ಶ್ರೀನಿವಾಸರಾಜು ನಿರ್ದೇಶನದಲ್ಲಿ ಗಣೇಶ್‌ ನಟಿಸುತ್ತಿರುವ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಮಾಳವಿಕ ನಾಯರ್‌ ಚಿತ್ರದ ಹಿರೋಯಿನ್‌.

ಗಣೇಶ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ. ಈ ಸಿನಿಮಾದ ಚಿತ್ರೀಕರಣ ಬೆಂಗಳೂರು, ಇಟಲಿ ಹಾಗೂ ಮಾಲ್ಟಾದಲ್ಲಿ ನಡೆದಿದೆ. ಪ್ರಸ್ತುತ ಡಬ್ಬಿಂಗ್ ಕಾರ್ಯಗಳು ನಡೆಯುತ್ತಿದ್ದು, ಅದೂ ಸಹ ಮುಕ್ತಾಯ ಹಂತಕ್ಕೆ ತಲುಪಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ ಎಂದು ಚಿತ್ರದ ನಿರ್ಮಾಪಕರು ತಿಳಿಸಿದ್ದಾರೆ. ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.

ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ ಎಂ ಪ್ರಕಾಶ್ ಸಂಕಲನ ಚಿತ್ರಕ್ಕಿದೆ. ಕೌಟುಂಬಿಕ ಕಥಾಹಂದರದ ಈ ಚಿತ್ರವನ್ನು Trishul Entertainment ಬ್ಯಾನರ್‌ ಅಡಿಯಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರ. ಇದು ಗಣೇಶ್ ಅಭಿನಯದ 41ನೇ ಚಿತ್ರ. ಇವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಶರಣ್ಯ ಶೆಟ್ಟಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನಾ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಅಭಿನಯಿಸುತ್ತಿದ್ದಾರೆ.

LEAVE A REPLY

Connect with

Please enter your comment!
Please enter your name here