ಯೋಗರಾಜ್‌ ಭಟ್‌ ರಚಿಸಿ, ವಿಜಯ ಪ್ರಕಾಶ್‌ ಹಾಡಿರುವ ‘ಗಿರ್ಕಿ’ ಚಿತ್ರದ ಲಿರಿಕಲ್‌ ವೀಡಿಯೋ ಸಾಂಗ್‌ ಬಿಡುಗಡೆಯಾಗಿದೆ. ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿದ್ದು, ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ಚಿತ್ರದ ನಾಯಕಿಯರು.

ಯೋಗರಾಜ್ ಭಟ್ಟರು ರಚಿಸಿದ್ದ ‘ಖಾಲಿ ಕ್ವಾಟ್ರು ಬಾಟ್ಲಿ ಹಂಗೆ ಲೈಫು’ ಸಾಂಗ್‌ ದೊಡ್ಡ ಜನಪ್ರಿಯತೆ ಗಳಿಸಿತು. ಈಗ ಭಟ್ಟರು ‘ಗಿರ್ಕಿ’ ಚಿತ್ರಕ್ಕಾಗಿ ‘ಗ್ಲಾಸು ಗ್ಲಾಸಿಗೆ ತಾಗೊ ಟೈಮಲಿ ದೇಶ ಚಿಂತನೆ ಮಾಡೋಣ’ ಎಂಬ ಹಾಡು ರಚಿಸಿದ್ದಾರೆ. ವೀರ್‌ ಸಮರ್ಥ್‌ ಸಂಗೀತ ಸಂಯೋಜನೆಯ ಗೀತೆಯನ್ನು ವಿಜಯ್ ಪ್ರಕಾಶ್ ಹಾಡಿದ್ದಾರೆ. ನಟ ದುನಿಯಾ ವಿಜಯ್‌ ಈ ಹಾಡು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ ‘ಗಿರ್ಕಿ’ ಚಿತ್ರವನ್ನು ಯೋಗರಾಜ್ ಭಟ್ ಅವರ ಶಿಷ್ಯ ವೀರೇಶ್ ಪಿ.ಎಂ ನಿರ್ದೇಶಿಸಿದ್ದಾರೆ‌. ಲವ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಚಿತ್ರಕ್ಕೆ ನಿರ್ದೇಶಕರೇ ಕತೆ, ಚಿತ್ರಕಥೆ ಹಾಗೂ ಸಂಭಾಷಣೆ ರಚಿಸಿದ್ದಾರೆ. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್.ಪಿ.ಎಂ ಹಾಡುಗಳನ್ನು ರಚಿಸಿದ್ದಾರೆ. ನವೀನ್ ಕುಮಾರ್ ಛಲ್ಲ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನವಿರುವ ಈ ಚಿತ್ರಕ್ಕೆ ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ರಾಮು, ಮೋಹನ್ ನೃತ್ಯ ನಿರ್ದೇಶನವಿದೆ. ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿದ್ದು, ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ಚಿತ್ರದ ನಾಯಕಿಯರು.

LEAVE A REPLY

Connect with

Please enter your comment!
Please enter your name here