Exam song ಮೂಲಕ ಸದ್ದು ಮಾಡಿದ್ದ ‘ಗಾಳಿಪಟ 2’ ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದೆ. ಯೋಗರಾಜ್‌ ಭಟ್‌ ನಿರ್ದೇಶನದಲ್ಲಿ ಗಣೇಶ್‌, ದಿಗಂತ್‌, ಪವನ್‌ ಕುಮಾರ್‌ ಹೀರೋಗಳಾಗಿ ನಟಿಸಿರುವ ಸಿನಿಮಾ ಆಗಸ್ಟ್‌ 12ರಂದು ತೆರೆಕಾಣಲಿದೆ.

ಸದಭಿರುಚಿಯ ಚಿತ್ರಗಳ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶನದಲ್ಲಿ ಗಣೇಶ್, ದಿಗಂತ್, ಪವನ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಬಹು ನಿರೀಕ್ಷಿತ ‘ಗಾಳಿಪಟ2’ ಸಿನಿಮಾ ಆಗಸ್ಟ್‌ 12ರಂದು ತೆರೆಕಾಣುತ್ತಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೆ ಹೊರರಾಜ್ಯ, ವಿದೇಶಗಳಲ್ಲೂ ಸಿನಿಮಾ ಬಿಡುಗಡೆಯಾಗಲಿದೆ. ಬಹಳ ದಿನಗಳ ನಂತರ ಯೋಗರಾಜ್ ಭಟ್ – ಗಣೇಶ್ ಜೋಡಿಯಲ್ಲಿ ಬರುತ್ತಿರುವ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ‘ಗಾಳಿಪಟ 2’ ಸಿನಿಪ್ರಿಯರ ನಿರೀಕ್ಷೆ ಹೆಚ್ಚಿಸಿರುವುದು ಹೌದು. ಇತ್ತೀಚೆಗಷ್ಟೇ ಬಿಡುಗಡೆಯಾದ Exam song ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಚಿತ್ರಕ್ಕಿದೆ. ರಮೇಶ್‌ ರೆಡ್ಡಿ ನಿರ್ಮಾಣದ ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿ ಅನಂತನಾಗ್, ರಂಗಾಯಣ ರಘು, ಬುಲೆಟ್ ಪ್ರಕಾಶ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಸುಧಾ ಬೆಳವಾಡಿ, ಪದ್ಮಜಾರಾವ್ ಮತ್ತಿತರರು ಅಭಿನಯಿಸಿದ್ದಾರೆ.

LEAVE A REPLY

Connect with

Please enter your comment!
Please enter your name here