‘ಗಣ’ ಸಿನಿಮಾದ ‘ಮೈ ನೇಮ್ ಇಸ್ ಸೋನಾ, ಬೇಬಿ ಬೇಬಿ ಕಣ್ಣಾಮುಚ್ಚಾಲೆ ನನ್ನ ಹಾಬಿ’ ಹಾಡು ಬಿಡುಗಡೆಯಾಗಿದೆ. ವಿ ನಾಗೇಂದ್ರಪ್ರಸಾದ್‌ ರಚನೆಯ ಈ ಹಾಡಿಗೆ ಅನೂಪ್‌ ಸಿಳೀನ್‌ ಸಂಗೀತ ಸಂಯೋಜನೆಯಿದೆ. ಮುರಳಿ ಮಾಸ್ಟರ್‌ ನೃತ್ಯ ಸಂಯೋಜನೆಯ ಹಾಡು ಪ್ರಜ್ವಲ್‌ ದೇವರಾಜ್‌, ನಮೃತಾ ಅವರ ಮೇಲೆ ಪಿಕ್ಚರೈಸ್‌ ಆಗಿದೆ.

ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ ‘ಗಣ’ ಚಿತ್ರದ ಹಾಡು ಬಿಡುಗಡೆಯಾಗಿದೆ. ವಿ ನಾಗೇಂದ್ರ ಪ್ರಸಾದ್ ರಚಿಸಿರುವ ‘ಮೈ ನೇಮ್ ಇಸ್ ಸೋನಾ, ಬೇಬಿ ಬೇಬಿ ಕಣ್ಣಾಮುಚ್ಚಾಲೆ ನನ್ನ ಹಾಬಿ’ ಹಾಡಿಗೆ ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿದ್ದಾರೆ. ಹಾಡಿಗೆ ಪ್ರಜ್ವಲ್ ದೇವರಾಜ್, ನಮೃತಾ ಮತ್ತು ರವಿಕಾಳೆ ಹೆಜ್ಜೆ ಹಾಕಿದ್ದಾರೆ. ‘ಕ್ರಾಂತಿ’ ಚಿತ್ರದ ‘ಟೇಕ್ ಇಟ್ ಪುಷ್ಪವತಿ’ ಹಾಡು ಸೇರಿದಂತೆ ಅನೇಕ ಯಶಸ್ವಿ ಗೀತೆಗಳನ್ನು ಹಾಡಿರುವ ಐಶ್ವರ್ಯ ರಂಗರಾಜನ್ ಈ ಹಾಡನ್ನು ಹಾಡಿದ್ದಾರೆ. ‘ಸೋನಾ ಬೇಬಿ’ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Cherry Creations ಬ್ಯಾನರ್‌ ಅಡಿಯಲ್ಲಿ ಪಾರ್ಥು ಅವರು ನಿರ್ಮಿಸಿರುವ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಸತೀಶ್ ಎ ಕಲಾ ನಿರ್ದೇಶನ ಚಿತ್ರಕ್ಕಿದೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಈಗಾಗಲೇ ಟೀಸರ್‌, ಹಾಡು ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಸಿನಿಮಾ ತೆರೆಕಾಣಲಿದೆ. ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ ಆರ್ ಪೇಟೆ, ರಮೇಶ್ ಭಟ್ ಚಿತ್ರದ ಪ್ರಮುಖ ತಾರಾಬಳಗದಲ್ಲಿದ್ದಾರೆ.

LEAVE A REPLY

Connect with

Please enter your comment!
Please enter your name here