ಅಪೂರ್ಣವಾದ ಅಭಿ ಹಾಗೂ ಜೂಲಿಯ ಪ್ರೇಮಕಥೆ. ಆನ್‌ಲೈನ್‌ ಗೇಮಿಂಗ್‌ ಪೈಪೋಟಿ, ಜೊತೆಗೆ ಸೈಕಾಲಜಿಸ್ಟ್‌ ವಿಜಯ್‌ ರಾಘವೇಂದ್ರ ಎಂಟ್ರಿ ಸಿನಿಮಾದ ಬಗ್ಗೆ ಇರುವ ಕುತೂಹಲ ಮತ್ತಷ್ಟು ಹೆಚ್ಚು ಮಾಡುತ್ತದೆ. ವಿಜಯ ರಾಘವೇಂದ್ರ ಅವರ ಅಕ್ಕನ ಮಗ ಜೈ ಈ ಸಿನಿಮಾದ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದ್ದಾರೆ.

ಸಸ್ಪೆನ್ಸ್‌ ಜೊತೆಗೆ ಥ್ರಿಲ್‌ ಕೊಡಲಿರುವ ಸಿನಿಮಾ ‘ಗ್ರೇ ಗೇಮ್ಸ್’. ಮೈಂಡ್ ಗೇಮ್ ಕುರಿತಾದ ಈ ಸಿನಿಮಾದ ಪೋಸ್ಟರ್‌ಗಳು ಈಗಾಗಲೇ ಸಿನಿಪ್ರಿಯರಲ್ಲಿ ಕುತೂಹಲ ಹುಟ್ಟಿಸಿವೆ. ವಿಜಯ್‌ ರಾಘವೇಂದ್ರ ಸಾಲು ಸಾಲು ಸಸ್ಪೆನ್ಸ್‌ ಸಿನಿಮಾಗಳಲ್ಲಿ ನಟಿಸುತ್ತಾ ರಂಜಿಸುತ್ತಿದ್ದಾರೆ. ‘ಕೇಸ್‌ ಆಫ್‌ ಕೊಂಡಾಣ’ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯಾಗಿ ನಟಿಸಿ ವೀಕ್ಷಕರ ಮನಸ್ಸು ಗೆದ್ದಿದ್ದ ಚಿನ್ನಾರಿ ಮುತ್ತ ಈಗ ಸೈಕಾಲಜಿಸ್ಟ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಯಾವುದೇ ಪಾತ್ರ ಕೊಟ್ಟರೂ ಅದರಲ್ಲಿ ಮುಳುಗಿ ನಟಿಸುವ ವಿಜಯ್‌ ರಾಘವೇಂದ್ರ ಈ ಸಲ ಸಖತ್‌ ಸ್ಮಾರ್ಟ್‌ ಆಗಿ ಕಾಣಿಸುತ್ತಿದ್ದಾರೆ. ಸಿನಿಮಾ ರಿಲೀಸ್‌ ದಿನಾಂಕ ಹತ್ತಿರವಾಗುತ್ತಿದ್ದಂತೆಯೇ ಆನಂದ್ ಆಡಿಯೋ ಮೂಲಕ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಎಸ್ ಎ ಚಿನ್ನೇಗೌಡ, ಅಶ್ವಿನಿ ಪುನೀತ್ ರಾಜಕುಮಾರ್, ಶ್ರೀಮುರಳಿ, ವೀಣಾ ಮುಂತಾದ ಗಣ್ಯರು ಸೇರಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದು, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಅಪೂರ್ಣವಾದ ಅಭಿ ಹಾಗೂ ಜೂಲಿಯ ಪ್ರೇಮಕಥೆ. ಆನ್‌ಲೈನ್‌ ಗೇಮಿಂಗ್‌ ಪೈಪೋಟಿ, ಜೊತೆಗೆ ಸೈಕಾಲಜಿಸ್ಟ್‌ ವಿಜಯ್‌ ರಾಘವೇಂದ್ರ ಎಂಟ್ರಿ ಸಿನಿಮಾದ ಬಗ್ಗೆ ಇರುವ ಕುತೂಹಲ ಮತ್ತಷ್ಟು ಹೆಚ್ಚು ಮಾಡುತ್ತದೆ. ಆನಂದ್ ಮುಗದ್ ನಿರ್ಮಿಸಿರುವ ಈ ಸಿನಿಮಾಗೆ ಪ್ರಶಸ್ತಿ ವಿಜೇತ ‘ಆಯನ’ ಚಿತ್ರದ ಖ್ಯಾತಿಯ ಗಂಗಾಧರ್ ಸಾಲಿಮಠ ನಿರ್ದೇಶನದ ಮಾಡಿದ್ದಾರೆ. ಈ ಚಿತ್ರದ ಮೂಲಕ ವಿಜಯ ರಾಘವೇಂದ್ರ ಅವರ ಸೋದರ ಅಳಿಯ ಜೈ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಶೃತಿ ಪ್ರಕಾಶ್, ಭಾವನ ರಾವ್, ಇಶಿತಾ, ರವಿ ಭಟ್, ಅಪರ್ಣ ವಸ್ತಾರೆ, ರವಿ ಭಟ್ ತಾರಾಬಳಗದಲ್ಲಿದ್ದಾರೆ. ಬಹು ನಿರೀಕ್ಷಿತ ಈ ಸಸ್ಪೆನ್ಸ್‌ ಥ್ರಿಲ್ಲರ್‌ ಮೇ 10ರಂದು ತೆರೆಗಪ್ಪಳಿಸಲಿದೆ.

