ಸಂದೀಪ್ ಕಿಶನ್ ಮತ್ತು ವಿಜಯ್ ಸೇತುಪತಿ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಮೈಕಲ್‌’ ತಂಡಕ್ಕೆ ನಿರ್ದೇಶಕ, ನಟ ಗೌತಮ್ ಮೆನನ್‌ ಸೇರ್ಪಡೆಯಾಗಿದ್ದಾರೆ. ಚಿತ್ರದಲ್ಲಿ ಅವರು ಖಳಪಾತ್ರ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಕನ್ನಡದಲ್ಲೂ ಈ ಸಿನಿಮಾ ಸಿದ್ಧವಾಗಲಿದೆ ಎನ್ನುವುದು ವಿಶೇಷ.

ಸಂದೀಪ್ ಕಿಶನ್ ಮತ್ತು ವಿಜಯ್ ಸೇತುಪತಿ ಮುಖ್ಯಭೂಮಿಕೆಯಲ್ಲಿರುವ ‘ಮೈಕಲ್’ ಚಿತ್ರಕ್ಕೆ ಇದೀಗ ಹೊಸದಾಗಿ ನಟ, ನಿರ್ದೇಶಕ ಗೌತಮ್ ವಾಸುದೇವ್ ಮೆನನ್ ಸೇರ್ಪಡೆಗೊಂಡಿದ್ದಾರೆ. ಈವರೆಗೂ ನೆಗೆಟಿವ್ ಪಾತ್ರಗಳ ಮೂಲಕವೇ ಗಮನ ಸೆಳೆದಿರುವ ಗೌತಮ್, ಇಲ್ಲಿಯೂ ಅಂಥದ್ದೇ ಪಾತ್ರವನ್ನು ನಿಭಾಯಿಸಲಿದ್ದಾರೆ. ಸದ್ಯ ಬಿಡುಗಡೆ ಆಗಿರುವ ಫಸ್ಟ್ ಹ್ಯಾಂಡ್ ಲುಕ್ ರಗಡ್ ಆಗಿದೆ.​ ರಂಜಿತ್ ಜಯೆಕೊಡಿ ನಿರ್ದೇಶನದ ಚಿತ್ರವಿದು. ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲೂ ಸಿನಿಮಾ ಸಿದ್ಧವಾಗಲಿದೆ. ಮಾಸ್ ಆ್ಯಕ್ಷನ್ ಮತ್ತು ಕಮರ್ಷಿಯಲ್ ಅಂಶಗಳುಳ್ಳ ಸಿನಿಮಾ, ಸದ್ಯ ಚಿತ್ರೀಕರಣ ಪೂರ್ವ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.

ಇನ್ನಿತರೆ ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಎಲ್ಲವೂ ಅಂದುಕೊಂಡಂತೆಯೇ ಆದರೆ, ಡಿಸೆಂಬರ್​ನಿಂದ ಶೂಟಿಂಗ್ ಶುರುವಾಗಲಿದೆ. ವೆಂಕಟೇಶ್ವರ ಸಿನಿಮಾಸ್​ ಎಲ್ಎಲ್​ಪಿ, ಕರಣ್ ಸಿ ಪ್ರೊಡಕ್ಷನ್ಸ್ ಎಲ್​ಎಲ್​ಪಿ ಬ್ಯಾನರ್​ನಲ್ಲಿ ಭರತ್ ಚೌಧರಿ, ಪುಷ್ಕರ್ ರಾಮ್ ಮೋಹನ್ ರಾವ್ ಮೈಕಲ್ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಇನ್ನು ಈವರೆಗೂ ಕಂಟೆಂಟ್ ಬೇಸ್ಡ್​ ಮತ್ತು ಕಮರ್ಷಿಯಲ್ ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ನಟ ಸಂದೀಪ್ ಕಿಶನ್, ಈ ಚಿತ್ರದಲ್ಲಿ ಹಿಂದೆಂದೂ ಕಾಣಿಸದ ಲುಕ್​ನಲ್ಲಿ ಎದುರಾಗುತ್ತಿದ್ದಾರಂತೆ. ವಿಜಯ್ ಸೇತುಪತಿ, ಗೌತಮ್ ಮೆನನ್ ಅವರೊಂದಿಗೆ ತೆರೆ ಹಂಚಿಕೊಳ್ಳುವ ಮೂಲಕ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.

LEAVE A REPLY

Connect with

Please enter your comment!
Please enter your name here