ಇತ್ತೀಚಿನ ಯಶಸ್ವೀ ಸಿನಿಮಾ ‘ಘೋಸ್ಟ್‌’ ZEE5ನಲ್ಲಿ ಸ್ಟ್ರೀಮ್‌ ಆಗುತ್ತಿದೆ. ಸಿನಿಮಾದ ಪ್ರೊಮೋಷನ್‌ ಅಂಗವಾಗಿ ಹತ್ತು ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರ್‌ ಬಿಡುಗಡೆ ಮಾಡಿರುವುದು ವಿಶೇಷ.

ಶಿವರಾಜಕುಮಾರ್‌ ಅಭಿನಯದ ಯಶಸ್ವೀ ಸಿನಿಮಾ ‘ಘೋಸ್ಟ್‌’ ನವೆಂಬರ್‌ 17ರಿಂದ ZEE5ನಲ್ಲಿ ಸ್ಟ್ರೀಮ್‌ ಆಗುತ್ತಿದೆ. ಸಿನಿಮಾದ ಪ್ರೊಮೋಷನ್‌ ಅಂಗವಾಗಿ ಹತ್ತು ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರ್‌ ಅನ್ನು ZEE5 ಬಿಡುಗಡೆ ಮಾಡಿದೆ. ಜಯನಗರದ ಎಂಇಎಸ್ ಗ್ರೌಂಡ್‌ನಲ್ಲಿ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ. ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾಗೆ ಬ್ಯಾನರ್, ಪೋಸ್ಟರ್ ಹಾಕೋದು ಸಹಜ. ಆದರೆ, ಈ ಬಾರಿ ಒಟಿಟಿ ರಿಲೀಸ್‌ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಿದೆ ZEE ಕನ್ನಡ. ‘ಘೋಸ್ಟ್’ ಚಿತ್ರದಲ್ಲಿ ಶಿವರಾಜಕುಮಾರ್‌ ಭಿನ್ನ ಶೇಡ್‌ನ ಪಾತ್ರಗಳಲ್ಲಿ ನಟಿಸಿದ್ದಾರೆ. ಸಂದೇಶ್‌ ಪ್ರೊಡಕ್ಷನ್ಸ್‌ನಡಿ ನಿರ್ಮಾಣವಾಗಿರುವ ಚಿತ್ರದ ನಿರ್ದೇಶಕರು ಶ್ರೀನಿ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲೂ ಸಿನಿಮಾ ತೆರೆಕಂಡಿದೆ. ಅರ್ಜುನ್‌ ಜನ್ಯ ಸಂಗೀತ ಚಿತ್ರಕ್ಕಿದೆ. ಮಲಯಾಳಂ ನಟ ಜಯರಾಮ್‌, ಹಿಂದಿ ನಟ ಅನುಪಮ್‌ ಖೇರ್‌, ಅರ್ಚನಾ ಜೋಯಿಸ್‌, ಸತ್ಯಪ್ರಕಾಶ್‌, ನಿರ್ದೇಶಕ ಎಂಜಿ ಶ್ರೀನಿವಾಸ್‌ ಇತರೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

LEAVE A REPLY

Connect with

Please enter your comment!
Please enter your name here