದೆ.

ಲಿಖಿತ್‌ ಶೆಟ್ಟಿ ನಾಯಕನಾಗಿ ನಟಿಸಿರುವ ‘ಫುಲ್ ಮೀಲ್ಸ್’ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಅರಮನೆ ಆವರಣದಲ್ಲಿ ಚಿತ್ರೀಕರಣ ಆರಂಭಿಸಿದ್ದ ಚಿತ್ರತಂಡ, ಕನಕಪುರ ರಸ್ತೆಯ ರೆಸಾರ್ಟ್‌ನಲ್ಲಿ ಚಿತ್ರೀಕರಣ ಮುಕ್ತಾಯಗೊಳಿಸಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಆದಷ್ಟು ಬೇಗ ಮುಗಿಸಿ, ಸಿನಿಮಾವನ್ನು ಶೀಘ್ರದಲ್ಲೇ ತೆರೆಗೆ ತರುವುದಾಗಿ ಚಿತ್ರತಂಡ ತಿಳಿಸಿದೆ. ‘ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾಹಂದರ ಚಿತ್ರದ್ದು. ಮನರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಹೇಳುತ್ತಿದ್ದೇವೆ. ಪ್ರೇಕ್ಷಕರು ಸಿನಿಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ನಮ್ಮದು’ ಎನ್ನುತ್ತಾರೆ ಚಿತ್ರದ ನಿರ್ದೇಶಕ ಎನ್‌ ವಿನಾಯಕ್‌. ಕಿರುಚಿತ್ರಗಳು ಮತ್ತು ಆಲ್ಬಂ ಸಾಂಗ್‌ಗಳನ್ನು ರೂಪಿಸಿದ್ದ ವಿನಾಯಕ್‌ ಅವರಿಗೆ ಇದು ಚೊಚ್ಚಲ ನಿರ್ದೇಶನದ ಸಿನಿಮಾ.

ಈ ಹಿಂದೆ ಲಿಖಿತ್‌ ಶೆಟ್ಟಿ ‘ಸಂಕಷ್ಟಕರ ಗಣಪತಿ’, ‘ಫ್ಯಾಮಿಲಿ ಪ್ಯಾಕ್’ ಸಿನೆಮಾಗಳ ಮೂಲಕ ಚಂದನವನಕ್ಕೆ ಪರಿಚಯವಾಗಿದ್ದರು. ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಚಿತ್ರದ ಇಬ್ಬರು ನಾಯಕಿಯರು. ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿ ರಂಗಾಯಣ ರಘು, ವಿಜಯ್ ಚಂಡೂರ್, ರವಿಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಸೂರಜ್ ಲೋಕ್ರೆ, ಹೊನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ನಾಗೇಂದ್ರ ಅರಸ್, ಮೂಗು ಸುರೇಶ್ ಇದ್ದಾರೆ. ಹರೀಶ್ ಗೌಡ ಸಂಭಾಷಣೆ, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here