‘ಈ ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ನನ್ನ ಅಣ್ಣ ರಾಘು ತುಂಬಾ ಸ್ಮಾರ್ಟ್ ಆಗಿ ಕಾಣುತ್ತಿದ್ದಾನೆ‌. ನಾವು ಬೆಳೆಸಿದ ಅಕ್ಕನ ಮಗ ಜೈ ಕೂಡ ಈ ಚಿತ್ರದಲ್ಲಿ ನಟಿಸಿರುವುದು ಖುಷಿಯಾಗಿದೆ. ಚಿತ್ರ ಯಶಸ್ವಿಯಾಗಲಿ’ ಎಂದು ಶ್ರೀಮುರಳಿ ಹಾರೈಸಿದ್ದಾರೆ. ‘ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಟ್ರೇಲರ್ ನಾನು ಕೂಡ ಇವತ್ತೇ ನೋಡಿದ್ದು, ಚೆನ್ನಾಗಿದೆ. ಈ ಸಮಯದಲ್ಲಿ ನಾನು ಪುನೀತ್ ರಾಜಕುಮಾರ್ ಹಾಗೂ ನನ್ನ ಪತ್ನಿ ಸ್ಪಂದನ ಅವರನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಅಕ್ಕನ ಮಗ ಜೈ ಕಂಡರೆ ಸ್ಪಂದನಾಗೆ ಬಹಳ ಪ್ರೀತಿ‌.‌ ಇಂದು ಸ್ಪಂದನ ಇದ್ದಿದ್ದರೆ ಬಹಳ ಖುಷಿ ಪಡುತ್ತಿದ್ದರು’ ಎಂದಿದ್ದಾರೆ ವಿಜಯ ರಾಘವೇಂದ್ರ.

ನಿರ್ದೇಶಕ ಗಂಗಾಧರ್ ಸಾಲಿಮಠ ಮಾತನಾಡಿ, ‘ಇದೊಂದು ಮೈಂಡ್ ಗೇಮ್ ಕುರಿತಾದ ಚಿತ್ರ ಕನ್ನಡದಲ್ಲಿ ಇದು ಅಪರೂಪ ಕಥೆ ಎನ್ನಬಹುದು. ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡು ಮೆಚ್ಚುಗೆ ಪಡೆದು ಕೊಂಡಿರುವ ಈ ಚಿತ್ರ ಮುಂದಿನ ವಾರ ತೆರೆಗೆ ಬರುತ್ತಿದೆ. ಈ ಚಿತ್ರ ಉತ್ತಮವಾಗಿ ಬರಲು ಎಲ್ಲ ಕಲಾವಿದರ ಹಾಗೂ ತಂತ್ರಜ್ಞರ ಶ್ರಮವಿದೆ’ ಎಂದ ಅವರು ಚಿತ್ರತಂಡದ ಸದಸ್ಯರನ್ನು ಪರಿಚಯಿಸಿದರು.

LEAVE A REPLY

Connect with

Please enter your comment!
Please enter your name here