ಮಂಜುನಾಥ್‌ ಬಿ ನಗಬಾ ನಟಿಸಿ, ನಿರ್ದೇಶಿಸಿರುವ ‘ಗರುಡ ಪುರಾಣ’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ಗರುಡ ಪುರಾಣದ ಕೆಲ ಅಂಶಗಳು ಕತೆಗೆ ಹೊಂದಿಕೆಯಾಗುವುದರಿಂದ ಚಿತ್ರದ ಶೀರ್ಷಿಕೆ ‘ಗರುಡ ಪುರಾಣ’ ಎಂದಿದೆ. ದಿಶಾ ಶೆಟ್ಟಿ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ.

ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿರುವ ‘ಗರುಡ ಪುರಾಣ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದ್ದು, ನವೆಂಬರ್ 3 ರಂದು ಚಿತ್ರ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೇ ಚಿತ್ರನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದರು. ಜನಪ್ರಿಯ ‘ಕಾಂತಾರ’ ಸೇರಿದಂತೆ ಅನೇಕ ಚಿತ್ರಗಳಿಗೆ ಆನ್‌ಲೈನ್‌ ಎಡಿಟರ್ ಆಗಿ ಕಾರ್ಯನಿರ್ವಹಿಸಿರುವ ಮಂಜುನಾಥ್ ಬಿ ನಾಗಬಾ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ‘ಚಿತ್ರದ ಒಂದು ಭಾಗಕ್ಕೆ ಗರುಡ ಪುರಾಣದ ಕೆಲವು ಅಂಶಗಳು ಹೊಂದಿಕೆಯಾಗುತ್ತದೆ. ಹಾಗಾಗಿ ‘ಗರುಡ ಪುರಾಣ’ ಎಂದು ಶೀರ್ಷಿಕೆ ಇಡಲಾಗಿದೆ. ಇದೊಂದು ಸಸ್ಪೆನ್ಸ್‌ – ಥ್ರಿಲ್ಲರ್‌ ಜಾನರ್‌ ಸಿನಿಮಾ’ ಎನ್ನುತ್ತಾರೆ ನಿರ್ದೇಶಕರು. 27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ ಎಂ ಮತ್ತು ಬಿ ಎಲ್ ಯೋಗೇಶ್ ಕುಮಾರ್ ನಿರ್ಮಿಸಿರುವ ಚಿತ್ರದ ನಾಯಕಿಯಾಗಿ ದಿಶಾ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ. ‘ಭಜರಂಗಿ’ ಖ್ಯಾತಿಯ ಚೆಲುವರಾಜು, ಸಂತೋಷ್ ಕರ್ಕಿ, ಕೆಂಚಣ್ಣ, ರಾಜಕುಮಾರ್, ಮಹೇಂದ್ರ ಗೌಡ ಚಿತ್ರದ ಇತರೆ ಪ್ರಮುಖ ಕಲಾವಿದರು. ಪುನೀತ್ ಆರ್ಯ ಚಿತ್ರದ ಹಾಡುಗಳನ್ನು ರಚಿಸಿದ್ದು, ರಾಕೇಶ್ ಆಚಾರ್ಯ ಸಂಗೀತ ನೀಡಿದ್ದಾರೆ. ಸುನೀಲ್ ನರಸಿಂಹಮೂರ್ತಿ ಛಾಯಾಗ್ರಹಣ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here